Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ವಾರಿಯರ್ ಗಳಿಗೆ ಸಿಗದ ಪರಿಹಾರ:...

ಕೊರೋನ ವಾರಿಯರ್ ಗಳಿಗೆ ಸಿಗದ ಪರಿಹಾರ: ಕುಮಾರಸ್ವಾಮಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ18 Oct 2020 9:37 PM IST
share
ಕೊರೋನ ವಾರಿಯರ್ ಗಳಿಗೆ ಸಿಗದ ಪರಿಹಾರ: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು, ಅ. 18: ರಾಜ್ಯದಲ್ಲಿ ಕೊರೋನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜೀವ ಪಣಕ್ಕಿಟ್ಟು ಕೆಲಸ ಮಾಡಿದ 500ಕ್ಕೂ ಹೆಚ್ಚು ಕೊರೋನ ವಾರಿಯರ್ಗಳು ಜೀವ ಕಳೆದುಕೊಂಡಿದ್ದು, ಆ ಪೈಕಿ ಕೇವಲ ಒಂದೇ ಒಂದು ಕುಟುಂಬಕ್ಕೆ ಸರಕಾರ ಪರಿಹಾರ ನೀಡಿದೆ ಎಂಬ ವಿಚಾರ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರವಿವಾರ ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, ಕೇವಲ ಬಾಯಿ ಚಪಲ ತೀರಿಸಿಕೊಳ್ಳಲು ಕೊರೋನ ವಾರಿಯರ್ಗಳನ್ನು ಭೇಷ್ ಎನ್ನುವ ಸರಕಾರ, ಅವರ ಜೀವದ ಜತೆ ಆಟವಾಡುತ್ತಿದೆ. ಜನರ ಆರೋಗ್ಯ ಕಾಪಾಡುವ ಸಲುವಾಗಿ ತಮ್ಮ ಸರ್ವಸ್ವವನ್ನೇ ಬಲಿಕೊಟ್ಟ ಕೊರೋನ ವಾರಿಯರ್ ಕುಟುಂಬಗಳಿಗೆ ತಾನೇ ಘೋಷಿಸಿದಂತೆ ಪರಿಹಾರ ಕೊಡದಿದ್ದರೆ ಸರಕಾರ ಇದ್ದರೆಷ್ಟು? ಬಿಟ್ಟರೆಷ್ಟು? ಎಂದು ಕಿಡಿಗಾರಿದ್ದಾರೆ.

ತನ್ನ ಹೆತ್ತ ತಾಯಿಯನ್ನು ಉಳಿಸಿಕೊಡಿ ಎಂದು ವಿದ್ಯಾಗಮ ಯೋಜನೆಯಡಿ ಕೆಲಸ ಮಾಡಿದ ಶಿಕ್ಷಕಿಯ ಪುತ್ರಿಯೊಬ್ಬಳು ಸರಕಾರಕ್ಕೆ ಪತ್ರ ಬರೆದರೆ, ಶಿಕ್ಷಕಿಯ ಚಿಕಿತ್ಸಾ ವೆಚ್ಚದ ಬಿಲ್ ಕೊಡುತ್ತೇನೆ ಎಂಬ ಹೃದಯಹೀನ ಉತ್ತರ ಕೊಡುವ ಈ ರಾಜ್ಯದ ಶಿಕ್ಷಣ ಮಂತ್ರಿಯಿಂದ ಹಾಗೂ ಇಂತಹ ಮನಸ್ಥಿತಿಯ ಸರಕಾರದಿಂದ ಕೊರೋನ ವಾರಿಯರ್ಗಳ ಕುಟುಂಬಗಳು ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ಅವರು ಟೀಕಿಸಿದ್ದಾರೆ.

60 ವೈದ್ಯರು, 20 ನರ್ಸ್ ಗಳು, 82 ಪೊಲೀಸರು, 10 ಪೌರ ಕಾರ್ಮಿಕರು, 96 ಚಾಲಕ-ನಿರ್ವಾಹಕರು, 235 ಶಿಕ್ಷಕರು-ಉಪನ್ಯಾಸಕರು, 10 ಆಶಾ ಕಾರ್ಯಕರ್ತೆಯರು ಹೀಗೆ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಇನ್ನು ಪತ್ರಕರ್ತರು, ಬ್ಯಾಂಕ್ ಸೇರಿದಂತೆ ವಿವಿಧ ಸೇವಾ ವಲಯದ ನೌಕರರು ಕೂಡ ಜೀವ ತೆತ್ತಿದ್ದಾರೆ. ಇವರ ಕುಟುಂಬಗಳಿಗೆ ಸರಕಾರ ಉತ್ತರದಾಯಿತ್ವ ಪ್ರದರ್ಶಿಸಬೇಕಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ತಮಟೆ ಬಾರಿಸಿ, ದೀಪ ಹಚ್ಚಿ, ಜನಪ್ರಿಯತೆ ಗಳಿಸಿ, ಪೋಷಾಕು ಕೊಟ್ಟರೆ ಕೊರೋನ ವಾರಿಯರ್ಗಳು ಹಾಗೂ ಅವರ ಕುಟುಂಬಗಳು ಹೇಗೆ ಸಮಾಧಾನ ಪಟ್ಟುಕೊಳ್ಳಬೇಕು? ಕನಿಷ್ಠ ಪಕ್ಷ ಕೊರೋನ ವಾರಿಯರ್ಗಳ ಸುರಕ್ಷತೆಗೆ ಸರಕಾರ ಕ್ರಮಕೈಗೊಳ್ಳಬೇಕು, ಅದನ್ನೂ ಮೀರಿ ಜೀವ ಕಳೆದುಕೊಳ್ಳುವ ಕುಟುಂಬಗಳಿಗೆ ಪರಿಹಾರ ಕೊಡದೇ ಹೋದರೆ ಇತಿಹಾಸ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X