Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದ ಪ್ರಗತಿಗೆ ಎಲ್ಲಾ ಕ್ಷೇತ್ರಗಳಲ್ಲೂ...

ದೇಶದ ಪ್ರಗತಿಗೆ ಎಲ್ಲಾ ಕ್ಷೇತ್ರಗಳಲ್ಲೂ ಬದಲಾವಣೆ ಮಾಡಲಾಗುತ್ತಿದೆ: ಪ್ರಧಾನಿ ಮೋದಿ

ಮೈಸೂರು ವಿವಿ 100ನೇ ಘಟಿಕೋತ್ಸವ

ವಾರ್ತಾಭಾರತಿವಾರ್ತಾಭಾರತಿ19 Oct 2020 10:34 PM IST
share
ದೇಶದ ಪ್ರಗತಿಗೆ ಎಲ್ಲಾ ಕ್ಷೇತ್ರಗಳಲ್ಲೂ ಬದಲಾವಣೆ ಮಾಡಲಾಗುತ್ತಿದೆ: ಪ್ರಧಾನಿ ಮೋದಿ

ಮೈಸೂರು, ಅ.19: ದೇಶದ ಪ್ರಗತಿ ಮತ್ತು ಅಭಿವೃದ್ಧಿಯನ್ನು ಖಚಿತ ಪಡಿಸಲು ಎಲ್ಲಾ ಕ್ಷೇತ್ರಗಳಲ್ಲೂ ಬದಲಾವಣೆಯನ್ನು ಮಾಡಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸುಧಾರಣೆಯ ಪರಿಧಿಯ ವಿಸ್ತರಣೆ ಮತ್ತು ಸುಧಾರಣಾ ಕ್ರಮಗಳ ವೇಗದ ಹೆಚ್ಚಳವನ್ನು ಕಳೆದ ಆರೇಳು ತಿಂಗಳಿನಿಂದ ನೀವು ಗಮನಿಸಿರಬಹುದು. ಕೃಷಿ, ಅಂತರಿಕ್ಷ, ರಕ್ಷಣೆ, ವೈಮಾನಿಕ ಅಥವಾ ಕಾರ್ಮಿಕ ಹೀಗೆ ಪ್ರತಿಯೊಂದು ಕ್ಷೇತ್ರಗಳಲ್ಲೂ ಬದಲಾವಣೆಯಾಗಿದೆ. ದೇಶದ ಪ್ರಗತಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ಈ ದಶಕ ಭಾರತದ್ದು ಎಂಬುದನ್ನು ಖಾತರಿಪಡಿಸಲು ಈ ಬದಲಾವಣೆ ಪೂರಕವಾಗಲಿದೆ ಎಂದು ಮೋದಿ ಹೇಳಿದ್ದಾರೆ.

ಸೋಮವಾರ ಮೈಸೂರು ವಿವಿಯ ನೂರನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಮೋದಿ, ಯುವಜನತೆ ದೇಶದ ಆಧಾರವಾಗಿದ್ದಾರೆ. ಈ ಆಧಾರವನ್ನು ಸದೃಢಗೊಳಿಸಿದಾಗ ಮಾತ್ರ ಈ ದಶಕ ಭಾರತದ್ದಾಗಲಿದೆ. ಈ ದಶಕ ಯುವಜನತೆಗೆ ಅಗಾಧ ಅವಕಾಶಗಳನ್ನು ಕಲ್ಪಿಸಿದೆ ಎಂದರು. ನಾಡಹಬ್ಬ ದಸರಾದ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಶುಭಾಷಯ ಕೋರಿದ ಪ್ರಧಾನಿ, ಹೊಸ ಶೈಕ್ಷಣಿಕ ಸಂಕಲ್ಪಕ್ಕೆ ಮೈಸೂರು ವಿವಿ ಪ್ರೇರಣೆಯಾಗಿದೆ. ಪದವಿ ಪಡೆಯುವುದಷ್ಟೇ ಶಿಕ್ಷಣದ ಉದ್ದೇಶವಾಗಿರಬಾರದು, ಪದವಿಯ ಜೊತೆಗೆ ಜ್ಞಾನ ಸಂಪಾದನೆಯೂ ಅತ್ಯಗತ್ಯವಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಪ್ರಸ್ತಾಪಿಸಿದ ಅವರು, ‘ಸ್ಕಿಲ್ಲಿಂಗ್, ರಿಸ್ಕಿಲ್ಲಿಂಗ್ ಮತ್ತು ಅಪ್‌ಸ್ಕಿಲ್ಲಿಂಗ್’ (ತರಬೇತಿ, ಮರು ತರಬೇತಿ ಮತ್ತು ಹೆಚ್ಚುವರಿ ತರಬೇತಿ) ಇಂದಿನ ದಿನದ ಅಗತ್ಯವಾಗಿದ್ದು ರಾಷ್ಟ್ರೀಯ ಶಿಕ್ಷಣ ನೀತಿ ಈ ವಿಷಯವನ್ನು ಕೇಂದ್ರೀಕರಿಸಿದೆ . ಭಾರತವನ್ನು ಉನ್ನತ ಶಿಕ್ಷಣದ ಜಾಗತಿಕ ಕೇಂದ್ರವನ್ನಾಗಿಸಲು ಮತ್ತು ನಮ್ಮ ಯುವಜನರನ್ನು ಸ್ಪರ್ಧಾತ್ಮಕರನ್ನಾಗಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಇತ್ತೀಚೆಗೆ ಪ್ರವಾಹದಿಂದ ಬಾಧಿತರಾದ ಜನರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ ಪ್ರಧಾನಿ, ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ ಎಲ್ಲಾ ಜನರಿಗೂ ಪರಿಹಾರ ಒದಗಿಸಲು ಕೇಂದ್ರ ಮತ್ತು ರಾಜ್ಯ ಸರಕಾರ ಕ್ರಮಗಳನ್ನು ಕೈಗೊಂಡಿದೆ ಎಂದರು.

ಕರ್ನಾಟಕದ ರಾಜ್ಯಪಾಲ ವಜೂಭಾಯ್ ವಾಲಾ, ಉಪಮುಖ್ಯಮಂತ್ರಿ ಸಿಎನ್ ಅಶ್ವಥನಾರಾಯಣ ಈ ಸಂದರ್ಭ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X