ಉಡುಪಿ : ಬುಧವಾರ 116 ಮಂದಿಗೆ ಕೊರೋನ ಪಾಸಿಟಿವ್
ಉಡುಪಿ, ಅ.21: ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 116 ಮಂದಿ ಯಲ್ಲಿ ಕೋವಿಡ್-19 ಸೋಂಕು ಪರೀಕ್ಷೆಯಿಂದ ದೃಢಪಟ್ಟಿದೆ. ದಿನದಲ್ಲಿ 191 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ಚಂದ್ರ ಸೂಡ ತಿಳಿಸಿದ್ದಾರೆ.
ಇಂದು ಪಾಸಿಟಿವ್ ಬಂದ 116 ಮಂದಿಯಲ್ಲಿ ಮಕ್ಕಳು ಸೇರಿದಂತೆ 63 ಮಂದಿ ಪುರುಷರು ಹಾಗೂ 53 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 43 ಪುರುಷರು ಹಾಗೂ 40 ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 65, ಕುಂದಾಪುರ ತಾಲೂಕಿನ 22 ಹಾಗೂ ಕಾರ್ಕಳ ತಾಲೂಕಿನ 28 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಅಲ್ಲದೇ ಚಿಕಿತ್ಸೆಗೆಂದು ಹೊರಜಿಲ್ಲೆಯಿಂದ ಬಂದ ಒಬ್ಬರೂ ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ ಎಂದು ಡಾ.ಸೂಡ ಹೇಳಿದರು.
ದಿನದಲ್ಲಿ ಪಾಸಿಟಿವ್ ಬಂದ 116 ಮಂದಿಯಲ್ಲಿ 19 ಮಂದಿಯನ್ನು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದ 97 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್ನಲ್ಲಿದ್ದು ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್ಓ ತಿಳಿಸಿದರು.
191 ಮಂದಿ ಗುಣಮುಖ: ಬುಧವಾರ ಒಟ್ಟು 191 ಮಂದಿ ಸೋಂಕಿ ನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಹೀಗೆ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಈಗ 19,305 ಆಗಿದೆ. ಜಿಲ್ಲೆಯಲ್ಲಿ ಸದ್ಯ 1688 ಸಕ್ರೀಯ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ವಿವರಿಸಿದರು.
1984 ನೆಗೆಟಿವ್: ಜಿಲ್ಲೆಯಲ್ಲಿ ಇಂದು ಒಟ್ಟು 2105 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 1984 ಮಂದಿ ನೆಗೆಟಿವ್ ಬಂದಿದ್ದು, 121 (ಐಸಿಎಂಆರ್ ವರದಿ)ಮಂದಿ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 21,153 ಆಗಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,62,543 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,41,390 ಮಂದಿ ನೆಗೆಟಿವ್ ಹಾಗೂ 21,153 ಮಂದಿ ಪಾಸಿಟಿವ್ ಬಂದಿದ್ದಾರೆ. ಇವರಲ್ಲಿ 19,305 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಗೊಂಡಿದ್ದಾರೆ. ಈವರೆಗೆ ಒಟ್ಟು 176 ಮಂದಿ ಮೃತಪಟ್ಟಿದ್ದಾರೆ.
ಬುಧವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ. ಇದುವರೆಗೆ ಜಿಲ್ಲೆಯಲ್ಲಿ 176 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್ನಲ್ಲಿ ತಿಳಿಸಲಾಗಿದೆ.