ವೈದ್ಯನಿಂದ ಮಹಿಳಾ ಟೆಕ್ನಿಷಿಯನ್‍ಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು
ಬೆಂಗಳೂರು, ಅ.19: ಪ್ರತಿಷ್ಠಿತ ಆಸ್ಪತ್ರೆಯ ವೈದ್ಯನೊಬ್ಬ ಮಹಿಳಾ ಟೆಕ್ನಿಷಿಯನ್‍ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಖಾಸಗಿ ಆಸ್ಪತ್ರೆಯೊಂದರಲ್ಲಿ ವೈದ್ಯರಾಗಿರುವ ಡಾ.ಪರಮೇಶ್ವರ್ ಎಂಬಾತ ಟೆಕ್ನಿಷಿಯನ್ ಆಗಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎನ್ನಲಾಗಿದೆ.
ಈ ಸಂಬಂಧ ಬಸವನಗುಡಿ ಮಹಿಳಾ ಠಾಣೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.
Next Story





