Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣಾ ಆಯೋಗ ಬದುಕಿದ್ದರೆ ಬಿಜೆಪಿ...

ಚುನಾವಣಾ ಆಯೋಗ ಬದುಕಿದ್ದರೆ ಬಿಜೆಪಿ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳಲಿ: ಡಿ.ಕೆ. ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ26 Oct 2020 6:41 PM IST
share
ಚುನಾವಣಾ ಆಯೋಗ ಬದುಕಿದ್ದರೆ ಬಿಜೆಪಿ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳಲಿ: ಡಿ.ಕೆ. ಶಿವಕುಮಾರ್

ಬೆಂಗಳೂರು, ಅ.26: ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ತಮ್ಮ ಫೋಟೋ ಹಾಕಿಕೊಂಡು ಸೆಟ್ಟಾಪ್ ಬಾಕ್ಸ್ ಹಂಚುತ್ತಿರೋದನ್ನು ಒಪ್ಪಿಕೊಂಡಿದ್ದಾರೆ. ಚುನಾವಣಾ ಆಯೋಗ ಬದುಕಿದ್ದರೆ ಕೂಡಲೇ ಕ್ರಮ ಕೈಗೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಸೋಮವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಅಭ್ಯರ್ಥಿ ತಮ್ಮ ಕಂಪನಿ ಹೆಸರಲ್ಲಿ ಸೆಟ್ಟಾಪ್ ಬಾಕ್ಸ್ ಕೊಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ. ಚುನಾವಣಾ ಆಯೋಗ ಬದುಕಿದ್ದರೆ, ಕಾನೂನಿಗೆ ರಕ್ಷಣೆ ಕೊಡುವುದಾದರೆ ತಕ್ಷಣ ಕ್ರಮ ಕೈಗೊಳ್ಳಲಿ ಎಂದರು.

ಈ ವಿಚಾರದಲ್ಲಿ ಯಾರು ದೂರು ನೀಡಬೇಕಾದ ಅಗತ್ಯವಿಲ್ಲ. ಅಭ್ಯರ್ಥಿ ಅದು ನನ್ನ ವ್ಯವಹಾರ ಅಂತಾ ಒಪ್ಪಿಕೊಂಡಿದ್ದಾರೆ. ಅದು ವ್ಯವಹಾರವಾಗಿದ್ದರೆ ತಮ್ಮ ಫೋಟೋ ಹಾಕಿಕೊಂಡು ಕೊಡಲು ನೀತಿ ಸಂಹಿತೆಯಲ್ಲಿ ಅವಕಾಶ ಇಲ್ಲ. ಅವರ ಈ ಹೇಳಿಕೆಯೇ ಅವರು ಸೆಟ್ಟಾಪ್ ಬಾಕ್ಸ್ ಕೊಡುತ್ತಿರುವುದು ಸತ್ಯ ಎಂದು ಹೇಳುತ್ತಿದೆ ಎಂದು ಶಿವಕುಮಾರ್ ತಿಳಿಸಿದರು. 

ಕೂಡಲೇ ಬಿಜೆಪಿ ಅಭ್ಯರ್ಥಿ ಪರ ಐಪಿಸಿ ಸೆಕ್ಷನ್ 171 ಎ, ಬಿ, ಸಿ, ಡಿ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. 123 ಜನಪ್ರತಿನಿಧಿ ಕಾಯ್ದೆ ಅಡಿಯಲ್ಲೂ ಕಾನೂನಿನ ಕ್ರಮ ಕೈಗೊಳ್ಳಬೇಕು. ಇನ್ನು ಚುನಾವಣಾ ಆಯೋಗದ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳಬೇಕೋ ಅದನ್ನು ತಕ್ಷಣವೇ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯ ಮಾಡಿದರು.

ನನ್ನ ವಿರುದ್ಧ ಕೇವಲ ಸದಾನಂದ ಗೌಡರು, ಅಶ್ವಥ್ ನಾರಾಯಣ, ಆರ್.ಅಶೋಕ್, ಸಿ.ಟಿ. ರವಿ, ಎಸ್.ಟಿ.ಸೋಮಶೇಖರ್ ಇವರೇ ಯಾಕೆ ಟೀಕೆ ಮಾಡುತ್ತಿದ್ದಾರೆ. ಕೇವಲ ಒಂದು ಸಮುದಾಯದ ನಾಯಕರೇ ಯಾಕೆ ಟೀಕೆ ಮಾಡುತ್ತಿದ್ದಾರೆ? ಯಡಿಯೂರಪ್ಪನವರು ಯಾಕೆ ಮಾತನಾಡುತ್ತಿಲ್ಲ. ನಾನು ಯಾವ ವಿಚಾರದಲ್ಲಿ ಜಾತಿ ರಾಜಕಾರಣ ಮಾಡುತ್ತಿದ್ದೇನೆ? ನನ್ನ ವಿರುದ್ಧ ಒಂದು ಸಮುದಾಯದ ನಾಯಕರೇ ಯಾಕೆ ಟೀಕೆ ಮಾಡುತ್ತಿದ್ದಾರೆ? ಇದು ಜಾತಿ ರಾಜಕಾರಣ ಅಲ್ಲವೇ? ನನಗೆ ಕಾಂಗ್ರೆಸ್ಸೇ ಜಾತಿ ಎಂದು ಶಿವಕುಮಾರ್ ತಿರುಗೇಟು ನೀಡಿದರು.

ರೈತ ಮುಖಂಡ ಮಾರುತಿ ಮಾನ್ಪಡೆ ಅವರ ಸಾವಿಗೆ ನಾವು ಕಾರಣವಾಗಿದ್ದರೆ, ನಮ್ಮ ವಿರುದ್ಧ ಪ್ರಕರಣ ದಾಖಲಿಸುವಂತೆ ಸರಕಾರಕ್ಕೆ ಹೇಳಿ ಎಂದು ಪ್ರಶ್ನೆಯೊಂದಕ್ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.

ಮುನಿರತ್ನ ವಿರುದ್ಧ ಚು.ಆಯೋಗಕ್ಕೆ ದೂರು

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ, ಮತದಾರರ ಮೇಲೆ ಪ್ರಭಾವ ಬೀರಲು ಸೆಟ್ಟಾಪ್ ಬಾಕ್ಸ್ ಗಳನ್ನು ಹಂಚಿಕೆ ಮಾಡುತ್ತಿದ್ದು, ಅವರ ವಿರುದ್ಧ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಕೆಪಿಸಿಸಿ ಕಾನೂನು ಸುಧಾರಣಾ ವಿಭಾಗದ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಸೋಮವಾರ ದೂರು ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X