Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷಿಯಲ್ಲಿ ಪರಿಸರ ಸ್ನೇಹಿ ಆವಿಷ್ಕಾರಕ್ಕೆ...

ಕೃಷಿಯಲ್ಲಿ ಪರಿಸರ ಸ್ನೇಹಿ ಆವಿಷ್ಕಾರಕ್ಕೆ ಕೇಂದ್ರ ಸಚಿವ ಸದಾನಂದ ಗೌಡ ಕರೆ

‘ಸಿಐಐ ಎಗ್ರೋ ಮತ್ತು ಫುಡ್ ಟೆಕ್ 2020’ ವರ್ಚುವಲ್ ಕಾನ್ಫರೆನ್ಸ್ ನಲ್ಲಿ ಭಾಗಿ

ವಾರ್ತಾಭಾರತಿವಾರ್ತಾಭಾರತಿ17 Oct 2020 10:22 PM IST
share

ಬೆಂಗಳೂರು, ಅ.17: ಕೃಷಿ ಕ್ಷೇತ್ರದಲ್ಲಿ ನಿರಂತರವಾಗಿ ಆವಿಷ್ಕಾರಗಳು ನಡೆಯುತ್ತಿರಬೇಕು. ಆದರೆ ಅವು ಪರಿಸರ ಸ್ನೇಹಿಯಾಗಿರಬೇಕು. ಬೇಸಾಯ ಸುಸ್ಥಿರವಾಗಿರಬೇಕು ಎಂದಾದರೆ ರೈತರು ರಸಗೊಬ್ಬರ ಬಳಕೆಯನ್ನು ಕಡಿಮೆ ಮಾಡಿ ಸಾವಯವ ಕೃಷಿಗೆ ಒತ್ತು ನೀಡಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಕರೆ ನೀಡಿದ್ದಾರೆ.

ಭಾರತೀಯ ಕೈಗಾರಿಕೆಗಳ ಒಕ್ಕೂಟವು (ಸಿಐಐ) ಆಶ್ರಯದಲ್ಲಿ ಸಂಘಟಿಸಲಾಗಿರುವ ‘ಸಿಐಐ ಎಗ್ರೋ ಮತ್ತು ಫುಡ್ ಟೆಕ್ 2020’ ವರ್ಚುವಲ್ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡಿದ ಸದಾನಂದ ಗೌಡ, ದೀರ್ಘಕಾಲದವರೆಗೆ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳಲು ಸಾವಯವ ಕೃಷಿ ಅನಿವಾರ್ಯ ಎಂದರು.

ರೈತರಿಗೆ ಬೇಸಾಯ ಮಾಡುವಲ್ಲಿ ಬೇಕಾದ ಬೀಜ, ಗೊಬ್ಬರ ನೀರು ಮುಂತಾದ ಮೂಲಸಾಮಗ್ರಿಗಳು ಹಾಗೂ ಬೇಸಾಯವನ್ನು ಸುಲಭಗೊಳಿಸುವ ತಂತ್ರಜ್ಞಾನನ್ನು ಒದಗಿಸುವಲ್ಲಿ  ಸರಕಾರದೊಂದಿಗೆ ಖಾಸಗಿ ಕಂಪನಿಗಳು ಸಕ್ರೀಯವಾಗಿ ಕೈಜೋಡಿಸುವುದು ಅವಶ್ಯಕವಾಗಿದೆ. ಕೃಷಿಗೆ ಪೂರಕ ವಾತಾವರಣ ಮೂಡಿಸುವ ಹೊಣೆಗಾರಿಕೆ ಸರಕಾರ ಹಾಗೂ ಖಾಸಗಿ ವಲಯಗಳೆರಡರ ಮೇಲೂ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಎಲ್ಲ ಅನಾನುಕೂಲ ವಾತಾವರಣಗಳ ಮಧ್ಯೆಯೂ ಕೃಷಿ ವಲಯವು ಉತ್ತಮ ಪ್ರಗತಿ ಸಾಧಿಸುತ್ತಿದೆ. ಈ ಬಾರಿ, ಸಕಾಲದಲ್ಲಿ ಬಂದ ಉತ್ತಮ ಮಳೆಯಿಂದ ಬಿತ್ತನೆ ಪ್ರದೇಶ ಬಹಳಷ್ಟು ಹೆಚ್ಚಾಗಿದೆ. ಹೀಗಾಗಿ ರಸಗೊಬ್ಬರ ಬೇಡಿಕೆಯಲ್ಲೂ ಹೆಚ್ಚಾಗಿದೆ. ಆದರೆ ನಮ್ಮ ಇಲಾಖೆಯು ಉತ್ಪಾದನೆ, ಸಾಗಣೆಗೆ ಸಂಬಂಧಿಸಿದಂತೆ ಸಕಾಲದಲ್ಲಿ ಕೈಗೊಂಡ ಕ್ರಮಗಳಿಂದಾಗಿ ದೇಶಾದ್ಯಂತ ಅತ್ಯಂತ ಸಮರ್ಪಕವಾಗಿ ರಸಗೊಬ್ಬರ ಪೂರೈಕೆ ನಡೆಯಿತು ಎಂದು ಸದಾನಂದಗೌಡ ತಿಳಿಸಿದರು.

