Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಕೆಎಸ್ಸೆಸ್ಸೆಫ್, ವಿಖಾಯದಿಂದ...

ಎಸ್ಕೆಎಸ್ಸೆಸ್ಸೆಫ್, ವಿಖಾಯದಿಂದ ಫರಂಪೇಟೆಯಲ್ಲಿ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ18 Oct 2020 10:28 PM IST
share
ಎಸ್ಕೆಎಸ್ಸೆಸ್ಸೆಫ್, ವಿಖಾಯದಿಂದ ಫರಂಪೇಟೆಯಲ್ಲಿ ರಕ್ತದಾನ ಶಿಬಿರ

ಬಂಟ್ವಾಳ, ಅ.18: ಎಸ್ಕೆಎಸ್ಸೆಸ್ಸೆಫ್ ಫರಂಗಿಪೇಟೆ ಘಟಕ, ವಿಖಾಯ ರಕ್ತದಾನಿ ಬಳಗ ದಕ್ಷಿಣ ಕನ್ನಡ ಜಿಲ್ಲಾ ಘಟಕ, ವಿಖಾಯ ರಕ್ತದಾನಿ ಬಳಗ ಮಂಗಳೂರು ವಲಯ, ವಿಖಾಯ ಫರಂಗಿಪೇಟೆ ಕ್ಲಸ್ಟರ್ ಇದರ ಜಂಟಿ ಆಶ್ರಯದಲ್ಲಿ ಕೆ.ಎಸ್.ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇದರ ಸಹಭಾಗಿತ್ವದಲ್ಲಿ ಮುರ್ಹೂಂ ಎಫ್. ಎ.ಮುಹಮ್ಮದ್ ಬಾವ ಹಾಜಿ ಸ್ಮರಣಾರ್ಥವಾಗಿ ಸಾರ್ವಜನಿಕ ರಕ್ತದಾನ ಶಿಬಿರ ಫರಂಗಿಪೇಟೆಯ ಇಮಾದ್ ಕಾಂಪ್ಲೆಕ್ಸ್ ನಲ್ಲಿ ರವಿವಾರ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಂಗಳೂರು ಶಾಸಕ ಯು.ಟಿ.ಖಾದರ್, ಬಡವರ ಕಷ್ಟ ಸುಖಗಳಿಗೆ ಸ್ಪಂದಿಸುವ ಬಹುದೊಡ್ಡ ಜವಾಬ್ದಾರಿ ಯುತ ಕಾರ್ಯಕ್ರಮಗಳನ್ನು ಎಸ್ಕೆಎಸ್ಸೆಸ್ಸೆಫ್ ಸಂಘಟನೆಗಳು ಮಾಡುತ್ತಿರುವುದು ಬಹಳ ಸಂತಸ ತಂದಿದೆ ಎಂದು ಅವರು ಹೇಳಿದರು. 

ಕೋವಿಡ್ ಸಂದರ್ಭದಲ್ಲಿ ಸಂಘಟನೆಯ ಪಾತ್ರ ಬಹಳ ಹಿರಿದಾಗಿತ್ತು. ಸರಕಾರದ ಜೊತೆಯಲ್ಲಿ ಸಾಮಾಜಿಕ ಸಂಘಟನೆಗಳು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದಾಗ ಗ್ರಾಮದಲ್ಲಿ ಅಭಿವೃದ್ಧಿ ಸಾಧ್ಯ. ಸಂಘಟನೆಯ ಕಾರ್ಯಗಳು ಇನ್ನೂ ಅದೇ ರೀತಿಯಲ್ಲಿ ಮುಂದುವ ರಿಯಲಿ. ಸಂಘಟನೆ ನೈಜ ಉದ್ದೇಶಗಳಿಗಾಗಿ ಶ್ರಮಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಅವರು ಹೇಳಿದರು.

ಜಿ.ಪಂ. ಮಾಜಿ ಸದಸ್ಯ ಉಮ್ಮರ್ ಫಾರೂಕ್ ಮಾತನಾಡಿ, ಎಸ್ಕೆಎಸ್ಸೆಸ್ಸೆಫ್ ಮತ್ತು ವಿಖಾಯ ಸಂಘಟನೆಗಳು ಸಾಮಾಜಿಕ ಕಾರ್ಯಕ್ರಮ ಗಳನ್ನು ಹಮ್ಮಿಕೊಂಡು ಬಡ ಜನರ ಕಣ್ಣೀರು ಒರೆಸುವ ಮಹತ್ತರ ಕೆಲಸ ಮಾಡುತ್ತಿದೆ‌. ರಕ್ತದಾನ ಶಿಬಿರ ಹಮ್ಮಿಕೊಂಡಿರುವ ಸಂಘಟನೆಗಳ ಕಾರ್ಯ ಶ್ಲಾಘನೀಯ ಎಂದರು.

