Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕವನ್ನು 'ಭಿಕ್ಷುಕ ರಾಜ್ಯ'ವನ್ನಾಗಿ...

ಕರ್ನಾಟಕವನ್ನು 'ಭಿಕ್ಷುಕ ರಾಜ್ಯ'ವನ್ನಾಗಿ ಮಾಡಲು ಹೊರಟ ಬಿಜೆಪಿ ಸರಕಾರ: ಸಿದ್ದರಾಮಯ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ26 Oct 2020 6:26 PM IST
share
ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟ ಬಿಜೆಪಿ ಸರಕಾರ: ಸಿದ್ದರಾಮಯ್ಯ ಆರೋಪ

ಕಲಬುರಗಿ, ಅ. 26: 'ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಕರ್ನಾಟಕವನ್ನು ಭಿಕ್ಷುಕ ರಾಜ್ಯವನ್ನಾಗಿ ಮಾಡಲು ಹೊರಟಿದೆ' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, 'ಬಿಜೆಪಿ ಆಡಳಿತದ ಹಿಂದಿನ ಅವಧಿಯಲ್ಲಿ ದೇಶದ ಅತ್ಯಂತ ಭ್ರಷ್ಟ ಸರಕಾರ ಕರ್ನಾಟಕದ್ದು ಎಂದು ಮಾಧ್ಯಮಗಳು ಹೇಳಿದ್ದವು. ನಮ್ಮ ಆಡಳಿತದ ಕಾಲದಲ್ಲಿ ಅತ್ಯಂತ ಸಮರ್ಥವಾಗಿ ಹಣಕಾಸನ್ನು ನಿರ್ವಹಿಸಿದ ರಾಜ್ಯ ಕರ್ನಾಟಕವೆಂದು ದೇಶ ಕೊಂಡಾಡಿದ್ದವು. ಆದರೆ, ಇದೀಗ ಬಿಜೆಪಿ ಸರಕಾರ ಕರ್ನಾಟಕವನ್ನು ಮತ್ತೆ ಭಿಕ್ಷುಕ ರಾಜ್ಯ ಮಾಡಲು ಹೊರಟಿದೆ ಎಂದು ದೂರಿದರು.

ರಾಜ್ಯ ಸರಕಾರ 1ಲಕ್ಷ ಕೋಟಿ ರೂಪಾಯಿ ಸಾಲ ಎತ್ತಲು ಹೊರಟರೂ ಪ್ರವಾಹದಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಸಂತ್ರಸ್ತರಿಗೆ ಪರಿಹಾರ ಕೊಡಲು ರಾಜ್ಯ ಸರಕಾರದಲ್ಲಿ ದುಡ್ಡಿಲ್ಲ, ಕೊರೋನ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ನೀಡಲು ಸಾಧ್ಯವಾಗಿಲ್ಲ. ಜನರ ತೆರಿಗೆಯ ದುಡ್ಡಿನ ಜೊತೆ ಸಾಲದ ಹಣವನ್ನು ಯಾರ ಜೇಬಿಗೆ ಹೋಗಿದೆ ಎನ್ನುವುದನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ತಿಳಿಸಬೇಕು ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

ಸಂವಿಧಾನದ 101ನೆ ತಿದ್ದುಪಡಿ ಮೂಲಕ ಕಾರ್ಯರೂಪಕ್ಕೆ ಬಂದಿರುವ ಜಿಎಸ್ಟಿ ಕಾಯ್ದೆಯ ಸೆಕ್ಷನ್ 18ರ ಪ್ರಕಾರ 5 ವರ್ಷಗಳ ಕಾಲ ಜಿಎಸ್ಟಿ ಪರಿಹಾರ ನೀಡಬೇಕಾಗಿರುವುದು ಸಂವಿಧಾನಾತ್ಮಕ ಕರ್ತವ್ಯ. 2020-2021ರ ಆರ್ಥಿಕ ವರ್ಷದ ಅಂತ್ಯಕ್ಕೆ ಕೇಂದ್ರ ಸರಕಾರ ರಾಜ್ಯಕ್ಕೆ ಜಿಎಸ್ಟಿ ಪರಿಹಾರವಾಗಿ 30 ಸಾವಿರ ಕೋಟಿ ರೂ.ನೀಡಬೇಕಾಗುತ್ತದೆ. ಈ ಪರಿಹಾರದ ನಿರಾಕರಣೆ ನಮ್ಮ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿದರು.

