Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಬಿಸಿಎಸ್ ಪದ್ಧತಿ ಕನ್ನಡ ಪ್ರಾಧ್ಯಾಪಕರ...

ಸಿಬಿಸಿಎಸ್ ಪದ್ಧತಿ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕ: ಟಿ.ಎಸ್.ನಾಗಾಭರಣ

ವಾರ್ತಾಭಾರತಿವಾರ್ತಾಭಾರತಿ16 Oct 2020 10:29 PM IST
share
ಸಿಬಿಸಿಎಸ್ ಪದ್ಧತಿ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕ: ಟಿ.ಎಸ್.ನಾಗಾಭರಣ

ಬೆಂಗಳೂರು, ಅ.16: ಸಿಬಿಸಿಎಸ್ ಪದ್ಧತಿಯಿಂದಾಗಿ ಕನ್ನಡ ಭಾಷಾ ಬೋಧನೆಯ ಕಾರ್ಯಭಾರ ಕಡಿಮೆಯಾಗಿರುವ ಪರಿಣಾಮ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕವಾಗಿದ್ದು, ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವತ್ಥ ನಾರಾಯಣಗೆ ಮನವಿ ಮಾಡಿದ್ದಾರೆ.

ಯುಜಿಸಿ ಜಾರಿಗೆ ತರಲಾಗಿರುವ ಸಿಬಿಸಿಎಸ್ ಪದ್ಧತಿಯ ಅನುಷ್ಠಾನದಲ್ಲಾದ ಗೊಂದಲಗಳ ಬಗ್ಗೆ ಈಗಾಗಲೇ 2-3 ಬಾರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸಂಬಂಧಪಟ್ಟ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಪತ್ರ ಬರೆಯಲಾಗಿದ್ದರೂ ಸಹ ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಸಿಬಿಸಿಎಸ್ ಪದ್ಧತಿಯ ಮಾರ್ಗಸೂಚಿ ಮಾದರಿಗಳನ್ನೇ ಕಾನೂನುಬದ್ಧ ಕ್ರಮ ಎಂಬ ರೀತಿಯಲ್ಲಿ ಭಾವಿಸಿಕೊಂಡು ಇಂಗ್ಲಿಷ್ ಭಾಷೆ ಕಡ್ಡಾಯಗೊಳಿಸಿ ಕನ್ನಡ ಭಾಷಾ ವಿಷಯದ ಬೋಧನಾ ಕಾರ್ಯಭಾರವನ್ನು ಕಡಿತಗೊಳಿಸಿರುವುದರಿಂದ ಕನ್ನಡ ಪ್ರಾಧ್ಯಾಪಕರು ತೊಂದರೆಗೆ ಸಿಲುಕುವಂತಾಗಿದೆ ಎಂದು ಉಪಮುಖ್ಯಮಂತ್ರಿಗಳಿಗೆ ಬರೆಯಲಾಗಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೃಪಾಂಕಗಳನ್ನು ನೀಡುವಾಗಲೂ ಸಹ ಕನ್ನಡ ಭಾಷೆಗೆ ಕಡಿಮೆ ಕೃಪಾಂಕಗಳನ್ನು ನೀಡುವ ಮೂಲಕ ಭಾಷಾ ವಿಷಯದಲ್ಲಿ ತಾರತಮ್ಯವನ್ನು ಎಸಗಿವೆ. ಇದರಿಂದಾಗಿ ಕನ್ನಡದ ನೆಲದಲ್ಲಿಯೇ ಕನ್ನಡಕ್ಕೆ ಅನಾಥ ಪ್ರಜ್ಞೆ ಕಾಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯಭಾಷಾ ಅಧಿನಿಯಮ 1963 ಹಾಗೂ ರಾಜ್ಯ ಸರಕಾರಗಳು ಕಾಲಕಾಲಕ್ಕೆ ಹೊರಡಿಸಿದ ಕನ್ನಡಪರ ಆಜ್ಞೆ, ಆದೇಶಗಳು ಕರ್ನಾಟಕದಲ್ಲಿ ಕನ್ನಡವನ್ನು ಸಾರ್ವಭೌಮ ಭಾಷೆಯಾಗಿ ಘೋಷಿಸಿದೆ. ಆದರೆ ಸಿಬಿಸಿಎಸ್ ಪದ್ಧತಿಯಿಂದಾಗಿ ಕನ್ನಡ ಭಾಷಾ ಬೋಧನೆಯ ಕಾರ್ಯಭಾರ ಕಡಿಮೆಯಾಗಿ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕವಾಗಿರುವುದರಿಂದ ಸಿಬಿಸಿಎಸ್ ಪದ್ಧತಿಯ ಅನುಷ್ಠಾನದಲ್ಲಿ ಕನ್ನಡ ಭಾಷಾ ಬೋಧನೆಯನ್ನು ಕಡ್ಡಾಯಗೊಳಿಸಿ ಆದೇಶಿಸುವಂತೆ ನಾಗಾಭರಣ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X