Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಿತ್ತೂರು ಉತ್ಸವಕ್ಕೆ ಚಾಲನೆ:...

ಕಿತ್ತೂರು ಉತ್ಸವಕ್ಕೆ ಚಾಲನೆ: ವೀರಜ್ಯೋತಿಗೆ ಅದ್ಧೂರಿ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ23 Oct 2020 10:07 PM IST
share
ಕಿತ್ತೂರು ಉತ್ಸವಕ್ಕೆ ಚಾಲನೆ: ವೀರಜ್ಯೋತಿಗೆ ಅದ್ಧೂರಿ ಸ್ವಾಗತ

ಬೆಳಗಾವಿ, ಅ.23: ವಿಜಯದ ದ್ಯೋತಕವಾಗಿರುವ ‘ವೀರಜ್ಯೋತಿ’ ಯನ್ನು ಅದ್ಧೂರಿಯಾಗಿ ಸ್ವಾಗತಿಸುವ ಮೂಲಕ ‘ಕಿತ್ತೂರು ಉತ್ಸವ-2020’ಕ್ಕೆ ಚಾಲನೆ ನೀಡಲಾಯಿತು. ಚನ್ನಮ್ಮನ ಕಿತ್ತೂರಿನ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಶುಕ್ರವಾರ ವೀರಜ್ಯೋತಿಯನ್ನು ಬರಮಾಡಿಕೊಳ್ಳಲಾಯಿತು. ಕಿತ್ತೂರು ಶಾಸಕ ಮಹಾಂತೇಶ ದೊಡಗೌಡ್ರ ಜ್ಯೋತಿ ಹೊತ್ತುಬಂದ ವಾಹನಕ್ಕೆ ಪೂಜೆ ಸಲ್ಲಿಸಿ ಜ್ಯೋತಿಯನ್ನು ಸ್ವಾಗತಿಸಿದರು.

ಬೈಲಹೊಂಗಲದಲ್ಲಿರುವ ಚನ್ನಮ್ಮನ ಸಮಾಧಿ ಸ್ಥಳದಿಂದ ಇಂದು ಬೆಳಗ್ಗೆ ಹೊರಟ ಜ್ಯೋತಿಯನ್ನು ನೂರಾರು ಜನರ ಹರ್ಷೋದ್ಘಾರಗಳ ಮಧ್ಯೆ ಸ್ವಾಗತಿಸಲಾಯಿತು. ಇದಾದ ಬಳಿಕ ಬೈಲೂರಿನ ನಿಷ್ಕಲಮಂಟಪದ ನಿಜಗುಣಾನಂದ ಸ್ವಾಮೀಜಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಹಾಗೂ ನಿಚ್ಚಣಿಕೆಯ ಶ್ರೀ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಠದ ಸ್ವಾಮೀಜಿ ಧ್ವಜಾರೋಹಣ ನೆರವೇರಿಸಿದರು.

ಚನ್ನಮ್ಮ ವೃತ್ತದಲ್ಲಿ ಇರುವ ಕಿತ್ತೂರು ಚನ್ನಮ್ಮ ಪುತ್ಥಳಿಗೆ ಸ್ವಾಮೀಜಿಯವರು, ಗಣ್ಯರು ಹಾಗೂ ಜನಪ್ರತಿನಿಧಿಗಳು ಮಾಲಾರ್ಪಣೆ ನೆರವೇರಿಸಿದರು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಿತ್ತೂರು ಪ್ರವೇಶದ್ವಾರದ ಬಳಿಯ ಸಂಗೊಳ್ಳಿ ರಾಯಣ್ಣ ಮತ್ತು ಅಮಟೂರು ಬಾಳಪ್ಪ ಪುತ್ಥಳಿಗಳಿಗೂ ಮಾಲಾರ್ಪಣೆ ಮಾಡಲಾಯಿತು. ಚನ್ನಮ್ಮ ವೃತ್ತದಿಂದ ಆರಂಭಗೊಂಡ ವೀರಜ್ಯೋತಿಯ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತ ನಿಚ್ಚಣಿಕಿ ಶ್ರೀ ಮಡಿವಾಳೇಶ್ವರ ಮಠದವರೆಗೆ ತೆರಳಿತು.

ಕೋವಿಡ್-19 ಹಿನ್ನೆಲೆಯಲ್ಲಿ ಸರಕಾರದ ಮಾರ್ಗಸೂಚಿ ಹಾಗೂ ಸ್ಥಳೀಯ ಜನರ ಒಮ್ಮತಾಭಿಪ್ರಾಯದಂತೆ ಅತ್ಯಂತ ಸರಳ ಮತ್ತು ಸಾಂಕೇತಿಕ ರೀತಿಯಲ್ಲಿ ಕಿತ್ತೂರು ಉತ್ಸವ ಆಚರಿಸಲಾಯಿತು. ಪ್ರತಿವರ್ಷ ಮೂರು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಕಿತ್ತೂರು ಉತ್ಸವ ಆಚರಿಸಲಾಗುತ್ತಿತ್ತು. ಕೋವಿಡ್-19 ಕಾರಣಕ್ಕೆ ಈ ಬಾರಿ ಕುಸ್ತಿಹಬ್ಬ, ಕ್ರೀಡಾ ಸ್ಪರ್ಧೆಗಳು, ವಿಚಾರ ಸಂಕಿರಣ ಹಾಗೂ ಯಾವುದೇ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಂಡಿರಲಿಲ್ಲ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X