ಮಾಜಿ ಶಾಸಕ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ: ಪ್ರಕರಣ ದಾಖಲು
![ಮಾಜಿ ಶಾಸಕ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ: ಪ್ರಕರಣ ದಾಖಲು ಮಾಜಿ ಶಾಸಕ ಮೊಯ್ದಿನ್ ಬಾವಾರಿಗೆ ಜೀವ ಬೆದರಿಕೆ: ಪ್ರಕರಣ ದಾಖಲು](https://www.varthabharati.in/sites/default/files/images/articles/2020/10/21/264248-1603273482.jpg)
ಮಂಗಳೂರು: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಕೊಪ್ಪರಿಗೆ ಪೂಜೆಯಲ್ಲಿ ಪಾಲ್ಗೊಂಡಿದ್ದಕ್ಕೆ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚಿಗೆ ಮೊಯ್ದಿನ್ ಬಾವಾ ಅವರು ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ತೆರಳಿ ಕೊಪ್ಪರಿಗೆ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಇದರ ವಿಡಿಯೋ ವೈರಲ್ ಆಗಿದ್ದು, ಬಳಿಕ ವ್ಯಕ್ತಿಯೊಬ್ಬರು ಕರೆಮಾಡಿ ಮೊಯ್ದಿನ್ ಬಾವಾ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ಸಂಬಂಧ ಮಾಜಿ ಶಾಸಕರು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Next Story