14ನೆ ಹಣಕಾಸು ಆಯೋಗದಲ್ಲಿ ಶೇ.4.71ರಷ್ಟಿದ್ದ ರಾಜ್ಯದ ಪಾಲನ್ನು 15ನೆ ಹಣಕಾಸು ಆಯೋಗದಲ್ಲಿ ಶೇ.3.64ಕ್ಕೆ ಇಳಿಸಲಾಗಿದೆ. ಇದರಿಂದ ರಾಜ್ಯಕ್ಕೆ 12 ಸಾವಿರ ಕೋಟಿ ರೂ.ನಷ್ಟವಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಆಯೋಗ ಶಿಫಾರಸು ಮಾಡಿದ್ದ 5,495 ಕೋಟಿ ರೂ.ವಿಶೇಷ ಅನುದಾನವನ್ನು ಹಣಕಾಸು ಸಚಿವೆ ತಿರಸ್ಕರಿಸಿ ರಾಜ್ಯಕ್ಕೆ ದ್ರೋಹ ಬಗೆದಿದ್ದಾರೆ ಎಂದು ದೂರಿದ ಅವರು, ಈಗಿನ ಆರ್ಥಿಕ ಸಂಕಷ್ಟದಿಂದ ಪಾರಾಗಬೇಕಾದರೆ ರಾಜ್ಯ ಸರಕಾರ ಬದ್ಧತಾ ವೆಚ್ಚಕ್ಕೆ ಕಡಿವಾಣ ಹಾಕಬೇಕಾಗಿದೆ. ದುಂದು ವೆಚ್ಚಗಳನ್ನು ನಿಲ್ಲಿಸಬೇಕು. ಅನಗತ್ಯ ಹುದ್ದೆಗಳನ್ನು ರದ್ದುಮಾಡಬೇಕು, ತೆರಿಗೆಯೇತರ ಆಧಾಯವನ್ನು ಹೆಚ್ಚಿಸಬೇಕು. ಆರ್ಥಿಕ ಶಿಸ್ತನ್ನು ಪಾಲಿಸಬೇಕು ಎಂದು ಸಲಹೆ ಮಾಡಿದರು.

ಬಿಜೆಪಿ ತನ್ನ ನಾಯಕರಿಗೆ ದೇಶ, ಧರ್ಮ, ಸಮಾಜ ಒಡೆಯುವ ತರಬೇತಿಯನ್ನಷ್ಟೇ ನೀಡದೆ ಆಡಳಿತ ಮತ್ತು ಆರ್ಥಿಕ ನಿರ್ವಹಣೆ ಬಗ್ಗೆಯೂ ಪಾಠ ಮಾಡಿದ್ದರೆ ಅವರಿಂದ ಇಂತಹ ಅಜ್ಞಾನದ ಮುತ್ತುಗಳು ಉದುರಿ ಬೀಳುತ್ತಿರಲಿಲ್ಲ. ತರಬೇತಿದಾರರ ಕೊರತೆಯಿದ್ದರೆ ನಾನೇ ಬಂದು ಪಾಠ ಮಾಡ್ತೇನೆ. 2008-09ರಿಂದ 2013-14ರ ವರೆಗಿನ ಬಿಜೆಪಿ ಸರಕಾರದ 5 ವರ್ಷಗಳ ಅವಧಿಯಲ್ಲಿ ಸಾಲದ ಪ್ರಮಾಣ ಶೇ.212ರಷ್ಟು ಹೆಚ್ಚಿತ್ತು. 2013-14ರಿಂದ 2018-19ರ ನಮ್ಮ ಸರಕಾರದ ಅವಧಿಯಲ್ಲಿ ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇ.65ರಷ್ಟು ಮಾತ್ರ ಎಂದು ಸ್ಪಷ್ಟಣೆ ನೀಡಿದರು.

