ಬಿ.ಕೆ.ಹರಿಪ್ರಸಾದ್ ಆರೋಪ ನಿರಾಧಾರ: ಉಡುಪಿ ಡಿಸಿ ಜಗದೀಶ್
ಉಡುಪಿ : ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಆಗಿರುವ ತಪ್ಪುಗಳಿಗೆ ಜಿಲ್ಲಾಡಳಿತ ಸಹಕಾರ ನೀಡುತ್ತಿದೆ ಎಂಬ ಕಾಂಗ್ರೆಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾಡಿರುವ ಆರೋಪ ಆಧಾರರಹಿತ ವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರತಿಕ್ರಿಯಿಸಿದ್ದಾರೆ.
ಉಡುಪಿ ಜಿಪಂ ಕಚೇರಿ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಚುನಾವಣಾ ಆಯೋಗ ಸ್ವತಂತ್ರವಾಗಿ ಮತದಾರರ ಪಟ್ಟಿಯನ್ನು ತಯಾರಿಸುತ್ತದೆ. ಅಂತಿಮ ಗೊಳಿಸಿ ಜಿಲ್ಲಾಡಳಿತಕ್ಕೆ ಕಳುಹಿಸುವ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡಲು ಆಗುವುದಿಲ್ಲ. ಕೆಲವು ಕುಟುಂಬದವರ ಗುರುತಿನ ಚೀಟಿಯಲ್ಲಿ ಆಗಿರುವ ತಪ್ಪನ್ನು ಅರ್ಜಿ ಸಲ್ಲಿಸಿ ಸರಿಪಡಿಸಲು ಅವಕಾಶ ಇದೆ ಎಂದು ಸ್ಪಷ್ಟಪಡಿಸಿದರು.
Next Story





