ಲಾ ಕ್ಲರ್ಕ್, ರೀಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಅ. 16: ಪ್ರತಿಭಾವಂತ ಕಾನೂನು ಪದವೀಧರರಿಗೆ, ಕಾನೂನು ವೃತ್ತಿಗೆ ಸೇರ್ಪಡೆ, ಕಾನೂನು ತಕರಾರು ಅರ್ಜಿಗಳ ವಿವಿಧ ರೂಪಗಳು, ಕಾನೂನಿನ ವಿವಿಧ ಶಾಖೆಗಳು ಮತ್ತು ನ್ಯಾಯಾಲಯದ ಕಾರ್ಯವಿಧಾನಗಳ ಪರಿಚಯ ಹಾಗೂ ನವ ಕಾನೂನು ಪದವೀಧರರಿಗೆ ಉತ್ತೇಜನ ನೀಡುವ ಸಲುವಾಗಿ ಕಾನೂನಿನಲ್ಲಿ ಪದವಿ, ಗಣಕಯಂತ್ರ ತರಬೇತಿ ಹೊಂದಿರುವಂತಹ ಅಭ್ಯರ್ಥಿಗಳಿಂದ 33 ಲಾ ಕ್ಲರ್ಕ್ ಮತ್ತು ರೀಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್ನಲ್ಲಿ ನೋಂದಾಯಿಸಿರಬೇಕು ಹಾಗೂ ಅರ್ಜಿದಾರರ ವಯಸ್ಸು ಅರ್ಜಿ ಸಲ್ಲಿಸುವ ಕೊನೆಯ ದಿನದಂದು 30 ವರ್ಷಗಳನ್ನು ಮೀರಿರಬಾರದು. ಅರ್ಜಿ ಸಲ್ಲಿಸಲು ನ.17 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ವಿಳಾಸ: www.karnatakajudiciary.kar.nic.in ಹಾಗೂ ಹೈಕೋರ್ಟ್ ಬೆಂಗಳೂರು ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಲಾಗಿದೆ.
Next Story