Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಲೆಕ್ಟ್ರಿಕ್ ಬಸ್ ಪ್ರಾಯೋಗಿಕ ಸಂಚಾರ:...

ಎಲೆಕ್ಟ್ರಿಕ್ ಬಸ್ ಪ್ರಾಯೋಗಿಕ ಸಂಚಾರ: ಯಡಿಯೂರಪ್ಪ, ಡಿಸಿಎಂ ಸವದಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ22 Oct 2020 6:17 PM IST
share
ಎಲೆಕ್ಟ್ರಿಕ್ ಬಸ್ ಪ್ರಾಯೋಗಿಕ ಸಂಚಾರ: ಯಡಿಯೂರಪ್ಪ, ಡಿಸಿಎಂ ಸವದಿ ಪರಿಶೀಲನೆ

ಬೆಂಗಳೂರು, ಅ.22: ಬೆಂಗಳೂರಿನ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ವಿಧಾನಸೌಧದವರೆಗೆ ಇಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಓಲೆಕ್ಟಾ ಗ್ರೀನ್‍ಟೆಕ್ ಸಂಸ್ಥೆಯ ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ಸಿನಲ್ಲಿ ಪ್ರಾಯೋಗಿಕ ಸಂಚಾರ ಕೈಗೊಂಡು ಈ ಬಸ್ಸಿನ ಕಾರ್ಯಕ್ಷಮತೆಯನ್ನು ಖುದ್ದಾಗಿ ಪರಿಶೀಲಿಸಿದರು.

ವಿಧಾನಸೌಧಕ್ಕೆ ಎಲೆಕ್ಟ್ರಿಕ್ ಬಸ್ಸು ತಲುಪಿದಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಬಸ್ಸನ್ನು ಪರಿಶೀಲಿಸಿ ನೂತನ ವ್ಯವಸ್ಥೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಬಿಎಂಟಿಸಿ ಅಧ್ಯಕ್ಷ ಎನ್.ಎಸ್.ನಂದೀಶ್ ರೆಡ್ಡಿ ಹಾಗೂ ಬಿ.ಎಂ.ಟಿ.ಸಿ.ಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೇಂದ್ರ ಸರಕಾರವು ಫೇಮ್-2 ಯೋಜನೆ ಅಡಿಯಲ್ಲಿ ಪ್ರತಿ ಬಸ್ಸಿಗೆ ನೀಡುವ 55 ಲಕ್ಷ ರೂ. ಮತ್ತು ರಾಜ್ಯ ಸರಕಾರವು ನೀಡುವ 33.33 ಲಕ್ಷ ರೂ.(ಪ್ರತಿ ಬಸ್ಸಿಗೆ) ಆರ್ಥಿಕ ಸಹಾಯವನ್ನು ಸಂಯೋಜಿಸಿಕೊಂಡು ಪ್ರತಿ ಬಸ್ಸಿಗೆ 88.33 ಲಕ್ಷ ರೂ.ಗಳಂತೆ ಪ್ರೋತ್ಸಾಹ ಧನದೊಂದಿಗೆ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರವನ್ನು ಹಂತಹಂತವಾಗಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಈ ಸಂದರ್ಭದಲ್ಲಿ ಲಕ್ಷ್ಮಣ ಸವದಿ ಸುದ್ದಿಗಾರರಿಗೆ ತಿಳಿಸಿದರು.

ಬೆಂಗಳೂರಿನಲ್ಲಿ ವಿವಿಧ ಕಂಪನಿಗಳು ತಾವು ತಯಾರಿಸಿದ ಎಲೆಕ್ಟ್ರಿಕ್ ಬಸ್‍ಗಳನ್ನು ನಿಗದಿತ ಅವಧಿಗೆ ಪ್ರಾಯೋಗಿಕವಾಗಿ ಸಂಚಾರಕ್ಕೆ ಒದಗಿಸಲಿವೆ, ಇವುಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಮುಂದೆ ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಪ್ರಮಾಣದಲ್ಲಿ ಎಲೆಕ್ಟ್ರಿಕ್ ಬಸ್‍ಗಳನ್ನು ಅನುಮತಿ ನೀಡಲು ನಮ್ಮ ಸರಕಾರ ಉದ್ದೇಶಿಸಿದೆ ಎಂದು ಅವರು ಹೇಳಿದರು.

ಎಲೆಕ್ಟ್ರಿಕ್ ಬಸ್‍ಗಳ ಬಳಕೆಯಿಂದ ಮಾಲಿನ್ಯದ ಪ್ರಮಾಣ ಕಡಿಮೆಯಾಗುವುದಲ್ಲದೆ ಸಾರಿಗೆ ಸಂಸ್ಥೆಗಳಿಗೆ ವೆಚ್ಚದಲ್ಲಿ ಉಳಿತಾಯವೂ ಸಾಧ್ಯವಾಗಲಿದೆ. ಅಷ್ಟೇ ಅಲ್ಲ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸೇವೆ ಒದಗಿಸುವುದಕ್ಕೂ ಸಾಧ್ಯವಾಗಲಿದೆ ಎಂದು ಲಕ್ಷ್ಮಣ ಸವದಿ ವಿವರಿಸಿದರು.

