Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮ್ಯಾಚ್ ಫಿಕ್ಸಿಂಗ್ ರೀತಿ ವೋಟ್...

ಮ್ಯಾಚ್ ಫಿಕ್ಸಿಂಗ್ ರೀತಿ ವೋಟ್ ಫಿಕ್ಸಿಂಗ್: ಶರವಣ ಆರೋಪ

ಉಪಚುನಾವಣೆ

ವಾರ್ತಾಭಾರತಿವಾರ್ತಾಭಾರತಿ26 Oct 2020 9:23 PM IST
share
ಮ್ಯಾಚ್ ಫಿಕ್ಸಿಂಗ್ ರೀತಿ ವೋಟ್ ಫಿಕ್ಸಿಂಗ್: ಶರವಣ ಆರೋಪ

ಬೆಂಗಳೂರು, ಅ. 26: ಉಪಚುನಾವಣೆ ಗೆಲ್ಲಲು ಒಂದು ಕಡೆ ಜಾತಿ, ಇನ್ನೊಂದು ಕಡೆ ಅಧಿಕಾರ ಬಳಸಲಾಗುತ್ತಿದೆ. ಕೊರೋನ ವೈರಸ್‍ಗಿಂತಲೂ ಇಂತಹ ನಾಯಕರು ಅಪಾಯಕಾರಿ. ಮತದಾರರಿಗೆ ಹಣ, ಹೆಂಡ ಹಂಚಿದ್ದಾಯಿತು, ಈಗ ಸೆಟ್‍ಟಾಪ್ ಬಾಕ್ಸ್ ನೀಡುತ್ತಿದ್ದಾರೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಆರೋಪಿಸಿದ್ದಾರೆ.

ಸೋಮವಾರ ನಗರದ ಜೆಪಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಜಾತಿ ಆಧಾರದ ಮೇಲೆ ಮತ ಕೇಳುತ್ತಿದ್ದಾರೆ. ಹುಟ್ಟಿದಾಗ ಜಾತಿ-ಜಾತಕ, ಮಧ್ಯದಲ್ಲಿ ನಾಟಕ, ಸತ್ತಾಗ ಸೂತಕ ಎಂದು ಎಲ್ಲರಿಗೂ ಗೊತ್ತಿದೆ. ಜಾತಿ ಬಿಟ್ಟು, ಅಭಿವೃದ್ಧಿ ಬಗ್ಗೆ ಮಾತನಾಡಬೇಕು. ಸರಕಾರ ಮ್ಯಾಚ್ ಫಿಕ್ಸಿಂಗ್ ರೀತಿ ವೋಟ್ ಫಿಕ್ಸಿಂಗ್ ಮಾಡಿರುವಂತೆ ಕಾಣುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಚುನಾವಣಾ ಅಕ್ರಮ ಎಸಗುತ್ತಿದ್ದರೂ ಆಯೋಗ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿ ಅಭ್ಯರ್ಥಿ ಶಾಸಕ ಸ್ಥಾನ ಮಾರಾಟ ಮಾಡಿಕೊಂಡಿದ್ದಕ್ಕೆ ಉಪಚುನಾವಣೆ ಬಂದಿದೆ. ಆದರೆ, ಫೇಸ್‍ಬುಕ್‍ಗಳಲ್ಲಿ ನಮ್ಮ ಅಭ್ಯರ್ಥಿ ಮಾರಾಟವಾಗಿದ್ದಾರೆಂದು ಸುಳ್ಳು ಸುದ್ದಿಯನ್ನು ಉದ್ದೇಶಪೂರ್ವಕವಾಗಿ ಹಬ್ಬಿಸಲಾಗುತ್ತಿದೆ. ಈ ಮೂಲಕ ನಮ್ಮ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಲಾಗುತ್ತಿದೆ. ಆದುದರಿಂದ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

'ಮಾರಾಟ ಆಗಿದ್ದು ಅವರು': ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಮಾತನಾಡಿ, ಮಾರಾಟ ಆಗಿರುವುದು ನಾವಲ್ಲ, ಬಿಜೆಪಿ ಮತ್ತು ಕಾಂಗ್ರೆಸ್‍ನವರು ಮಾರಾಟವಾಗಿದ್ದಾರೆ. ನನ್ನ ಭಯ ಹುಟ್ಟಿರುವುದರಿಂದಲೇ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸುಖಾ ಸುಮ್ಮನೇ ವ್ಯಕ್ತಿಯ ತೇಜೋವಧೆ ಮಾಡುವುದು ಸರಿಯಲ್ಲ. ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ನಮ್ಮ ನಾಯಕರು ಟಿಕೆಟ್ ಕೊಟ್ಟಿದ್ದೇ ತಪ್ಪಾ..? ಯುವಕರು ಬೆಳೆಯಬಾರದಾ..? ಎಂದು ಪ್ರಶ್ನಿಸಿದರು.

