Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2021ರ ಆರಂಭದಲ್ಲೇ ರಾಜ್ಯಕ್ಕೆ ಕೋವಿಡ್...

2021ರ ಆರಂಭದಲ್ಲೇ ರಾಜ್ಯಕ್ಕೆ ಕೋವಿಡ್ ಲಸಿಕೆ ದೊರೆಯುವ ನಿರೀಕ್ಷೆ: ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ27 Oct 2020 6:18 PM IST
share
2021ರ ಆರಂಭದಲ್ಲೇ ರಾಜ್ಯಕ್ಕೆ ಕೋವಿಡ್ ಲಸಿಕೆ ದೊರೆಯುವ ನಿರೀಕ್ಷೆ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಅ.27: 2021ರ ಆರಂಭದಲ್ಲೇ ಕೋವಿಡ್ ಲಸಿಕೆ ದೊರೆಯುವ ನಿರೀಕ್ಷೆ ಇದ್ದು, ರಾಜ್ಯದ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಮಂಗಳವಾರ ವಿಧಾನಸೌಧದಲ್ಲಿ ಆಸ್ಟ್ರಾಜನಿಕಾ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುಣೆಯ ಸೇರಂ ಸಂಸ್ಥೆ ಜೊತೆ ಆಸ್ಟ್ರಾಜನಿಕಾ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡು ಲಸಿಕೆಯ ಪ್ರಾಯೋಗಿಕ ಪರೀಕ್ಷೆ ನಡೆಸುತ್ತಿದೆ. ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಪ್ರಯೋಗ ಮಾಡಲಾಗುತ್ತಿದೆ ಎಂದರು.

ಮೈಸೂರಿನ ಜೆಎಸ್‍ಎಸ್ ಸಂಸ್ಥೆ ಜೊತೆಗೂ ಒಪ್ಪಂದವಾಗಿದೆ. 56 ದಿನಗಳ ಹಿಂದಷ್ಟೇ ಒಂದನೇ ಹಂತದ ಪ್ರಯೋಗವನ್ನು ಯಶಸ್ವಿಯಾಗಿ ಮಾಡಲಾಗಿದೆ. ಇನ್ನು 2 ಹಾಗೂ 3 ನೇ ಹಂತದಲ್ಲಿ ದೇಶದ 1,600 ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗುತ್ತದೆ. ಇನ್ನಷ್ಟು ಹೆಚ್ಚು ಜನರನ್ನು ಲಸಿಕೆ ಪ್ರಯೋಗಕ್ಕೆ ಒಳಪಡಿಸಬೇಕು ಎಂದು ಸಂಸ್ಥೆಗೆ ಕೋರಲಾಗಿದೆ. ಜೊತೆಗೆ ರಾಜ್ಯದಲ್ಲಿ ಲಸಿಕೆ ವಿತರಣೆ ಸಿದ್ಧತೆ ಕುರಿತು ಚರ್ಚಿಸಲಾಗಿದೆ. 100 ಕೋಟಿ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವಿದೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ ಎಂದು ಸುಧಾಕರ್ ವಿವರಿಸಿದರು.

ಕೇಂದ್ರ ಆರೋಗ್ಯ ಸಚಿವಾಲಯದ ಸಹಯೋಗದೊಂದಿಗೆ ಆರೋಗ್ಯ ತಜ್ಞರು, ತಾಂತ್ರಿಕ ಪರಿಣಿತರು, ಪೂರೈಕೆದಾರರನ್ನು ಒಳಗೊಂಡಂತೆ ತಾಂತ್ರಿಕ ಸಮಿತಿ ರಚಿಸಿದ್ದು, ಲಸಿಕೆಯ ಪೂರೈಕೆ, ಸಂಗ್ರಹಣೆ, ವಿತರಣೆ ಕುರಿತು ಸಮಿತಿ ಸಲಹೆ ನೀಡಲಿದೆ. ಮೊದಲ ಹಂತದಲ್ಲಿ ರಾಜ್ಯದ ಎಲ್ಲ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಸಿದ್ಧತೆ ನಡೆಸಲಾಗುತ್ತಿದ್ದು, ಮುಂದಿನ ಹಂತದಲ್ಲಿ ವಯೋವೃದ್ಧರು, ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ, ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಲಸಿಕೆ ನೀಡಲಾಗುತ್ತದೆ ಎಂದು ಅವರು ಹೇಳಿದರು.