ಫರಂಗಿಪೇಟೆ ಎಂ‌.ಜೆ.ಎಂ. ಖತೀಬ್ ಅಬ್ಬಾಸ್ ದಾರಿಮಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ದೇರಳಕಟ್ಟೆ ಜಾಮಾ ಖತೀಬ್ ರಿಯಾಝ್ ರಹ್ಮಾನಿ ಮುಖ್ಯ ಭಾಷಣ ಮಾಡಿದರು. ಎಸ್ಕೆಎಸ್ಸೆಸ್ಸೆಫ್ ಫರಂಗಿಪೇಟೆ ಕ್ಲಸ್ಟರ್ ನ ಅಧ್ಯಕ್ಷ ಮುಹಮ್ಮದ್ ಇಸ್ಮಾಯೀಲ್ ಅಝ್ಹಹರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಎಸ್ಸೈ ಪ್ರಸನ್ನ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕೋವಿಡ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್‌ ಕೆಲಸ ಮಾಡಿ ಜನರ ಪ್ರಾಣ ಉಳಿಸಿದ ಸ್ಥಳೀಯ ಸುರಕ್ಷಾ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ. ಪ್ರಭಾಕರ್ ರೈ ಅವರನ್ನು ಶಾಸಕರು ಗೌರವಿಸಿದರು. ವೇದಿಕೆಯಲ್ಲಿ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಜಲಾಲಿಯನಗರ ಮಸೀದಿ ಪ್ರಧಾನ ಕಾರ್ಯದರ್ಶಿ ಶಬೀರ್ ಆಹಮ್ಮದ್, ಎಸ್ಕೆಎಸ್ಸೆಸ್ಸೆಫ್ ಜಿಲ್ಲಾ  ಪ್ರಧಾನ ಕಾರ್ಯದರ್ಶಿ ಇಸ್ಮಾಈಲ್ ಯಮಾನಿ, ಮಂಗಳೂರು ವಲಯ ಅಧ್ಯಕ್ಷ ಅಬ್ದುಲ್ ಖಾದರ್ ಕಣ್ಣೂರು, ವಲಯ ಉಪಾಧ್ಯಕ್ಷ ನಿಯಾಝ್ ಪೈಝಿ, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಕೃಷ್ಣಕುಮಾರ್ ಪೂಂಜ, ಕುಂಪಣಮಜಲು ಅರಾಫಾ ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಬುಖಾರಿ, ಎಸ್ಕೆಎಸ್ಸೆಸ್ಸೆಫ್ ಫರಂಗಿಪೇಟೆ ಕ್ಲಸ್ಟರ್ ಕೋಶಾಧಿಕಾರಿ ಮಜೀದ್ ಫರಂಗಿಪೇಟೆ, ಮಂಗಳೂರು ವಲಯದ ಉಸ್ತುವಾರಿ ನಝೀರ್ ವಳಚ್ಚಿಲ್, ಮಂಗಳೂರು ವಲಯ ಕೋಶಾಧಿಕಾರಿ ಆರಿಸ್ ಕುದ್ರೋಳಿ, ವಲಯ ಚೇರ್ಮನ್ ಅಪ್ಸರ್ ಪಾಷ, ಫರಂಗಿಪೇಟೆ ಕ್ಲಸ್ಟರ್ ಚೇರ್ಮನ್ ಇಮ್ರಾನ್ ಮಾರಿಪಳ್ಳ, ಎಂ.ಜೆ.ಎಂ. ಫರಂಗಿಪೇಟೆ ಪ್ರಧಾನ ಕಾರ್ಯದರ್ಶಿ ಯೂಸುಫ್ ಹಾಜಿ, ಕಟ್ಟಡದ ಮಾಲಕ ಇಕ್ಬಾಲ್ ಫರಂಗಿಪೇಟೆ, ಗ್ರಾ.ಪಂ. ಸದಸ್ಯ ಭಾಸ್ಕರ್ ರೈ, ಇಮ್ತಿಯಾಝ್ ತುಂಬೆ, ರಶೀದ್ ತುಂಬೆ, ಇಬ್ರಾಹಿಂ ವಳವೂರು ಉಪಸ್ಥಿತರಿದ್ದರು.

ಅರಫಾ ಜುಮಾ ಮಸೀದಿ ಖತೀಬ್ ಉಬೈದುಲ್ಲಾ ಅಝ್ಹರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಸ್ತಫಾ ಕೌಸರಿ ಫರಂಗಿಪೇಟೆ ಸ್ವಾಗತಿಸಿ, ಫರಂಗಿಪೇಟೆ ಕ್ಲಸ್ಟರ್ ನ ಪ್ರಧಾನ ಕಾರ್ಯದರ್ಶಿ ಲತೀಫ್ ಮಲಾರ್ ವಂದಿಸಿದರು. ಆಲ್ಮಾಝ್ ಮಲಿಕ್ ಬೆಂಗ್ರೆ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X