ಎಲೆಕ್ಟ್ರಿಕ್ ಬಸ್ಸಿನ ವೈಶಿಷ್ಟತೆ: ಹವಾನಿಯಂತ್ರಿತ ಎಲೆಕ್ಟ್ರಿಕ್ ಬಸ್ಸಿನ ಉದ್ದ 12 ಮೀಟರ್ ಇದ್ದು, ಫ್ಲೋರ್ ಎತ್ತರ 400ಮಿ.ಮೀ ಇದೆ. 34+1 ಪ್ರಯಾಣಿಕರ ಆಸನಗಳನ್ನು ಹೊಂದಿದೆ. ಆಟೋಮ್ಯಾಟಿಕ್ ಗೇರ್ ವ್ಯವಸ್ಥೆಯಿದ್ದು, ಮುಂಬದಿ ಹಾಗೂ ಹಿಂಬದಿ ಡಿಸ್ಕ್ ಬ್ರೇಕ್ ಒಳಗೊಂಡಂತೆ ಎಲೆಕ್ಟ್ರಾನಿಕ್ ನಿಯಂತ್ರಿತ ಏರ್ ಸಸ್ಪೆನ್ಷನ್ ಹೊಂದಿದೆ. ಒಂದು ಬಾರಿ ಚಾರ್ಜ್ ಮಾಡಿದಲ್ಲಿ 200-250 ಕಿ.ಮೀಗಳ ಹವಾ ನಿಯಂತ್ರಣದೊಂದಿಗೆ ಸಂಚಾರ ದಟ್ಟಣೆಯಲ್ಲಿ ಚಲಿಸುತ್ತದೆ ಹಾಗೂ ಮಧ್ಯದಲ್ಲಿ ಚಾರ್ಜಿಂಗ್ ವ್ಯವಸ್ಥೆಯನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ.

100-125 ಪ್ರಯಾಣಿಕರ ಸ್ಥಿರ ತೂಕದೊಂದಿಗೆ ಕಾರ್ಯಾಚರಣೆ ಮಾಡಬಹುದು. ಈ ಬಸ್ಸುಗಳಲ್ಲಿ ವಿಶೇಷವಾಗಿ ಹಿರಿಯ ನಾಗರಿಕರಿಗೆ ಹಾಗೂ ಅಂಗವಿಕಲರ ಅನುಕೂಲಕ್ಕಾಗಿ ನಿಲಿಂಗ್ ಮೆಕ್ಯಾನಿಸಂ ವೀಲ್ ಚೇರ್ ವ್ಯವಸ್ಥೆ ಅಳವಡಿಸಲಾಗಿದೆ. ಈ ಬಸ್ಸು ಕೇಂದ್ರ ಮೋಟಾರು ವಾಹನ ನಿಯಮಾನುಸಾರವಿದ್ದು, ಎಐಎಸ್052 ಮತ್ತು ಹೋಮೋಲೋಗೆಶನ್ ಆಗಿದೆ.

ಬಸ್ಸಿನಲ್ಲಿ ಇದಲ್ಲದೇ ಬೇರೆ ವಿನ್ಯಾಸಗಳಾದ ಮೊಬೈಲ್ ಚಾರ್ಜ್‍ಗಾಗಿ ಯುಎಸ್‍ಬಿ ಚಾರ್ಜರ್ ವ್ಯವಸ್ಥೆ, ಎಮೆರ್ಜೆನ್ಸಿ ಅಲಾರ್ಮ್, ನಿಲುಗಡೆ ಬಟನ್, ಪ್ರಥಮ ಚಿಕಿತ್ಸಾ ಕಿಟ್, ಗಾಜು ಒಡೆಯಲು ಸುತ್ತಿಗೆ, ಸುರಕ್ಷತೆಗಾಗಿ ತುರ್ತು ನಿರ್ಗಮನ ವ್ಯವಸ್ಥೆಯನ್ನು ಒದಗಿಸಲಾಗಿದೆ. ಟ್ರ್ಯಾಕಷನ್ ಬ್ಯಾಟರಿಯು ಕೂಲೆಂಟ್ ಮೆಕಾನಿಸಂ ಹೊಂದಿರುವ ಲಿ-ಆಯನ್‍ದಾಗಿದ್ದು, ಇದು ಬ್ಯಾಟರಿಯ ತಾಪಮಾನ ನಿಯಂತ್ರಿಸಿ ಕಾರ್ಯಕ್ಷಮತೆಯನ್ನು ವೃದ್ಧಿಸುತ್ತದೆ.

ಬಸ್ ತಯಾರಿಕ ಕಂಪನಿಯವರು ತಿಳಿಸಿರುವಂತೆ, ಈ ಬಸ್ ಪ್ರತಿ ಕಿಮೀ ಆಚರಣೆಗೆ 1.2 ರಿಂದ 1.4 ಕಿಲೋ ವ್ಯಾಟ್ ವಿದ್ಯುತ್‍ಶಕ್ತಿ ಬಳಕೆಯಾಗುತ್ತದೆ. ಸುಮಾರು 2 ರಿಂದ 3 ಗಂಟೆಯಲ್ಲಿ ಫಾಸ್ಟ್ ಚಾರ್ಜಿಂಗ್‍ನೊಂದಿಗೆ ಬಸ್ಸನ್ನು ಚಾರ್ಜ್ ಮಾಡಬಹುದು ಎಂದು ಸಂಸ್ಥೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X