Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ...

ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ ಕಲ್ಲಿನ ಕೋರೆಗಳಿಗೆ ತಾತ್ಕಾಲಿಕ ತಡೆ: ಸಚಿವ ಕೋಟ

ವಾರ್ತಾಭಾರತಿವಾರ್ತಾಭಾರತಿ26 Oct 2020 7:32 PM IST
share
ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನ ಕಲ್ಲಿನ ಕೋರೆಗಳಿಗೆ ತಾತ್ಕಾಲಿಕ ತಡೆ: ಸಚಿವ ಕೋಟ

ಬಂಟ್ವಾಳ: ಐತಿಹಾಸಿಕ ಕಾರಿಂಜೇಶ್ವರ ದೇವಸ್ಥಾನದ ರಕ್ಷಣೆಯ ಹಿತದೃಷ್ಟಿಯಿಂದ ದೇವಸ್ಥಾನದ ಆಸುಪಾಸಿನಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಕಲ್ಲಿನ ಕೋರೆಗಳಿಗೆ ತಾತ್ಕಾಲಿಕ ತಡೆ ನೀಡಲು‌ ನಿರ್ಧರಿಸಲಾಗಿದೆ ಎಂದು ಧಾರ್ಮಿಕದತ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ‌.

ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಜೊತೆ ಸೋಮವಾರ ಭೇಟಿ ನೀಡಿದ ಸಚಿವರು, ಕಾರಿಂಜದಲ್ಲಿ ಕೆಲವು ದಿನಗಳ ಹಿಂದೆ ಕುಸಿದು ಬಿದ್ದಿರುವ ತಡೆಗೋಡೆಯನ್ನು ವೀಕ್ಷಿಸಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು.

ಕಲ್ಲಿನ ಕೋರೆ ಹಾಗೂ ಜಲ್ಲಿಕ್ರಷರ್ ನಿಂದ ಕಾರಿಂಜ ದೇವಸ್ಥಾನಕ್ಕೆ ಸಮಸ್ಯೆಯಾಗುತ್ತಿದೆ ಎಂಬ ಭಕ್ತಾದಿಗಳ ದೂರಿನ ಹಿನ್ನೆಲೆಯಲ್ಲಿ‌ ಶಾಸಕರ ಜೊತೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಬಗ್ಗೆ ಅಧಿಕಾರಿಗಳ ಸಭೆ ಕೂಡಾ ನಡೆಸಿದ್ದೇನೆ. ದೇವಸ್ಥಾನಕ್ಕೆ ಹಾನಿ ಉಂಟಾಗುವ ಸಂಭವವಿರುವುದರಿಂದ ಸಂಭವನೀಯ ಹಾನಿಯನ್ನು ತಪ್ಪಿಸಲು ದೇವಸ್ಥಾನದ ಆಸುಪಾಸಿನಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಕಲ್ಲಿನ ಕೋರೆ ಮತ್ತು ಜಲ್ಲಿಕ್ರಷರ್ ಗಳಿಗೆ ತಾತ್ಕಾಲಿಕವಾಗಿ ತಡೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ದೇವಸ್ಥಾನದ ಸುತ್ತಮುತ್ತಲಿನ ಮೂರು ಕಲ್ಲಿನ ಕೋರೆಗಳು ಅಧಿಕೃತವಾಗಿದ್ದು ಪದ್ಮಶೇಖರ್ ಜೈನ್ ಹಾಗೂ ಲಕ್ಷ್ಮಣ್ ಎಂಬವರ ಎರಡು ಕೋರೆಗಳು ತಾಂತ್ರಿಕ ಕಾರಣಗಳಿಂದ ಕಾರ್ಯಸ್ಥಗಿತಗೊಳಿಸಿದೆ. ಪ್ರಸಕ್ತ ಕಾರ್ಯಾಚರಿಸುತ್ತಿರುವ ಮರ್ವಿನ್ ಎಂಬವರ ಕೋರೆಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲು ಅಧಿಕಾರಿಗಳ ಮೂಲಕ‌ ಸೂಚನೆ ನೀಡಲಾಗುವುದು ಎಂದು ಅವರು ಹೇಳಿದರು.

ಗಣಿಗಾರಿಕೆಯಿಂದ ದೇವಳಕ್ಕೆ ಹಾಗೂ ಇಲ್ಲಿನ ಬಂಡೆಗಳಿಗೆ ಆಗುವ ತೊಂದರೆಗಳ ಬಗ್ಗೆ ಎನ್ಐಟಿಕೆಯ ತಜ್ಞರಿಂದ ಪರಿಶೀಲನೆ ನಡೆಸಿ ಅವರ ವರದಿಯನ್ನಾಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು. ರಾಜ್ಯದ ಎಲ್ಲಾ ದೇವಸ್ಥಾನಗಳ ರಕ್ಷಣೆಗೆ ಸರಕಾರ ಮತ್ತು ಜಿಲ್ಲಾಡಳಿತ ಬದ್ಧವಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ, ಮುಜರಾಯಿ ಇಲಾಖೆ ಸಹಾಯಕ ಕಮೀಷನರ್ ವೆಂಕಟೇಶ್, ಗಣಿ ಇಲಾಖಾಧಿಕಾರಿ ಮಹದೇಶ್ವರ, ತಹಶಿಲ್ದಾರ್ ರಶ್ಮಿ ಎಸ್.ಆರ್. ಮೊದಲಾದವರು ಉಪಸ್ಥಿತರಿದ್ದರು.

ಕಾರಿಂಜ ಕ್ಷೇತ್ರದ ಅಭಿವೃದ್ಧಿಗೆ ಮಾಸ್ಟರ್ ಫ್ಲ್ಯಾನ್ 

ಕುಸಿದು ಬಿದ್ದಿರುವ ದೇವಸ್ಥಾನದ ಆವರಣ ಗೋಡೆಯ ಪುನರ್ ನಿರ್ಮಾಣ ಹಾಗೂ ಅನೇಕ ತುರ್ತು ಕಾಮಗಾರಿಗಳನ್ನು ಶೀಘ್ರ ನಡೆಸುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಶಾಸಕ ರಾಜೇಶ್ ನಾಯ್ಕ್ ಅವರ ಕೋರಿಕೆಯಂತೆ ಕಾರಿಂಜೇಶ್ವರ ಕ್ಷೇತ್ರವನ್ನು ಪ್ರವಾಸೋದ್ಯಮಕ್ಕೆ ಸೇರ್ಪಡೆಗೊಳಿಸಲಾಗಿದ್ದು ತಜ್ಞರ ಸಲಹೆಯೊಂದಿಗೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X