ಪ್ರಧಾನಿಯವರ ಆಶಯದಂತೆ ರಸಗೊಬ್ಬರ ವಲಯದಲ್ಲಿ ಸಂಪೂರ್ಣ ಸ್ವಾಲಂಬನೆ ಗಳಿಸುವಲ್ಲಿ ನಮ್ಮ ರಸಗೊಬ್ಬರ ಇಲಾಖೆಯು ಅನೇಕ ಕ್ರಮಗಳನ್ನು ಕೈಗೊಂಡಿದೆ. ಪೊಟಾ ಗೊಬ್ಬರಕ್ಕೆ ಸಂಬಂಧಿಸಿದಂತೆ ನಾವು ಬಹುತೇಕ ಆಮದನ್ನೇ ಅವಲಂಬಿಸಿದ್ದೇವೆ. ಆದರೆ  ಶೇ.80ರಷ್ಟು ಯೂರಿಯಾ ಸ್ವದೇಶದಲ್ಲಿಯೇ ಉತ್ಪಾದನೆ ಮಾಡುತ್ತಿದ್ದೇವೆ. ಪೊಸ್ಫೆಟಿಕ್ ನಮೂನೆಯ ಗೊಬ್ಬರ ಅರ್ಧದಷ್ಟು ನಮ್ಮಲ್ಲಿಯೇ ಉತ್ಪಾದನೆ ಆಗುತ್ತದೆ ಎಂದು ಅವರು ಹೇಳಿದರು.

ರಸಗೊಬ್ಬರಕ್ಕೆ ಅಗತ್ಯವಾದ ಕಚ್ಚಾವಸ್ತುಗಳನ್ನು ನೇರ ಆವಕಕ್ಕೆ ಪ್ರಯತ್ನಿಸಲಾಗುತ್ತಿದೆ. ವಿದೇಶೀ ಕಂಪನಿಗಳ ಜೊತೆ ಪಾಲುಗಾರಿಕೆ ಹೊಂದಲು ಭಾರತದ ಖಾಸಗಿ ರಸಗೊಬ್ಬರ ಕಂಪನಿಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಸದಾನಂದ ಗೌಡ ವಿವರಿಸಿದರು.

ರಸಗೊಬ್ಬರ ಇಲಾಖೆಯು ದೇಶಾದ್ಯಂತ ರಸಗೊಬ್ಬರ ಪೂರೈಕೆಯನ್ನು ಸಮರ್ಪಕವಾಗಿ ಹಾಗೂ ಕರಾರುವಕ್ಕಾಗಿ ಕೈಗೊಳ್ಳಲು ಉನ್ನತ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ. ರೈತರಿಗೆ ದೊರೆಯುವ ರಿಯಾಯತಿ ಸೋರಿಕೆಯಾಗದಂತೆ ತಡೆಯಲು ನೇರ ನೆರವು ವರ್ಗಾವಣೆ ವ್ಯವಸ್ಥೆಯನ್ನು (ಡಿಬಿಟಿ ಸಿಸ್ಟಮ್) ಅಳವಡಿಸಿಕೊಳ್ಳಲಾಗಿದೆ. ಮೇಲಿಂದಮೇಲೆ ಈ ತಂತ್ರಾಂಶ/ದತ್ತಾಂಶಗಳನ್ನು ಉನ್ನತೀಕರಣಗೊಳಿಸಲಾಗುತ್ತಿದ್ದು ‘ಗವರ್ನನ್ಸ್ ಡಿಜಿಟಲ್ ಟ್ರಾನ್ಸಫೋರ್ಮೇಶನ್ ಅವಾರ್ಡ್’ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಇಲಾಖೆ ಭಾಜನವಾಗಿದೆ ಎಂದು ಸದಾನಂದ ಗೌಡ ತಿಳಿಸಿದರು.

ಸಿಐಐ ಟೆಕ್ ಮೇಳದ ಅಧ್ಯಕ್ಷ ಅಜಯ್ ಎಸ್ ಶ್ರೀರಾಮ್, ಸಮ್ಮೇಳನದ ಸಂಚಾಲಕ ಡಾ. ಅರವಿಂದ್ ಕಪೂರ್, ಇಲಾಖಾ ಕಾರ್ಯದರ್ಶಿ ಛಬಿಲೇಂದ್ರ ರೌಲ್ ಮುಂತಾದವರು ಪಾಲ್ಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X