ಸಾಲ ದುಪ್ಪಟ್ಟು ಬಿಜೆಪಿ ಸಾಧನೆ: ಹಿಂದಿನ ಅವಧಿಯ ಸಾಲವನ್ನು ಸೇರಿಸಿ ರಾಜ್ಯದ ಒಟ್ಟು ಸಾಲದ ಪ್ರಮಾಣ 2008-09ರಿಂದ 2013-14ರ ಅವಧಿಯಲ್ಲಿ ಶೇ. 94.18ರಷ್ಟು ಹೆಚ್ಚಿದ್ದರೆ, 2013-14ರಿಂದ 2018-19ರ ಅವಧಿಯಲ್ಲಿ ಒಟ್ಟು ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇ.78.19ರಷ್ಟು ಮಾತ್ರ. ಪ್ರಸಕ್ತ ಸಾಲಿನ ಬಜೆಟ್ ಅಂದಾಜಿನ ಪ್ರಕಾರ ರಾಜ್ಯದ ಸಾಲ 53 ಸಾವಿರ ಕೋಟಿ ರೂ. ಕೊರೋನದಿಂದಾಗಿ ಆಗಿರುವ ಆದಾಯ ಖೋತಾ ತುಂಬಲು ಹೆಚ್ಚುವರಿ 33 ಸಾವಿರ ಕೋಟಿ ರೂ.ಸಾಲದ ಜೊತೆ, ಜಿಎಸ್ಟಿ ಪರಿಹಾರ ಭರಿಸಲು ಮತ್ತೆ 12 ಸಾವಿರ ಕೋಟಿ ರೂ.ಸಾಲ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ. ಒಂದೇ ವರ್ಷದಲ್ಲಿ ಸಾಲದ ಮೊತ್ತ ದುಪ್ಪಟ್ಟು ಮಾಡಿರುವುದು ಬಿಜೆಪಿಯ ಸಾಧನೆ ಎಂದು ಟೀಕಿಸಿದರು.

ಸಾಲದ ಹೊರೆಯ ಸುಳ್ಳು ಆರೋಪ ಮಾಡುವುದಕ್ಕಿಂತ ಮೊದಲು ರಾಜ್ಯದ ಬಿಜೆಪಿ ನಾಯಕರು ವಿತ್ತೀಯ ಹೊಣೆಗಾರಿಕೆ ಅಧಿನಿಯಮವನ್ನೊಮ್ಮೆ ಓದಿಕೊಳ್ಳಬೇಕಿತ್ತು. ಅದರ ಪ್ರಕಾರ ನಮ್ಮ ಸಾಲ ರಾಜ್ಯದ ಆಂತರಿಕ ಉತ್ಪನ್ನದ ಶೇ.25ರ ಮಿತಿಯಲ್ಲಿರಬೇಕಾಗುತ್ತದೆ. 

ನನ್ನ ಕೊನೆಯ ಬಜೆಟ್‍ನಲ್ಲಿ ರಾಜ್ಯದ ಸಾಲ ಶೇ.20.36ರ ಮಿತಿಯೊಳಗೆ ಇತ್ತು. ಈಗಿನ ಬಿಜೆಪಿ ಆಡಳಿತದಲ್ಲಿ ಅದು ಶೇ.33ರ ಮಿತಿ ದಾಟಲಿದೆ. ರಾಜ್ಯದ ವಿತ್ತೀಯ ಕೊರತೆ ನಮ್ಮ ಆಂತರಿಕ ಉತ್ಪನ್ನದ ಶೇ.3ನ್ನು ಮೀರಬಾರದು ಎಂದು ವಿತ್ತೀಯ ಹೊಣೆಗಾರಿಕೆ ಅಧಿನಿಯಮ ಹೇಳಿದೆ ಸಿಎಂ ಆಗಿ ನಾನು ಮಂಡಿಸಿದ್ದ ಆರು ಆಯವ್ಯಯಪತ್ರಗಳಲ್ಲಿ ವಿತ್ತೀಯ ಕೊರತೆ ಎಂದೂ ಶೇ.ಮೂರರ ಮಿತಿಯನ್ನು ಮೀರಿರಲಿಲ್ಲ. ನನ್ನ ಕೊನೆಯ ಬಜೆಟ್ ನಲ್ಲಿ ಈ ಮಿತಿ ಶೇ.2.49ರಷ್ಟಿತ್ತು. ರಾಜ್ಯದ ಬಿಜೆಪಿ ಸರಕಾರ ವಿತ್ತೀಯ ಕೊರತೆಯ ಮಿತಿಯನ್ನು ಶೇ.3ರಿಂದ ಇಂದ ಶೇ.5ಕ್ಕೆ ಏರಿಕೆ ಮಾಡುವ ಅಪಾಯಕಾರಿ ನಿಲುವು ತೆಗೆದುಕೊಂಡಿದೆ. ಶೇ.5ರಷ್ಟಕ್ಕೆ ಏರಿಕೆ ಮಾಡುವುದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ. ಹೆಚ್ಚೆಂದರೆ ಶೇ.3.5 ಕ್ಕೆ ಏರಿಕೆ ಮಾಡಿ, ಮುಂದಿನ ದಿನಗಳಲ್ಲಿ ಮತ್ತೆ ಇಳಿಕೆ ಮಾಡಬಹುದಿತ್ತು. ಈ ಕಿವುಡು ಸರಕಾರಕ್ಕೆ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ.