ಚುನಾವಣೆ ವೇಳೆ ಹನುಮಂತರಾಯಪ್ಪ ಅವರಿಗೆ ಒಕ್ಕಲಿಗರ ಮೇಲೆ ಪ್ರೀತಿ ಬಂದಿದೆ. ಜಾತಿ ಹೆಸರು ಹೇಳುವುದಕ್ಕಿಂತ ಮುಂಚೆ ಸಮಾಜಕ್ಕೆ ನೀವು ಏನು ಮಾಡಿದ್ದೀರಿ ಎಂಬುದನ್ನು ಹೇಳಬೇಕು. ಐಎಎಸ್ ಅಧಿಕಾರಿ ಡಿ.ಕೆ.ರವಿ ಕುಟುಂಬವೂ ಒಕ್ಕಲಿಗರೇ ಅವರಿಗೇಕೆ ಸಹಾಯ ಮಾಡಲಿಲ್ಲ. ಕುಮಾರಸ್ವಾಮಿ, ದೇವೇಗೌಡರು ಒಕ್ಕಲಿಗರೇ. ಚುನಾವಣೆಯಲ್ಲಿ ಜಾತಿ ರಾಜಕಾರಣ ಏಕೆ ಮಾಡುತ್ತಿದ್ದೀರಿ ಎಂದು ಅವರು ಕೇಳಿದರು.

'ಆರ್.ಆರ್.ನಗರಕ್ಕೆ ಗೂಂಡಾಗಳು': ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಮಾತನಾಡಿ, ಚುನಾವಣೆ ವೇಳೆ ಭೂತದ ಬಾಯಲ್ಲಿ ಭಗವದ್ಗೀತೆ ಬರುತ್ತಿದೆ. ಮುನಿರತ್ನರನ್ನು ಬೆಳೆಸಿದ್ದು ಡಿ.ಕೆ.ಸಹೋದರರು. ಕನಕಪುರದಿಂದ ಗೂಂಡಾಗಳನ್ನು ಕರೆಸಿ ಮುನಿರತ್ನಗೆ ಬೆಂಬಲ ನೀಡಿದ್ದಾರೆ. ಈಗ ಒಕ್ಕಲಿಗ ಕಾರ್ಡ್‍ನ್ನು ಚುನಾವಣೆಯಲ್ಲಿ ಬಳಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಅಭ್ಯರ್ಥಿಯ ತಂದೆ ಹನುಮಂತರಾಯಪ್ಪ ಅವರಿಗೆ ದುರಾಸೆ, ಅಧಿಕಾರ ದಾಹ ಇದೆ. ಅವರ ಕೈಯಲ್ಲಿ ಆಗಲಿಲ್ಲ ಅಂತ ತಮ್ಮ ಮಗಳನ್ನು ಚುನಾವಣೆಗೆ ನಿಲ್ಲಿಸಿದ್ದಾರೆ. ತನ್ನ ಮಗಳಿಗೆ ಅನ್ಯಾಯ ಆಗಿದೆ. ಆದುದರಿಂದ, ಒಕ್ಕಲಿಗರೆಲ್ಲಾ ಒಂದಾಗಿ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಕೇಳುತ್ತಿದ್ದಾರೆ. ಒಕ್ಕಲಿಗ ಸಮಾಜಕ್ಕೆ ಯಾವತ್ತಿದ್ರೂ ದೇವೇಗೌಡರು, ಕುಮಾರಸ್ವಾಮಿ ಅವರೇ ನಾಯಕರು ಎಂದು ಹೇಳಿದರು.

ಆಯೋಗಕ್ಕೆ ದೂರು: ಆರ್.ಆರ್.ನಗರ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕೆಂಪೇಗೌಡ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಪೇಜ್ ವಿರುದ್ಧ ಸೈಬರ್ ಕ್ರೈಮ್, ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಯಿತು. ಜೆಡಿಎಸ್ ಅಭ್ಯರ್ಥಿ 5 ಕೋಟಿ ರೂ.ಗೆ ಮಾರಾಟವಾಗಿದ್ದಾರೆ ಎಂದು ಪೇಜ್‍ನಲ್ಲಿ ಪೋಸ್ಟ್ ಮಾಡಲಾಗಿತ್ತು. ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ತಕ್ಷಣ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಲಾಗಿದೆ. ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಆರ್.ಕೇಶವಮೂರ್ತಿ ಸೇರಿ ಅನೇಕ ಮುಖಂಡರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X