Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆಯರಿಗೆ ರಾಜಕೀಯ ಪ್ರಜ್ಞೆ ಬೆಳೆದರೆ...

ಮಹಿಳೆಯರಿಗೆ ರಾಜಕೀಯ ಪ್ರಜ್ಞೆ ಬೆಳೆದರೆ ಸಮಾಜಕ್ಕೆ ಒಳಿತು: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ27 Oct 2020 4:25 PM IST
share
ಮಹಿಳೆಯರಿಗೆ ರಾಜಕೀಯ ಪ್ರಜ್ಞೆ ಬೆಳೆದರೆ ಸಮಾಜಕ್ಕೆ ಒಳಿತು: ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.27: ನಾವು ಹೆಣ್ಣು ಕುಟುಂಬದ ಕಣ್ಣು ಅಂತಾ ನಂಬುತ್ತೇವೆ. ಮಹಿಳೆಯರಿಗೆ ರಾಜಕೀಯ ಪ್ರಜ್ಞೆ ಬೆಳೆದರೆ ಸಮಾಜಕ್ಕೆ ಒಳ್ಳೆಯದಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಆರ್.ಆರ್.ನಗರ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಲು, ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ವಾಸವಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ಮೂಲನಿವಾಸಿಗಳ ಸಭೆಯಲ್ಲಿ ಅವರು ಮಾತನಾಡಿದರು.

ನಮ್ಮ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನಲ್ಲಿ ಮಹಿಳೆಯರಿಗೆ ಬೊಮ್ಮನಹಳ್ಳಿ, ರಾಜಾಜಿನಗರ ಹಾಗೂ ಜಯನಗರ ಒಟ್ಟು 3 ಕ್ಷೇತ್ರಗಳಲ್ಲಿ ಪ್ರಾತಿನಿಧ್ಯ ನೀಡಿದೆ. ಆದರೆ, ಬಿಜೆಪಿಯವರು 28 ಕ್ಷೇತ್ರದಲ್ಲಿ ಒಂದು ಕ್ಷೇತ್ರವನ್ನು ಕೊಟ್ಟಿಲ್ಲ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಮಹಿಳೆಯರ ಪ್ರಮಾಣ ಶೇ.52ರಷ್ಟಿದೆ. ಭವಿಷ್ಯದ ರಾಜಕೀಯದಲ್ಲಿ ಪ್ರಜ್ಞಾವಂತ ಹೆಣ್ಣುಮಕ್ಕಳಿರಬೇಕು. ಅವರ ನೋವುಗಳನ್ನು ಹೇಳಿಕೊಳ್ಳಲು ವಿಧಾನಸಭೆಯಲ್ಲಿ ಹೆಣ್ಣುಮಕ್ಕಳು ಇರಬೇಕು. ಹೀಗಾಗಿ ಇಂದು ಬುದ್ಧಿವಂತ, ಪ್ರಜ್ಞಾವಂತ, ಸ್ವಾಭಿಮಾನಿ ಹೆಣ್ಣನ್ನು ಆರ್.ಆರ್.ನಗರದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇವೆ. ಈ ಕ್ಷೇತ್ರದ ಜನ ಹಾಗೂ ಮಹಿಳೆಯರು ಪಕ್ಷಭೇದ, ಜಾತಿ-ಧರ್ಮಭೇದ ಬಿಟ್ಟು ಒಂದಾಗಿ ಕುಸುಮಾ ಅವರನ್ನು ಗೆಲ್ಲಿಸುತ್ತಾರೆಂಬ ನಂಬಿಕೆ ಇದೆ ಎಂದು ಅವರು ಹೇಳಿದರು.

ಇದು ಮನೆಬಾಗಿಲಿಗೆ ಬಂದಿರುವ ಅವಕಾಶ. ಇದನ್ನು ನೀವು ಬಳಸಿಕೊಳ್ಳಬೇಕು. ನಾನು ಬಿಜೆಪಿ, ದಳದ ಬಗ್ಗೆ ಮಾತನಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಈ ಕ್ಷೇತ್ರದಲ್ಲಿ ನಾವು ಕೆಲವು ತಪ್ಪು ಮಾಡಿದ್ದೇವೆ. ಆ ವ್ಯಕ್ತಿ ವಿರುದ್ಧ ಮಹಿಳಾ ಕಾರ್ಪೋರೇಟರ್ ಯಾವ ರೀತಿ ಹೋರಾಟ ಮಾಡಿದ್ದಾರೆ. ನಾವು ಅದನ್ನೆಲ್ಲ ನೋಡಿ ಸುಮ್ಮನಿದ್ದು ತಪ್ಪು ಮಾಡಿದೆವು ಎಂದು ಶಿವಕುಮಾರ್ ತಿಳಿಸಿದರು.

ಕ್ಷೇತ್ರದಲ್ಲಿ ಎಲ್ಲ ಕಾರ್ಯಕರ್ತರೂ ಕುಸುಮಾ ಅವರ ಪರ ಕೆಲಸ ಮಾಡುತ್ತಿದ್ದಾರೆ. ನೀವು ನಿಮ್ಮ ಸ್ನೇಹಿತರು, ಕುಟುಂಬ ಸದಸ್ಯರು ಹಾಗೂ ಅಕ್ಕ ಪಕ್ಕದವರ ಜತೆ ಮಾತಾಡಿ ಕುಸುಮಾ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಆರ್ಥಿಕ ವ್ಯವಸ್ಥೆ, ಉದ್ಯೋಗ, ಮಹಿಳೆಯರು, ರೈತರ ವಿಚಾರವಾಗಿ ಬಿಜೆಪಿ ಸರಕಾರ ಏನು ಭರವಸೆ ಕೊಟ್ಟಿತ್ತು. ಆದರೆ ಏನು ಮಾಡಿದೆ ಎಂಬುದರ ಬಗ್ಗೆ ಮಾತನಾಡುವುದು ಸಾಕಷ್ಟಿದೆ. ಇದೆಲ್ಲ ನಿಮಗೆ ಅನುಭವವಾಗಿದೆ. ಈ ಸರಕಾರದಿಂದ ಜನಕ್ಕೆ ಪ್ರಯೋಜನ ಆಗಿಲ್ಲ ಅಂತಾ ಸಂದೇಶ ಕೊಡಬೇಕಿದೆ. ಅದಕ್ಕಾಗಿ ನವೆಂಬರ್ 3 ರಂದು ನಡೆಯುವ ಚುನಾವಣೆಯಲ್ಲಿ ಕುಸುಮಾ ಅವರನ್ನು ಗೆಲ್ಲಿಸಬೇಕಿದೆ ಎಂದು ಶಿವಕುಮಾರ್ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X