Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ...

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ

ವಾರ್ತಾಭಾರತಿವಾರ್ತಾಭಾರತಿ16 Oct 2020 9:48 PM IST
share
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಕ್ಷಣಗಣನೆ

ಮೈಸೂರು,ಅ.16: ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಅ.17ರ ಶನಿವಾರ ಉದ್ಘಾಟನೆಗೊಳ್ಳಲಿರುವ ದಸರಾ ಕಾರ್ಯಕ್ರಮಕ್ಕೆ ಕ್ಷಣಗಣಗೆ ಆರಂಭವಾಗಿದ್ದು, ಅಂತಿಮ ಸಿದ್ಧತೆಗಳನ್ನು ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಪರಿಶೀಲನೆ ನಡೆಸಿದರು.

ವೇದಿಕೆ ಹಾಗೂ ವೇದಿಕೆ ಮುಂಭಾಗದಲ್ಲಿ ಮಾಡಲಾಗಿರುವ ವ್ಯವಸ್ಥೆಗಳು, ಆಸನ ವ್ಯವಸ್ಥೆಗಳನ್ನು ಶುಕ್ರವಾರ ಪರಿಶೀಲನೆ ನಡೆಸಿದ ಸಚಿವರು, ಬಳಿಕ ಬೆಳ್ಳಿ ಪಲ್ಲಕ್ಕಿಯನ್ನು ವೀಕ್ಷಿಸಿ ಶ್ರೀಚಾಮುಂಡೇಶ್ವರಿ ಸನ್ನಿಧಿಯ ಪ್ರಧಾನ ಅರ್ಚಕರಿಂದ ಮಾಹಿತಿ ಪಡೆದುಕೊಂಡರು. ಡಿಸಿಪಿ ಗೀತಾಪ್ರಸನ್ನ ಅವರು ಸಿದ್ಧತೆಗಳು ಸೇರಿದಂತೆ ಕಾರ್ಯಕ್ರಮದಲ್ಲಿ ಕೈಗೊಳ್ಳಲಾದ ಭದ್ರತಾ ವ್ಯವಸ್ಥೆಗಳ ಬಗ್ಗೆ ಸಚಿವರಾದ ಸೋಮಶೇಖರ್ ಅವರ ಗಮನಕ್ಕೆ ತಂದರು.

ಸಾರ್ವಜನಿಕರ ಸಹಕಾರ ಬೇಕು: ತಜ್ಞರ ತಂಡ ಸೂಚನೆ ನೀಡಿದಂತೆ 200 ಜನರಿಗೆ ಅವಕಾಶ ನೀಡಲಾಗಿದೆ. ಅದೇ ರೀತಿ ವಿಶಾಲವಾಗಿ ವೇದಿಕೆಯನ್ನು ನಿರ್ಮಾಣ ಮಾಡಲಾಗಿದೆ. ಇದಕ್ಕಿಂತ ಹೆಚ್ಚು ಮಂದಿಯನ್ನು ಕಾರ್ಯಕ್ರಮಕ್ಕೆ ಆಮಂತ್ರಣ ಮಾಡಿಲ್ಲ. 35 ವಿವಿಐಪಿಗಳಿಗೆ ಒಂದು ಕಡೆ ಆಸನ ವ್ಯವಸ್ಥೆ ಮಾಡಲಾಗಿದೆ. ಮಾಧ್ಯಮದವರಿಗೂ ವ್ಯವಸ್ಥೆ ಮಾಡಲಾಗಿದೆ. ಆದರೆ, ಕಡಿಮೆ ಜನಕ್ಕೆ ಮಾತ್ರ ಅವಕಾಶ ನೀಡಿದ್ದರಿಂದ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಸಚಿವರು ತಿಳಿಸಿದರು.

ಸಂಜೆ 7ರಿಂದ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನಪರಿಷತ್ ಸಭಾಪತಿಗಳಾದ ಪ್ರತಾಪ್ ಚಂದ್ರ ಶೆಟ್ಟಿ ಭಾಗವಹಿಸಲಿದ್ದಾರೆ. ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರನ್ನು ಹೊರತುಪಡಿಸಿದರೆ ಉಳಿದ ಸಚಿವರು ಕೋವಿಡ್ ಹಿನ್ನೆಲೆಯಲ್ಲಿ ಬರುತ್ತಿಲ್ಲ ಎಂದು ಸಚಿವರಾದ ಸೋಮಶೇಖರ್ ಮಾಹಿತಿ ನೀಡಿದರು.

ಲೈವ್ ಮೂಲಕ ವೀಕ್ಷಣೆಗೆ ಮನವಿ: ಸಾರ್ವಜನಿಕರ ಸಹಕಾರವನ್ನು ನಾವು ಈ ಕೋವಿಡ್ ಸಂದರ್ಭದಲ್ಲಿ ಕೋರುತ್ತಿದ್ದೇವೆ. ಕಾರ್ಯಕ್ರಮವನ್ನು ಲೈವ್ ಮುಖಾಂತರ ನೀಡಲಾಗುತ್ತಿರುವುದರಿಂದ ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ವೀಕ್ಷಣೆ ಮಾಡಬೇಕು ಎಂದು ನಾನು ಮನವಿ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಹೊರಗಡೆ ಗುಂಪು ಗುಂಪಾಗಿ ಕಾಣಿಸಿಕೊಳ್ಳಬಾರದು. ಒಟ್ಟಾಗಿ ನಿಂತು ಸೆಲ್ಫೀ ತೆಗೆದುಕೊಳ್ಳುವಂತಹ ಕ್ರಮಕ್ಕೂ ಬ್ರೇಕ್ ಹಾಕಲಾಗಿದೆ ಎಂದು ಸಚಿವರು ತಿಳಿಸಿದರು.

ಮುಂದಿನ ಬಾರಿ ವಿಜೃಂಭಣೆಯ ದಸರಾ: ಪ್ರಸಕ್ತ ಸಾಲಿನಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಸರಳವಾಗಿ ಆಚರಿಸುವ ತೀರ್ಮಾನಕ್ಕೆ ಬಂದಿದ್ದೇವೆ. ಕೋವಿಡ್ ಗೆ ಯಾವುದೇ ಲಸಿಕೆಯೂ ಇನ್ನೂ ತಯಾರಾಗದ ಹಿನ್ನೆಲೆಯಲ್ಲಿ ಹೆಚ್ಚು ಜನರನ್ನು ಸೇರಿಸಲು ಆಗದು. ಹೀಗಾಗಿ ಮುಂದಿನ ದಿನಗಳಲ್ಲಿ ಪ್ರಾಯೋಗಿಕ ಹಂತದಲ್ಲಿರುವ ಲಸಿಕೆ ಮಾರುಕಟ್ಟೆ ಪ್ರವೇಶಿಸಲಿದೆ. ಆದ್ದರಿಂದ ಮುಂದಿನ ದಸರಾವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಈ ವೇಳೆ ಶಾಸಕರಾದ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷರಾದ ಎಚ್.ವಿ.ರಾಜೀವ್ ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X