ದ.ಕ. ಜಿಲ್ಲೆ : ಕೋವಿಡ್‌ಗೆ ಐವರು ಬಲಿ, 220 ಮಂದಿಗೆ ಕೊರೋನ ಸೋಂಕು

ಮಂಗಳೂರು, ಅ.16: ದ.ಕ. ಜಿಲ್ಲೆಯಲ್ಲಿ ಕೊರೋನದಿಂದ ಮತ್ತೆ ಐವರು ಮೃತಪಟ್ಟಿದ್ದಾರೆ. ಈ ನಡುವೆ ಶುಕ್ರವಾರ 220 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕೊರೋನದಿಂದಾಗಿ ಮೃತಪಟ್ಟವರ ಸಂಖ್ಯೆ 624ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆಯೂ 27,959ಕ್ಕೆ ಏರಿಕೆ ಕಂಡಿದೆ. ಶುಕ್ರವಾರ 391 ಮಂದಿ ಗುಣಮುಖರಾಗುವುದರೊಂದಿಗೆ ಜಿಲ್ಲೆಯಲ್ಲಿ 23,804 ಮಂದಿ ಕೊರೋನದಿಂದ ಮುಕ್ತರಾಗಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ 3,531 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಬುಲೆಟಿನ್ ತಿಳಿಸಿದೆ.
Next Story





