Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸ್ಯಾಂಕಿ ಕೆರೆಗೆ ಬಾಗೀನ ಅರ್ಪಿಸಿದ...

ಸ್ಯಾಂಕಿ ಕೆರೆಗೆ ಬಾಗೀನ ಅರ್ಪಿಸಿದ ಡಿಸಿಎಂ ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ22 Oct 2020 6:19 PM IST
share
ಸ್ಯಾಂಕಿ ಕೆರೆಗೆ ಬಾಗೀನ ಅರ್ಪಿಸಿದ ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು, ಅ.22: ಹನ್ನೆರಡು ವರ್ಷಗಳ ನಂತರ ತುಂಬಿ ಕೋಡಿ ಹರಿದಿರುವ, ಮೈತುಂಬಾ ಮಂಜು ಹೊದ್ದುಕೊಂಡು ನೋಡುಗರ ಮನಸೂರೆಗೊಳ್ಳುತ್ತಿದ್ದ ಮಲ್ಲೇಶ್ವರದ ಸ್ಯಾಂಕಿ ಕೆರೆಗೆ ಮಲ್ಲೇಶ್ವರ ಕ್ಷೇತ್ರದ ಶಾಸಕರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಗುರುವಾರ ಬೆಳಗ್ಗೆ ಬಾಗೀನ ಅರ್ಪಿಸಿ ಪೂಜೆ ಸಲ್ಲಿಸಿದರು.

ಬೆಳಗ್ಗೆ 9.30ಕ್ಕೆ ಕೆರೆ ಬಳಿ ಪೂಜೆ ಸಲ್ಲಿಸಿದ ಅವರು, ನಗರದಲ್ಲಿ ಉತ್ತಮ ಮಳೆಯಾಗಿ ಇಡೀ ನಗರ ಹಚ್ಚಹಸಿರಿನಿಂದ ಕಂಗೊಳಿಸಲಿ. ಇಡೀ ರಾಜ್ಯದಲ್ಲಿ ಸಮೃದ್ಧಿ ಮೂಡಲಿ. ಇಡೀ ಮಲ್ಲೇಶ್ವರ ಜನರ ಉಸಿರಾಗಿರುವ ಈ ಕೆರೆ ಸದಾ ಹಸಿರಾಗಿರಲಿ ಎಂದು ಪ್ರಾರ್ಥನೆ ಮಾಡಿದರು.

ಅಲ್ಲದೆ, ಚಿಕ್ಕಮಗಳೂರಿನ ಮುಳ್ಳಯ್ಯನ ಗಿರಿಯಂತೆ, ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಂತೆ ಹಾಗೂ ದಕ್ಷಿಣ ಭಾರತದ ಹೆಸರಾಂತ ಪ್ರವಾಸಿ ತಾಣ ಊಟಿಯಂತೆ ದಟ್ಟವಾದ ಮಂಜಿನಿಂದ ಕಂಗೊಳಿಸುತ್ತಿದ್ದ ಸ್ಯಾಂಕಿ ಕೆರೆಯನ್ನು ಕಂಡು ಉಪ ಮುಖ್ಯಮಂತ್ರಿಗಳು ಮಂತ್ರಮುಗ್ಧರಾದರು.

ಪೂಜೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಉತ್ತಮ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಸ್ಯಾಂಕಿ ಕೆರೆ ಕೆರೆ ತುಂಬಿದೆ. ಇದರಿಂದ ಈ ಭಾಗದ ಜನರಿಗೆ, ನನಗೆ ತುಂಬಾ ಸಂತೋಷವಾಗಿದೆ. ಇಂಥ ಸಂದರ್ಭದಲ್ಲಿ ತಾಯಿ ಗಂಗೆಗೆ ಪೂಜೆ ಸಲ್ಲಿಸಿದ್ದು ಸಂತಸ ಉಂಟು ಮಾಡಿದೆ. ಭವಿಷ್ಯದಲ್ಲಿ ನಗರದಲ್ಲಿ ಸುರಿಯುವ ನೀರು ವ್ಯರ್ಥವಾಗದಂತೆ ಸಂಗ್ರಹ ಮಾಡಲು ಎಲ್ಲೆಡೆ ಇಂಗು ಗುಂಡಿಗಳನ್ನು ಮಾಡಲಾಗುವುದು. ಕೆರೆಗಳಲ್ಲಿ ನೀರು ಸಂಗ್ರಹಣ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು. ಪ್ರತಿ ವರ್ಷ ಈ ಕೆರೆಯೂ ಸೇರಿ ಎಲ್ಲ ಕೆರೆಗಳೂ ಕೋಡಿ ಹರಿಯಲಿ ಎಂದು ಆಶಿಸಿದರು.

ಕೆರೆ ತುಂಬಿದ್ದು ಹೇಗೆ?: ಕೆರೆಯ ಜಲಾನಯನ ಪ್ರದೇಶವಾದ ಸದಾಶಿವನಗರ, ಅರಣ್ಯ ಭವನ ಸೇರಿದಂತೆ ವಿವಿಧ ಭಾಗಗಳಲ್ಲಿ ಸುರಿದ ಮಳೆನೀರು ವ್ಯರ್ಥವಾಗಿ ಹರಿದುಹೋಗುತ್ತಿತ್ತು. ಆ ಭಾಗಗಳಿಂದ ನೀರು ಹರಿದುಬರಲು ಇದ್ದ ಕಾಲುವೆಗಳು ಹೂಳು, ಕಸದಿಂದ ಮುಚ್ಚಿ ಹೋಗಿದ್ದವು. ಅವುಗಳನ್ನು ಸರಿಮಾಡಿಸಿ ಕೆರೆ ಕಡೆಗೆ ನೀರು ಹರಿಸುವ ಹಾಗೆ ಮಾಡಿದ್ದರಿಂದ ಕೆರೆ ತುಂಬಿದೆ ಎಂದು ಅಶ್ವತ್ಥ ನಾರಾಯಣ ಹರ್ಷ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸ್ಥಿರ ಸರಕಾರವಿದ್ದು ಅಭಿವೃದ್ಧಿ ಸರಿಯಾದ ದಿಕ್ಕಿನಲ್ಲಿಯೇ ನಡೆಯುತ್ತಿದೆ. ನಗರದಲ್ಲಿ ಮಳೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಲಾಗುವುದು. ಜನರಿಗೆ ಯಾವುದೇ ತೊಂದರೆ ಆಗದಂತೆ ಸರಕಾರ ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದರು.

ಬಾಗಿನ ಅರ್ಪಿಸಿದ ನಂತರ ಕೆರೆಯಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದರಲ್ಲದೆ, ಇಡೀ ಕೆರೆಯನ್ನು ಅರ್ಧ ಸುತ್ತು ವಾಕ್ ಮಾಡಿದರು. ಈ ಸಂದರ್ಭದಲ್ಲಿ ಸ್ಯಾಂಕಿ ವಾಕರ್ಸ್ ಅಸೋಸಿಯೇಷನ್ ಅಧ್ಯಕ್ಷ ರಂಗನಾಥ, ಪಾಲಿಕೆ ಮುಖ್ಯ ಎಂಜಿನಿಯರ್ ಮೋಹನ್ ಕೃಷ್ಣ, ಬಿಬಿಎಂಪಿ ಜಂಟಿ ಆಯುಕ್ತ (ಪಶ್ಚಿಮ) ಚಿದಾನಂದ, ಬಿಬಿಎಂಪಿ ಮಾಜಿ ಸದಸ್ಯೆ ಸುಮಂಗಲಾ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X