ಕೇಂದ್ರದ ನೆರವು ಸಿಗುವ ವಿಶ್ವಾಸವಿದೆ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಅ.16: ಕೇಂದ್ರ ಸರಕಾರದಿಂದ ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಹಳೆಯ ಬಾಕಿ ಬರಬೇಕಿದ್ದು, ಈ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಇಂದು ಕೇಂದ್ರ ಗೃಹ ಸಚಿವರ ಜೊತೆಯೂ ಮಾತನಾಡಿದ್ದೇನೆ. ಅವರು ಇಂದು ಹಾಗೂ ನಾಳೆ ಸಭೆ ಇದೆ, ಶೀಘ್ರವೆ ಹಣ ಬಿಡುಗಡೆ ಮಾಡುವುದಾಗಿ ಭರವಸೆ ಕೊಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಕಳೆದ ವರ್ಷದ ನೆರೆ ಹಾಗೂ ಅತಿವೃಷ್ಠಿಯಿಂದ ಉಂಟಾಗಿದ್ದ ನಷ್ಟಕ್ಕೆ 8 ಸಾವಿರ ಕೋಟಿ ರೂ.ಪರಿಹಾರ ನೀಡುವಂತೆ ಕೋರಿ ರಾಜ್ಯ ಸರಕಾರವು ಕೇಂದ್ರ ಸರಕಾರಕ್ಕೆ ಮನವಿ ಮಾಡಿತ್ತು.
Next Story





