Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಪರೀಕ್ಷಾ ಸಾಮರ್ಥ್ಯ...

ಬೆಂಗಳೂರಿನಲ್ಲಿ ಪರೀಕ್ಷಾ ಸಾಮರ್ಥ್ಯ ಶೇ.73 ರಷ್ಟು ಹೆಚ್ಚಳ, ಸಾವಿನ ಪ್ರಮಾಣದಲ್ಲಿ ಇಳಿಕೆ: ಡಾ.ಸುಧಾಕರ್

ಕೊರೋನ ವೈರಸ್

ವಾರ್ತಾಭಾರತಿವಾರ್ತಾಭಾರತಿ19 Oct 2020 9:28 PM IST
share
ಬೆಂಗಳೂರಿನಲ್ಲಿ ಪರೀಕ್ಷಾ ಸಾಮರ್ಥ್ಯ ಶೇ.73 ರಷ್ಟು ಹೆಚ್ಚಳ, ಸಾವಿನ ಪ್ರಮಾಣದಲ್ಲಿ ಇಳಿಕೆ: ಡಾ.ಸುಧಾಕರ್

ಬೆಂಗಳೂರು, ಅ.19: ರಾಜಧಾನಿ ಬೆಂಗಳೂರಿನಲ್ಲಿ ಪರೀಕ್ಷಾ ಸಾಮರ್ಥ್ಯವನ್ನು ಶೇ.73 ರಷ್ಟು ಹೆಚ್ಚಿಸಿದ್ದು, ಸಾವಿನ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸೋಮವಾರ ವಿಧಾನಸೌಧದಲ್ಲಿ ಕೋವಿಡ್ ನಿರ್ವಹಣೆ ಕುರಿತ ಅಧಿಕಾರಿಗಳು ಮತ್ತು ತಜ್ಞರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.19 ರವರೆಗೆ ಬೆಂಗಳೂರಿನಲ್ಲಿ 13.20 ಲಕ್ಷ ಪರೀಕ್ಷೆ ಮಾಡಲಾಗಿದೆ. ಒಂದೇ ತಿಂಗಳಲ್ಲಿ 22.90 ಲಕ್ಷ ಪರೀಕ್ಷೆ ಮಾಡಲಾಗಿದೆ. ಅಂದರೆ, ಪರೀಕ್ಷಾ ಸಾಮರ್ಥ್ಯವನ್ನು ಶೇ.73 ರಷ್ಟು ಹೆಚ್ಚಿಸಲಾಗಿದೆ ಎಂದರು.

ಕಳೆದ ತಿಂಗಳಿಗೆ ಹೋಲಿಸಿದರೆ, 9.70 ಲಕ್ಷದಷ್ಟು ಪರೀಕ್ಷೆ ಹೆಚ್ಚಿಸಲಾಗಿದೆ. ಮುಂಬೈ, ಚೆನ್ನೈ, ಅಹಮದಾಬಾದ್, ದಿಲ್ಲಿ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಪರೀಕ್ಷೆ ಅತಿ ಹೆಚ್ಚಿದೆ. ಬೇರೆ ನಗರಗಳ ಸರಾಸರಿ ಪರೀಕ್ಷಾ ಹೆಚ್ಚಳ ಪ್ರಮಾಣ ಶೇ.49 ರಷ್ಟಿದೆ ಎಂದು ಸುಧಾಕರ್ ವಿವರಿಸಿದರು.

ಪರೀಕ್ಷೆ ಬೇಗನೆ ಮಾಡಿ ಆರಂಭಿಕ ಹಂತದಲ್ಲೇ ಚಿಕಿತ್ಸೆ ನೀಡಿದರೆ ಸಾವಿನ ಪ್ರಮಾಣ ಕಡಿಮೆಯಾಗುತ್ತದೆ. ರಾಜ್ಯದಲ್ಲಿ ಕೋವಿಡ್ ಮರಣ ಪ್ರಮಾಣ ಶೇ.1.37 ರಷ್ಟಿದೆ. ಇದನ್ನು ಶೇ.1 ಕ್ಕಿಂತ ಕಡಿಮೆ ಮಾಡುವ ಗುರಿ ಹೊಂದಲಾಗಿದೆ. ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಪ್ರಮಾಣ ಶೇ.1.14 ರಷ್ಟಿದೆ. ಇದು ನಾವು ಹೊಂದಿರುವ ಗುರಿಗೆ ಅತಿ ಸಮೀಪದಲ್ಲೇ ಇದ್ದು, ಸಾವಿನ ಪ್ರಮಾಣ ನಿಯಂತ್ರಣಕ್ಕೆ ಬಂದಿದೆ. ಸೋಂಕಿತರ ಪ್ರಮಾಣ ಕೂಡ ಕಡಿಮೆಯಾಗುತ್ತಿದೆ ಎಂದು ಅವರು ಹೇಳಿದರು.

