Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಂಬಾಕು ಬೆಳೆಗೆ ಹೆಚ್ಚಿನ ಬೆಲೆ ನೀಡಲು...

ತಂಬಾಕು ಬೆಳೆಗೆ ಹೆಚ್ಚಿನ ಬೆಲೆ ನೀಡಲು ಆಗ್ರಹಿಸಿ ಏಕಾಂಗಿ ಧರಣಿ

ವಾರ್ತಾಭಾರತಿವಾರ್ತಾಭಾರತಿ22 Oct 2020 10:44 PM IST
share
ತಂಬಾಕು ಬೆಳೆಗೆ ಹೆಚ್ಚಿನ ಬೆಲೆ ನೀಡಲು ಆಗ್ರಹಿಸಿ ಏಕಾಂಗಿ ಧರಣಿ

ಮೈಸೂರು,ಅ.22: ಈ ಸಾಲಿನ ತಂಬಾಕು ಬೆಳೆಗೆ 200ರಿಂದ 250 ರೂಪಾಯಿ ಬೆಲೆ ನೀಡುವಂತೆ ಮತ್ತು ಕಾರ್ಡ್ ದಾರರ ಸಂಖ್ಯೆಗಳನ್ನು ಅತಿ ಜರೂರಾಗಿ ಬಗೆಹರಿಸಿಕೊಡುವಂತೆ ಒತ್ತಾಯಿಸಿ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

ನಗರದ  ಜಿಲ್ಲಾಧಿಕಾರಿಗಳ ಕಛೇರಿ ಎದುರು ಗುರುವಾರ ಪಿರಿಯಾಪಟ್ಟಣ ತಾಲೂಕಿನ ರಾವಂದೂರು ಹೋಬಳಿಯ ಆರ್.ತುಂಗಾ ಗ್ರಾಮದ ಶ್ರೀನಿವಾಸ್ ಪಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಅವರು ಈ ಬಾರಿ ತಂಬಾಕಿಗೆ ಉತ್ತಮವಾದ ಅಂದರೆ 200ರೂ. ನಿಂದ 250ರೂ. ಗಳ ಬೆಲೆ ದೊರೆಯದ ಕಾರಣ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ತಂಬಾಕು ಹರಾಜು ಮಾರುಕಟ್ಟೆ ಕೆಲವು ದಿನಗಳಿಂದ ಪ್ರಾರಂಭವಾಗಿದ್ದು ರೈತರಿಗೆ ಉತ್ತಮ ಬೆಲೆ ಸಿಗದೆ ಕಂಗಾಲಾಗಿದ್ದಾರೆ. ತಂಬಾಕು ಬೆಳೆಯನ್ನು ಬೆಳೆಯಲು ಪ್ರತಿ ಕೆಜಿಗೆ ಸುಮಾರು 195ದಿಂದ 215 ರೂ.ಗಳು ಖರ್ಚಾಗುತ್ತಿದ್ದು ತಂಬಾಕು ಮಾರುಕಟ್ಟೆ ನೀಡುತ್ತಿರುವ ಬೆಲೆ ಸುಮಾರು 130ರಿಂದ 170 ರೂಗಳು ಮಾತ್ರ. ರೈತರು ಮಾಡುತ್ತಿರುವ ಖರ್ಚು ಕೂಡ ಸಿಗದೆ ನಷ್ಟವನ್ನು ಹೊಂದುತ್ತಿದ್ದಾರೆ ಎಂದರು.

ಆದ್ದರಿಂದ ತಂಬಾಕಿನ ಬೆಲೆಯನ್ನು ಕನಿಷ್ಠ ಸುಮಾರು 200ರಿಂದ 250 ರೂ.ಗಳನ್ನು ನೀಡಿ ಮಾರಕಟ್ಟೆಯನ್ನು ಮಾಡಬೇಕು. ಕಾರ್ಡ್ ದಾರರಿಗೆ ವಿಧಿಸುವ ಕಮಿಷನ್ ದರವನ್ನು ಕಡಿತಗೊಳಿಸಬೇಕು ಅಥವಾ ಕಾರ್ಡ್ ದಾರರಿಗೆ ತಂಬಾಕಿನ ಲೈಸೆನ್ಸ್ ನೀಡಬೇಕು. ಇಲ್ಲವಾದರೆ ರೈತರು ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ಹಂತದಲ್ಲಿದ್ದಾರೆ. ಆದ್ದರಿಂದ ಮಾರುಕಟ್ಟೆಗ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಿಕೊಡಬೇಕು. ಇಲ್ಲವಾದಲ್ಲಿ ರೈತ ಪರ ಸಂಘಟನೆಗಳು ಮತ್ತು ರೈತರೆಲ್ಲರೂ ಸೇರಿ ಉಗ್ರವಾದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X