ಲಸಿಕೆಯ ದರದ ಬಗ್ಗೆ ಈಗ ಚರ್ಚೆಯಾಗುತ್ತಿದೆ. ನಮ್ಮ ಸರಕಾರ ಕೋವಿಡ್ ಪರೀಕ್ಷೆ, ಚಿಕಿತ್ಸೆ ಮೊದಲಾದ ವೆಚ್ಚಗಳನ್ನು ಭರಿಸಿದೆ. ಅದೇ ರೀತಿ ರಾಜ್ಯದ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲು ಬದ್ಧ ಎಂದು ಸುಧಾಕರ್ ತಿಳಿಸಿದರು.

ಒಂದನೇ ಹಂತದ ಪ್ರಯೋಗದಲ್ಲಿ ಲಸಿಕೆ ನೀಡಿದಾಗ 28 ದಿನಗಳಲ್ಲಿ ಆ್ಯಂಟಿಬಾಡಿ ಉತ್ಪಾದನೆ ಆಗಿದೆ. 1ನೇ ಹಂತದಲ್ಲಿ ಕೊರೋನ ಸೋಂಕು ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೀಡಲಾಗಿದೆ. 2, 3ನೇ ಹಂತಗಳಲ್ಲಿ ಕೊರೋನ ಸೋಂಕು ಬಂದಿರುವವರಿಗೂ ಲಸಿಕೆ ನೀಡಲಾಗುತ್ತದೆ. ಪ್ರಯೋಗ ಯಶಸ್ವಿಯಾಗಿ ಕೇಂದ್ರ ಸರಕಾರ ಅನುಮತಿ ನೀಡಿದ ನಂತರ ಕೇಂದ್ರದೊಂದಿಗೆ ಮಾತುಕತೆ ನಡೆಸಿ, ರಾಜ್ಯದಲ್ಲಿ ಲಸಿಕೆ ವಿತರಿಸಲಾಗುವುದು ಎಂದು ಅವರು ಹೇಳಿದರು.

ನಾನು ಆರೋಗ್ಯ ಖಾತೆ ವಹಿಸಿಕೊಂಡ ಬಳಿಕ ಕಳೆದ ಹತ್ತು ದಿನಗಳಿಂದ ಈಚೆಗೆ ಕೊರೋನ ಸೋಂಕು ಮತ್ತು ಕೋವಿಡ್ ಸಾವಿನ ಪ್ರಮಾಣದಲ್ಲಿ ಗಣನೀಯ ಇಳಿಕೆ ಉಂಟಾಗಿದೆ. ಇದಕ್ಕೆ ಕೆಲವರು ಸಂಶಯದಿಂದಲೂ ನೋಡುತ್ತಿದ್ದಾರೆ. ಯಾವುದೇ ಅಂಕಿ-ಸಂಖ್ಯೆಯನ್ನು ನಾವು ವ್ಯತ್ಯಾಸ ಮಾಡುವ ಕೆಲಸ ಮಾಡಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯೆ ಕರ್ನಾಟಕ ಸರಕಾರ ಅತ್ಯಂತ ಪಾರದರ್ಶಕವಾಗಿ ನಡೆದುಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಸುಧಾಕರ್ ಹೇಳಿದರು.

ಸಾವು, ಸೋಂಕು ಮತ್ತು ಗುಣಮುಖರಾದವರ ಅಂಕಿ-ಅಂಶಗಳನ್ನು ಅತ್ಯಂತ ಪಾರದರ್ಶಕವಾಗಿ ನೀಡುತ್ತಿದ್ದೇವೆ. ಇಳಿಮುಖವಾಗಲು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಯೊಬ್ಬ ಕೊರೋನ ಯೋಧರ ಪ್ರಯತ್ನ ಕಾರಣವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಲಸಿಕೆ ಇನ್ನೂ ಪ್ರಯೋಗದ ಹಂತದಲ್ಲಿದೆ. ಆದುದರಿಂದ, ಲಸಿಕೆಯ ದರದ ಬಗ್ಗೆ ಚರ್ಚಿಸಿಲ್ಲ. ಲಾಭಕ್ಕಾಗಿ ಲಸಿಕೆ ಮಾಡುತ್ತಿಲ್ಲ ಎಂದು ಆಸ್ಟ್ರಾಜನಿಕಾ ಕಂಪನಿಯವರು ಹೇಳಿದ್ದಾರೆ. ನವೆಂಬರ್, ಡಿಸೆಂಬರ್, ಜನವರಿಯ ಚಳಿಗಾಲದ ಅವಧಿಯಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿ ಎಂದು ಸುಧಾಕರ್ ಮನವಿ ಮಾಡಿದರು.

ಆಸ್ಟ್ರಾಜನಿಕಾ ವ್ಯವಸ್ಥಾಪಕ ನಿರ್ದೇಶಕ ಗಗನ್ ದೀಪ್ ಸಿಂಗ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್ ಸಭೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X