ಪರೀಕ್ಷೆ ಸಂಖ್ಯೆ ಹೆಚ್ಚಿಸಿರುವುದರಿಂದಲೇ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಕಡಿಮೆ ಸೋಂಕಿತರ ಸಂಖ್ಯೆ ತೋರಿಸಬೇಕೆಂಬ ಕಾರಣಕ್ಕೆ ಪರೀಕ್ಷೆಯನ್ನು ಕಡಿಮೆ ಮಾಡಲು ಸಾಧ್ಯವಿಲ್ಲ. ಸೋಂಕಿತರು ಸಂಖ್ಯೆ ಏರಲು ಪರೀಕ್ಷೆ ಸಂಖ್ಯೆ ಹೆಚ್ಚಿಸಿರುವುದೇ ಕಾರಣ ಎಂಬ ಸೂಕ್ಷ್ಮವನ್ನು ಅರಿಯಬೇಕು ಎಂದು ಸುಧಾಕರ್ ತಿಳಿಸಿದರು.

ಮೈಸೂರಿನಲ್ಲಿ ದಸರಾ ಮಹೋತ್ಸವದ ಅಂಗವಾಗಿ ಮಾಡಿರುವ ದೀಪ ಅಲಂಕಾರ ವೀಕ್ಷಿಸಲು ಹೆಚ್ಚಿನ ಸಂಖ್ಯೆಯ ಜನರು ಬರುತ್ತಿದ್ದಾರೆ. ಪರಿಸ್ಥಿತಿ ಮೇಲೆ ನಿಗಾ ಇರಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಮುಂದೆ ಒಂದೆರಡು ದಿನ ಇದೇ ಸ್ಥಿತಿ ಮುಂದುವರಿದರೆ ಅಧಿಕಾರಿಗಳು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ನಿರ್ಬಂಧ ವಿಧಿಸುವುದು ಅನಿವಾರ್ಯ ಎಂದು ಸುಧಾಕರ್ ಎಚ್ಚರಿಕೆ ನೀಡಿದರು.

ಇಡೀ ದೇಶದಲ್ಲಿ ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಆರ್ ಟಿಪಿಸಿಆರ್ 80 ಸಾವಿರ, ಆಂಟಿಜೆನ್ ಪರೀಕ್ಷೆ 30-40 ಸಾವಿರದಷ್ಟು ಆಗುತ್ತಿದೆ. ಹಬ್ಬದ ಸಮಯದಲ್ಲಿ ಜನರು ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಮನವಿ ಮಾಡಿದರು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ಮೂರು ತಿಂಗಳು ಚಳಿಗಾಲ ಮತ್ತು ಹಬ್ಬಗಳು ಇವೆ. ಈ ಹಂತದಲ್ಲಿ ಎಚ್ಚರ ತಪ್ಪಬಾರದು. ಜನವರಿಯಲ್ಲಿ ಲಸಿಕೆ ಸಿಗುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಜನರು ಸಹಕಾರ ನೀಡಬೇಕು. ಲಸಿಕೆ ಬಂದ ಬಳಿಕ ಅದನ್ನು ಹೇಗೆ ಮತ್ತು ಮೊದಲು ಯಾರಿಗೆ ವಿತರಿಸಬೇಕು ಎಂದು ತಜ್ಞರ ಜೊತೆ ಸಮಾಲೋಚಿಸಲಾಗುವುದು ಎಂದು ಸುಧಾಕರ್ ಹೇಳಿದರು.

ಕೆಲವರು ಪರೀಕ್ಷೆ ವೇಳೆ ತಪ್ಪು ಮಾಹಿತಿ ನೀಡಿ, ವಂಚನೆ ಮಾಡಿಕೊಳ್ಳುತ್ತಿದ್ದಾರೆ. ಅಂತಹವರಿಗೆ ಸರಕಾರದಿಂದ ಉಚಿತ ಚಿಕಿತ್ಸೆ ಕೂಡ ಸಿಗದಂತಾಗುತ್ತದೆ ಎಂದು ಅವರು ತಿಳಿಸಿದರು.

ನಿರ್ದಾಕ್ಷಿಣ್ಯ ಕ್ರಮ
ಕೆಲ ಖಾಸಗಿ ಆಸ್ಪತ್ರೆಗಳು ದಲ್ಲಾಳಿಗಳ ಮೂಲಕ ಹಾಸಿಗೆ ಹಂಚಿಕೆ ಮಾಡುವ ದೂರುಗಳಿವೆ. ಇದು ಗಮನಕ್ಕೆ ಬಂದರೆ ದೂರು ನೀಡಬೇಕು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X