2020-21ರ ಆಯವ್ಯಯದಲ್ಲಿ ನಮ್ಮ ಒಟ್ಟು ಆಂತರಿಕ ಉತ್ಪನ್ನ 18 ಲಕ್ಷ ಕೋಟಿ ರೂ.ಎಂದು ಅಂದಾಜು ಮಾಡಲಾಗಿದೆ. ಆದರೆ, ಕೊರೋನ ಸೋಂಕಿನ ಹಾವಳಿ ಮತ್ತು ರಾಜ್ಯ ಸರಕಾರದ ಆರ್ಥಿಕ ಎಡವಟ್ಟುಗಳ ಕಾರಣದಿಂದ ಅದು 12ಲಕ್ಷ ಕೋಟಿ ರೂಪಾಯಿಗಿಂತಲೂ ಕೆಳಗಿಳಿಯಬಹುದು. ಆಗ ನಮ್ಮ ಸಾಲದ ಸಾಮಥ್ರ್ಯವೂ ಕಡಿಮೆಯಾಗಲಿದೆ ಎಂದು ಸಿದ್ದರಾಮಯ್ಯ ಇದೇ ವೇಳೆ ಎಚ್ಚರಿಕೆ ನೀಡಿದರು.

`ನಾನು ಸಿಎಂ ಆಗಿದ್ದ 5 ವರ್ಷಗಳ ಅವಧಿಯಲ್ಲಿ ರಾಜ್ಯದ ಜನರ ತಲೆ ಮೇಲೆ ಸಾಲದ ಹೊರೆ ಹೊರಿಸಿದ್ದೇನೆ ಎಂದು ನಿರಾಧಾರವಾಗಿರುವ ಅಂಕಿ-ಅಂಶಗಳನ್ನು ಹುಟ್ಟುಹಾಕಿ ರಾಜ್ಯದ ಜನತೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸತ್ಯ ಸಂಗತಿ ಜನತೆಯ ಮುಂದಿಡುವುದು ನನ್ನ ಕರ್ತವ್ಯ. ಬಿಜೆಪಿಗೆ ತಾನು ಮಾಡಿರುವ ಆರೋಪದ ಮೇಲೆ ಅಷ್ಟೊಂದು ವಿಶ್ವಾಸವಿದ್ದರೆ ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ 5 ವರ್ಷಗಳ ಆಡಳಿತಾವಧಿಯ ಹಣಕಾಸು ಸ್ಥಿತಿ ಬಗ್ಗೆ ಸಾರ್ವಜನಿಕ ಚರ್ಚೆ ಏರ್ಪಡಿಸಿ, ಸ್ಥಳ-ಸಮಯ ತಿಳಿಸಿದರೆ ಅದರಲ್ಲಿ ನಾನು ಭಾಗವಹಿಸುತ್ತೇನೆ'
-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X