Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇ: ತುಂಬೆ ಗ್ರೂಪ್‌ಗೆ 23ರ ಸಂಭ್ರಮ

ಯುಎಇ: ತುಂಬೆ ಗ್ರೂಪ್‌ಗೆ 23ರ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ27 Oct 2020 6:13 PM IST
share
ಯುಎಇ: ತುಂಬೆ ಗ್ರೂಪ್‌ಗೆ 23ರ ಸಂಭ್ರಮ

ದುಬೈ, ಅ.27: ಡಾ.ತುಂಬೆ ಮೊಯ್ದಿನ್ ಸ್ಥಾಪಕಾಧ್ಯಕ್ಷರಾಗಿರುವ ತುಂಬೆ ಗ್ರೂಪ್‌ಗೆ 23 ವರ್ಷಗಳ ಸಂಭ್ರಮ. 1998ರಲ್ಲಿ ಡಾ.ತುಂಬೆ ಮೊಯ್ದಿನ್ ಸ್ಥಾಪಿಸಿದ ತುಂಬೆ ಗ್ರೂಪ್ ಕೇವಲ 23 ವರ್ಷಗಳಲ್ಲಿ ಜಾಗತಿಕವಾಗಿ ತನ್ನದೇ ಆದ ಸ್ಥಾನವನ್ನು ಸೃಷ್ಟಿಸಿಕೊಂಡಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

 ವೈದ್ಯಕೀಯ ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ಸಂಶೋಧನಾ ಕ್ಷೇತ್ರದ ಅಭಿವೃದ್ಧಿಯಲ್ಲಿ ತನ್ನದೇ ಕೊಡುಗೆಗಳನ್ನು ನೀಡುತ್ತಿರುವ ಯುಎಇಯ ಅಜ್ಮಾನ್‌ನಲ್ಲಿರುವ ತುಂಬೆ ಮೆಡಿಸಿಟಿ ಪ್ರಮುಖ ಪಾತ್ರವನ್ನು ಹೊಂದಿದೆ. ಈ ಸಂದರ್ಭದಲ್ಲಿ ಈ ಎಲ್ಲ ವರ್ಷಗಳ ಸಾಧನೆಯತ್ತ ಹಿನ್ನೋಟ ಬೀರಿರುವ ಡಾ.ತುಂಬೆ ಮೊಯ್ದಿನ್ ಭವಿಷ್ಯದಲ್ಲಿ ಇನ್ನಷ್ಟು ಗುರಿಗಳನ್ನು ಸಾಧಿಸುವ ದೃಢ ಸಂಕಲ್ಪ ಹೊಂದಿರುವುದಾಗಿ ತಿಳಿಸಿದ್ದಾರೆ.

‘ಹೊಸ ಉಪಕ್ರಮಗಳನ್ನು ಕೈಗೊಳ್ಳುವ ತುಂಬೆ ಗ್ರೂಪ್ ಉತ್ಸಾಹವು ಸದಾ ಯುಎಇಯ ನಾಯಕತ್ವದ ವ್ಯೂಹಾತ್ಮಕ ಮುನ್ನೋಟದೊಂದಿಗೆ ಮೇಳೈಸಿರುವುದು ನಮ್ಮ ಯಶಸ್ಸಿಗೆ ಕಾರಣ ಎಂದವರು ಹೇಳಿದ್ದಾರೆ.

ತುಂಬೆ ಗ್ರೂಪ್‌ನ ವಿಶಿಷ್ಟ ಸಾಧನೆ ಮತ್ತು ಯುಎಇಯ ಕಾರ್ಪೊರೇಟ್ ಕ್ಷೇತ್ರದಲ್ಲಿ ಅದರ ಪ್ರತಿಷ್ಠೆ ಮಹತ್ತರ ಸಾಧನೆಯನ್ನು ಬೊಟ್ಟು ಮಾಡುತ್ತಿವೆ. ಮೊದಲ ಖಾಸಗಿ ಮೆಡಿಕಲ್ ವಿವಿ, ಮೊದಲ ಖಾಸಗಿ ಶೈಕ್ಷಣಿಕ ಆಸ್ಪತ್ರೆ, ಮೊದಲ ಮತ್ತು ಏಕೈಕ ಶೈಕ್ಷಣಿಕ ಆರೋಗ್ಯ ವ್ಯವಸ್ಥೆ ಹೀಗೆ ಪ್ರದೇಶದ ಖಾಸಗಿ ಕ್ಷೇತ್ರದಲ್ಲಿ ಹಲವು ಪ್ರಥಮಗಳ ಹೆಗ್ಗಳಿಕೆಯನ್ನು ತುಂಬೆ ಗ್ರೂಪ್ ಹೊಂದಿದೆ ಎಂದವರು ತಿಳಿಸಿದ್ದಾರೆ.

