ಎಫ್‍ಐಆರ್ ರದ್ದು ಕೋರಿ ಆದಿತ್ಯ ಆಳ್ವ ಅರ್ಜಿ: ಸಿಸಿಬಿ ಪೊಲೀಸರಿಂದ ಹೈಕೋರ್ಟ್ ಗೆ ಆಕ್ಷೇಪಣೆ ಸಲ್ಲಿಕೆ
ಡ್ರಗ್ಸ್ ದಂಧೆ ಪ್ರಕರಣ

ಬೆಂಗಳೂರು, ಅ.16: ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ಪ್ರಕರಣ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದು ಕೋರಿ ಆದಿತ್ಯ ಆಳ್ವ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಗೆ ಸಿಸಿಬಿ ಪೊಲೀಸರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ವಿಚಾರಣೆ ಒಂದು ವಾರ ಕಾಲ ಮುಂದೂಡಲಾಗಿದೆ.
ಡ್ರಗ್ಸ್ ಜಾಲ ಪ್ರಕರಣದಲ್ಲಿ ಆರನೇ ಆರೋಪಿಯಾಗಿರುವ ಆದಿತ್ಯ ಆಳ್ವ ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು.
ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠವು ಪ್ರತಿವಾದಿಗಳಾದ ಕಾಟನ್‍ಪೇಟೆ ಠಾಣೆ ಪೊಲೀಸ್ ಇನ್‍ಸ್ಪೆಕ್ಟರ್, ದೂರುರಾರರಾದ ಕೇಂದ್ರ ಅಪರಾಧ ವಿಭಾಗದ ಎಸಿಪಿ ಕೆ.ಸಿ.ಗೌತಮ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು.
ಅಲ್ಲದೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದ್ದರಿಂದ ಶುಕ್ರವಾರ ಸಿಸಿಬಿ ಪೊಲೀಸರು ನ್ಯಾಯಪೀಠಕ್ಕೆ ಆಕ್ಷೇಪಣೆ ಸಲ್ಲಿಕೆ ಮಾಡಿದರು. ನ್ಯಾಯಪೀಠವು ವಕೀಲರ ವಾದವನ್ನು ಆಲಿಸಿ ವಿಚಾರಣೆಯನ್ನು ಒಂದು ವಾರಗಳ ಕಾಲ ಮುಂದೂಡಿತು.
Next Story





