ಅ.18ರಂದು ಇಂದ್ರಾಣಿ ಅತಿಥಿಗೃಹದ ಉದ್ಘಾಟನೆ
ಉಡುಪಿ, ಅ.16: ಇಂದ್ರಾಳಿಯ ಇಂದ್ರಾಣಿ ಶ್ರೀಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತಜನರ ಅನುಕೂಲಕ್ಕಾಗಿ ದಾನಿಗಳ ಸಹಯೋಗದೊಂದಿಗೆ ನೂತನವಾಗಿ ನಿರ್ಮಾಣವಾದ ಇಂದ್ರಾಣಿ ಅತಿಥಿಗೃಹದ ಉದ್ಘಾಟನಾ ಸಮಾರಂಭವು ಅ.18ರಂದು ಬೆಳಗ್ಗೆ 10:30ಕ್ಕೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಭಾಗವಹಿಸಲಿರುವರು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