ಬೋಧನೆ ಮತ್ತು ತರಬೇತಿ, ವೈದ್ಯಕೀಯ ಸೇವೆ, ಸಂಶೋಧನೆ/ಹೊಸತನಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಜಾಗತಿಕ ನೈಪುಣ್ಯತೆಯ ಮೇಳೈಸುವಿಕೆಯೊಂದಿಗೆ ತುಂಬೆ ಮೆಡಿಸಿಟಿ ಭವಿಷ್ಯದ ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ಸಂಶೋಧನೆಯತ್ತ ಅತ್ಯುತ್ತಮ ವಿದ್ಯಾರ್ಥಿಗಳು ಮತ್ತು ವೃತ್ತಿಪರ ಪ್ರತಿಭೆಗಳನ್ನು ಆಕರ್ಷಿಸುತ್ತಿದೆ. 86ಕ್ಕೂ ಹೆಚ್ಚಿನ ದೇಶಗಳ ವಿದ್ಯಾರ್ಥಿಗಳು ಗಲ್ಫ್ ಮೆಡಿಕಲ್ ವಿವಿ (ಜಿಎಂಯು)ಯಲ್ಲಿ ವ್ಯಾಸಂಗ ಮಾಡುತ್ತಿದ್ದು, 30ಕ್ಕೂ ಹೆಚ್ಚಿನ ದೇಶಗಳ ಬೋಧಕರು ಮತ್ತು ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದಾರೆ. ಆರು ಕಾಲೇಜುಗಳು, ಮಾನ್ಯತೆ ಹೊಂದಿರುವ 26 ಕೋರ್ಸ್‌ಗಳು, 2,000ಕ್ಕೂ ಅಧಿಕ ಪೂರ್ಣಕಾಲಿಕ ವಿದ್ಯಾರ್ಥಿಗಳು ಮತ್ತು ಸುಮಾರು 2,000 ಅರೆಕಾಲಿಕ ವಿದ್ಯಾರ್ಥಿಗಳೊಂದಿಗೆ ಇದು ಪ್ರದೇಶದಲ್ಲೇ ಅತ್ಯಂತ ದೊಡ್ಡ ಖಾಸಗಿ ಮೆಡಿಕಲ್ ವಿವಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಿಎಂಯು ವಿಶ್ವಾದ್ಯಂತ ಸುಮಾರು 70 ಪ್ರತಿಷ್ಠಿತ ವಿವಿಗಳು ಮತ್ತು ಸಂಶೋಧನಾ ಸಂಸ್ಥೆಗಳೊಂದಿಗೆ ಸಹಭಾಗಿತ್ವವನ್ನು ಹೊಂದಿದೆ ಎಂದು ತುಂಬೆ ಗ್ರೂಪ್ ಪ್ರಕಟನೆ ತಿಳಿಸಿದೆ.

ಪ್ರದೇಶದಲ್ಲಿ ಅತ್ಯಂತ ದೊಡ್ಡ ಖಾಸಗಿ ಶೈಕ್ಷಣಿಕ ಆಸ್ಪತ್ರೆಗಳ ಸರಣಿ ಎಂದು ಹೆಸರಾಗಿರುವ ತುಂಬೆ ಹಾಸ್ಪಿಟಲ್ ನೆಟ್‌ವರ್ಕ್ 175ಕ್ಕೂ ಹೆಚ್ಚಿನ ರಾಷ್ಟ್ರಗಳ ರೋಗಿಗಳಿಗೆ ಚಿಕಿತ್ಸೆಯನ್ನು ನೀಡುತ್ತಿದೆ. ತುಂಬೆ ಗ್ರೂಪ್‌ನ ಆರೋಗ್ಯ ರಕ್ಷಣೆ ವಿಭಾಗವು ಎಂಟು ಶೈಕ್ಷಣಿಕ ಆಸ್ಪತ್ರೆಗಳು, 10 ಫ್ಯಾಮಿಲಿ ಕ್ಲಿನಿಕ್‌ಗಳು, ಐದು ಡಯಾಗ್ನಸ್ಟಿಕ್ ಲ್ಯಾಬ್‌ಗಳು ಮತ್ತು 46 ಚಿಲ್ಲರೆ ಮಾರಾಟದ ಔಷಧಿ ಮಳಿಗೆಗಳನ್ನು ಹೊಂದಿದೆ. ದೇಶದ ಸುಮಾರು ಶೇ.20ರಷ್ಟು ವೈದ್ಯರು ಮತ್ತು ಸುಮಾರು ಶೇ.60ರಷ್ಟು ಆರೋಗ್ಯ ರಕ್ಷಣೆ ಸಿಬ್ಬಂದಿ ಗಲ್ಫ್ ಮೆಡಿಸಿಟಿಯಲ್ಲಿ ತರಬೇತಾಗುತ್ತಿದ್ದಾರೆ. ತುಂಬೆ ಗ್ರೂಪ್ 400 ವೈದ್ಯರು ಸೇರಿದಂತೆ 3,500ಕ್ಕೂ ಅಧಿಕ ಸಿಬ್ಬಂದಿಯನ್ನು ಹೊಂದಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X