Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಕೋರಿ...

ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಕೋರಿ ಪಿಐಎಲ್: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ23 Oct 2020 7:57 PM IST
share
ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಕೋರಿ ಪಿಐಎಲ್: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು, ಅ.23: ರಾಜ್ಯದ ಗ್ರಾಮ ಪಂಚಾಯತ್ಗಳಿಗೆ ಚುನಾವಣೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿರುವ ಹೈಕೋರ್ಟ್, ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದರೂ ಚುನಾವಣೆ ಆಯೋಗ ಚುನಾವಣೆಗಳನ್ನು ನಡೆಸುವ ಸಂಬಂಧ ಯಾವುದೇ ಸೂಕ್ತ ತೀರ್ಮಾನ ಕೈಗೊಳ್ಳಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿ ಅವಧಿ ಮುಗಿದಿರುವ ಗಾ.ಪಂ.ಗಳಿಗೆ ಚುನಾವಣೆ ನಡೆಸಲು ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡ ಕೆ.ಸಿ.ಕೊಂಡಯ್ಯ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಸರಕಾರದ ಪರ ವಾದಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು, ಕೊರೋನ ಸೋಂಕು ಹಿನ್ನೆಲೆಯಲ್ಲಿ ಜನರ ಸುರಕ್ಷತೆಗೆ ಗಮನ ನೀಡಿ ಸ್ವಲ್ಪ ಕಾಲಾವಕಾಶ ಕೇಳುತ್ತಿದ್ದೇವೆ ಎಂದು ಈ ಹಿಂದೆ ಹೇಳಿದ್ದನ್ನೇ ಪುನರುಚ್ಚರಿಸಿದರು. ಜತೆಗೆ ಚುನಾವಣಾ ಆಯೋಗ ಸರಕಾರವನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದರು.

ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್ ಫಣೀಂದ್ರ ಅವರು ವಾದಿಸಿ, ಈಗಾಗಲೇ ಸರಕಾರ ಹಾಗೂ ಜಿಲ್ಲಾಧಿಕಾರಿಗಳ ಜೊತೆಯೂ ಸಮಾಲೋಚನೆ ನಡೆಸಿ, ಸುರಕ್ಷಿತವಾಗಿ ಚುನಾವಣೆ ನಡೆಸುವ ಸಂಬಂಧ ಎಸ್‍ಓಪಿ ಕೂಡ ಸಿದ್ಧಪಡಿಸಲಾಗಿದೆ. ಸೋಂಕು ಕಡಿಮೆ ಇರುವ ಕಡೆ ಮೊದಲು ಚುನಾವಣೆ ನಡೆಸಲು ಆಯೋಗ ಯೋಜನೆ ರೂಪಿಸಿದೆ ಎಂದರು.

ಅರ್ಜಿದಾರರ ಪರ ಹಿರಿಯ ನ್ಯಾಯವಾದಿ, ಮಾಜಿ ಅಡ್ವಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ವಾದಿಸಿ, ಸರಕಾರ ಚುನಾವಣೆ ನಡೆಸಲು ಆಯೋಗಕ್ಕೆ ಮುಕ್ತ ಅವಕಾಶ ಕೊಡುತ್ತಿಲ್ಲ. ಅವಧಿ ಮುಗಿದಿರುವ ಗ್ರಾಪಂಗಳಿಗೆ 6 ತಿಂಗಳ ಅವಧಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದ್ದು, ಅವರ ಅವಧಿ ಡಿಸೆಂಬರ್ ಗೆ ಮುಕ್ತಾಯವಾಗಲಿದೆ. ಆ ಬಳಿಕ ಅವಧಿ ವಿಸ್ತರಣೆಗೆ ಅವಕಾಶವಿಲ್ಲ. ಹೀಗಾಗಿ, ನ್ಯಾಯಾಲಯವೇ ಚುನಾವಣೆಗಳನ್ನು ನಡೆಸಲು ಸೂಕ್ತ ನಿರ್ದೇಶನ ನೀಡಬೇಕು ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠವು ಸರಕಾರಕ್ಕೆ ಚುನಾವಣೆ ನಡೆಸಲು ಇಷ್ಟವಿಲ್ಲವೇ. ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ ಸರಕಾರಕ್ಕೆ ಗ್ರಾಪಂ ಚುನಾವಣೆಗಳನ್ನು ನಡೆಸಲು ಕಷ್ಟವಾಗುತ್ತಿದೆಯೇ. ಬಿಹಾರದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿವೆ. ವಾಸ್ತವವಾಗಿ ಗ್ರಾಪಂ ಚುನಾವಣೆ ನಡೆಸಲು ಸರಕಾರವೇ ಮುಂದೆ ಬರಬೇಕಿತ್ತು. ಆದರೆ ಚುನಾವಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ಕೇಳುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು. ಅರ್ಜಿದಾರರು ಆಕ್ಷೇಪಣೆಗಳಿದ್ದಲ್ಲಿ ಅ.29ರೊಳಗೆ ಲಿಖಿತವಾಗಿ ಸಲ್ಲಿಸುವಂತೆ ಸೂಚನೆ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X