ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಗೆ ಡಾಕ್ಟರೇಟ್
ಬೆಂಗಳೂರು, ಅ.20: ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಂಡಿಸಿದ ಮಹಾ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ ನೀಡಿ ಗೌರವಿಸಿದೆ.
MGNREGA, Rights, Processes and Sustainble Livelihood: A Critical Study in Karnataka ಎಂಬ ಮಹಾ ಪ್ರಬಂಧಕ್ಕೆ ಅ.19ರಂದು ನಡೆದ ಮೈಸೂರು ವಿಶ್ವವಿದ್ಯಾನಿಲಯದ ನೂರನೇ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ಹಿರಿಯ ಐಎಎಸ್ ಅಧಿಕಾರಿಯಾಗಿರುವ 58 ವರ್ಷದ ಸಂಜೀವ್ ಕುಮಾರ್ ಅವರು ಮೈಸೂರು ವಿಶ್ವವಿದ್ಯಾನಿಲಯದ Development Studies ವಿಭಾಗದ ಡಾ.ಜಯ ದೇವರಾಜ್ ಅರಸ್ ಮಾರ್ಗದರ್ಶನದಲ್ಲಿ ಈ ಪ್ರಬಂದವನ್ನು ಮಂಡಿಸಿದ್ದಾರೆ.
Next Story