Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ಸೋಂಕು ತಡೆಗೆ ಸರಳ ಮಾರ್ಗಸೂಚಿ...

ಕೊರೋನ ಸೋಂಕು ತಡೆಗೆ ಸರಳ ಮಾರ್ಗಸೂಚಿ ಅನುಸರಿಸಿ: ಉಡುಪಿ ಡಿಸಿ

ವಾರ್ತಾಭಾರತಿವಾರ್ತಾಭಾರತಿ16 Oct 2020 9:18 PM IST
share
ಕೊರೋನ ಸೋಂಕು ತಡೆಗೆ ಸರಳ ಮಾರ್ಗಸೂಚಿ ಅನುಸರಿಸಿ: ಉಡುಪಿ ಡಿಸಿ

ಉಡುಪಿ, ಅ.16: ಕೋವಿಡ್ ಸೋಂಕಿನಿಂದ ದೂರವಿರಲು ಸರಳ ಮಾರ್ಗೋಪಾಯಗಳಾದ ಮುಖಗವಸು ಧರಿಸುವುದು, ಸುರಕ್ಷತಾ ಅಂತರ ಕಾಪಾಡುವುದು, ಕೈತೊಳೆಯುವುದು ಸೇರಿದಂತೆ ಶುಚಿತ್ವ ಕಾಪಾಡಿದಾಗ ಮಾತ್ರ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಕೋವಿಡ್-19 ರೋಗ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಸಂಬಂಧಿಸಿ ಕೋವಿಡ್-19 ತೀವ್ರ ಪ್ರಚಾರಾಂದೋಲನ ಕಾರ್ಯಕ್ರಮ ಅನುಷ್ಟಾನದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ರೋಗ ಬಂದು ಅದಕ್ಕೆ ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಒಳಿತು. ಕೊರೋನ ರೋಗದಿಂದ ದೂರ ಉಳಿಯಲು ಸಾರ್ವಜನಿಕರು ಸುಲಭ ಮಾರ್ಗೋಪಾಯಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಆಗಾಗ ಕೈ ತೊಳೆಯುವುದು ಸೇರಿದಂತೆ ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಿ ಅವುಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದರು.

ಸರಕಾರಿ ನೌಕರರು ಕೋವಿಡ್ ಪ್ರತಿಜ್ಞೆ ಸ್ವೀಕರಿಸಿ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವುದರೊಂದಿಗೆ ಜನಸಾಮಾನ್ಯರಿಗೆ ಮಾದರಿಯಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗಳು ಮೇಲೆ ತಿಳಿಸಿದ ಮಾರ್ಗಸೂಚಿಯನ್ನು ಪಾಲಿಸುವ ರೀತಿಯಲ್ಲಿ ಕೋವಿಡ್-19 ಜನಜಾಗೃತಿ ಅಂದೋಲನ ವನ್ನು ನಡೆಸಬೇಕು ಎಂದರು.

ಸರಕಾರದ ಎಲ್ಲಾ ಇಲಾಖೆಗಳ ಕಾರ್ಯಕ್ರಮ ನಡೆಯುವಾಗ ಕೋವಿಡ್ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಅಲ್ಲದೇ ದೈನಂದಿನ ಕೆಲಸ-ಕಾರ್ಯಗಳ ಪತ್ರದಲ್ಲಿಯೂ ಕೊರೋನಾ ಜಾಗೃತಿ ಮೂಡಿಸುವ ಬಗ್ಗೆ ನಮೂದಿಸಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಅಂಗಡಿ-ಮುಂಗಟ್ಟು, ಹೋಟೆಲ್‌ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಲಕರು ಮತ್ತು ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಮಾಸ್ಕ್ ಧರಿಸದೇ ಇರುವುದು ಕಂಡು ಬರುತ್ತಿದ್ದು, ಅವರುಗಳಿಗೆ ತಿಳಿ ಹೇಳಬೇಕು. ಅದನ್ನು ಪಾಲಿಸದೇ ಇದ್ದಲ್ಲಿ ತಾತ್ಕಾಲಿಕವಾಗಿ ಅಂಗಡಿ ಪರವಾನಿಗೆಯನ್ನು ರದ್ದುಪಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಸ್ಸುಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ತಪ್ಪದೇ ಮಾಸ್ಕ್‌ಗಳನ್ನು ಧರಿಸುವಂತೆ ಬಸ್ಸಿನ ನಿರ್ವಾಹಕರು ಎಚ್ಚರವಹಿಸಬೇಕು. ಸಾರ್ವಜನಿಕರು ಓಡಾಡುವ ಬಸ್ಸುಗಳನ್ನು ಪ್ರತೀ ದಿನ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು ಎಂದರು.

ಜಿಲ್ಲೆಯ ಪ್ರತಿಯೊಂದು ದೇವಸ್ಥಾನದಲ್ಲಿ ಹಾಗೂ ಪ್ರೇಕ್ಷಣಿಯ ಸ್ಥಳಗಳಲ್ಲಿ ಬರುವ ಪ್ರವಾಸಿಗರು ಮುಖಗವಸು ಹಾಕದಿದ್ದಲ್ಲಿ ಅವರ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೋವಿಡ್-19 ತಡೆಗೆ ಸರಕಾರವು ನೀಡಿರುವ ಮಾರ್ಗಸೂಚಿಗಳನ್ನು ನಿರ್ಲಕ್ಷಿಸಿ ಜನಸಾಮಾನ್ಯರು ಓಡಾಡುತ್ತಿದ್ದರೆ ಅಂಥವರ ವಿರುದ್ಧ ದಂಡ ಶುಲ್ಕವನ್ನು ವಿಧಿಸಬೇಕೆಂದು ಸೂಚನೆ ನೀಡಿದರು.

ಶಾಲೆಗಳ ಆನ್‌ಲೈನ್ ತರಗತಿಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಕೊರೋನಾ ಸೋಂಕು ತಡೆಯುವ ಮಾರ್ಗಸೂಚಿಯನ್ನು ಬೋಧಿಸಬೇಕು. ಅಲ್ಲದೇ ಪೋಷಕರು ಸೇರಿದಂತೆ ನೆರೆಹೊರೆಯವರಿಗೆ ವಿದ್ಯಾರ್ಥಿಗಳಿಂದ ಜಾಗೃತಿ ಮೂಡಿಸುವ ಕೆಲಸವಾಗಬೇಕೆಂದು ತಿಳಿಸಿದರು.

ಮಲ್ಪೆ ಹಾಗೂ ಗಂಗೊಳ್ಳಿಯ ಬಂದರಿನ ಮೀನು ಮಾರುಕಟ್ಟೆ, ಎಪಿಎಂಸಿ ಮಾರುಕಟ್ಟೆಗಳಲ್ಲಿ ಜನರು ಸುರಕ್ಷತಾ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಸುವ ಕೆಲಸವಾಗಬೇಕಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಪಂನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X