Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ...

ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ ನೀವೇ ಸಿಎಂ ಎಂದು ಮನೆಗೆ ಬಂದಿದ್ದರು: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ28 Oct 2020 5:09 PM IST
share
ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ ನೀವೇ ಸಿಎಂ ಎಂದು ಮನೆಗೆ ಬಂದಿದ್ದರು: ಕುಮಾರಸ್ವಾಮಿ

ಬೆಂಗಳೂರು, ಅ. 28: `ಇದೀಗ ಜೆಡಿಎಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಹೇಳುವ ನಾಯಕರೇ ಈ ಹಿಂದೆ ಅವರಪ್ಪನಾಣೆ ನಾನು ಸಿಎಂ ಆಗಲ್ಲ ಅಂತಾ ಹೇಳಿದ್ದರು. ಆದರೆ, ಅವರೆ 2018ರಲ್ಲಿ ನಮ್ಮ ಮನೆ ಬಾಗಿಲಿಗೆ ಬಂದು ನೀವೇ ಮುಖ್ಯಮಂತ್ರಿಯಾಗಿ ಎಂದು ದುಂಬಾಲು ಬಿದ್ದಿದ್ದನ್ನು ಇಡೀ ರಾಜ್ಯ ನೋಡಿದೆ' ಎಂದು ಪ್ರತಿಪಕ್ಷ ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಬುಧವಾರ ಆರ್.ಆರ್.ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ಕ್ಷೇತ್ರದ ಬಂಗಾರಪ್ಪ ನಗರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಿಂದ ಬೆಳೆದು ಬೆನ್ನಿಗೆ ಚೂರಿ ಹಾಕಿದ ಸಿದ್ದರಾಮಯ್ಯ ಜೆಡಿಎಸ್ ಪಕ್ಷಕ್ಕೆ ಹೀರೋ ಆಗಲು ಸಾಧ್ಯವೇ ಇಲ್ಲ. ಅವರು ಎಂದಿಗೂ ವಿಲನ್. ಕಾಂಗ್ರೆಸ್ ಪಕ್ಷದ ಒಂದು ವರ್ಗಕ್ಕೂ ಸಿದ್ದರಾಮಯ್ಯ ವಿಲನ್ ಎಂದು ಟೀಕಿಸಿದರು.

ಮುಂದೆ ಕೂಡ ಸಿದ್ದರಾಮಯ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತ ಸ್ಥಿತಿಗೆ ಬರುವ ಕಾಲ ಬಹಳ ದೂರವಿಲ್ಲ ಎಂದ ಕುಮಾರಸ್ವಾಮಿ, ಜೆಡಿಎಸ್ ಬಡವರು, ಶ್ರಮಿಕರು, ರೈತರು ಬೆಳೆಸಿದ ಪಕ್ಷ. ನಮ್ಮ ಹೊಣೆಗಾರಿಕೆ ಏನಿದ್ದರೂ ಜನರದ್ದು, ನಾವು ಅಂಬಾನಿ, ಆದಾನಿಗೆ ನಮ್ಮ ಪಕ್ಷದ ಜವಾಬ್ದಾರಿ ನೀಡಿಲ್ಲ. ಸಾಮಾನ್ಯ ಕಾರ್ಯಕರ್ತನಿಗೆ ನಾವು ಟಿಕೆಟ್ ನೀಡಿದ್ದೇವೆ. ಜೆಡಿಎಸ್‍ನ್ನು ಯಾರು ಕೊಂಡುಕೊಳ್ಳುವುದಕ್ಕೆ ಆಗಲ್ಲ ಎಂದು ತಿಳಿಸಿದರು.

ಕೊರೋನ ಸೋಂಕು ಬಂದಾಗ ಪ್ರಧಾನಿ ಮೋದಿ ಚಪ್ಪಾಳೆ ತಟ್ಟಿ ಅಂದ್ರು, ಆಮೇಲೆ ದೀಪ ಬೆಳಗಿಸಿ ಅಂದ್ರು. ಆ ದೀಪ ಹಚ್ಚಿ ಬಿಜೆಪಿಯವರು ತಮ್ಮ ಜೀವನ ಬೆಳಗಿಸಿಕೊಂಡ್ರು. ಜನರ ಕಷ್ಟಗಳಿಗೆ ದೀಪ ಹಚ್ಚಿ ಬೆಳಕು ನೀಡಲಿಲ್ಲ ಎಂದ ಅವರು, ಹತ್ತು ವರ್ಷದಿಂದ ಬಿಜೆಪಿ, ಕಾಂಗ್ರೆಸ್‍ನವರು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಪ್ರತಿವರ್ಷ ಕಾಲುವೆ ದುರಸ್ಥಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಾರೆ. ಆದರೂ, ಮಳೆ ಬಂದಾಗ ಬೆಂಗಳೂರಿನ ಅನೇಕ ಪ್ರದೇಶಗಳಿಗೆ ನೀರು ನುಗ್ಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ಸಭೆಗೆ ಅಡ್ಡಿಪಡಿಸಿದವರನ್ನು ಬಂಧಿಸಿ ಎಂದು ಪೊಲೀಸ್ ಠಾಣೆ ಎದುರು ರಾತ್ರಿವರೆಗೂ ಪ್ರತಿಭಟನೆ ನಡೆಸುವ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರು, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯಲ್ಲಿ ತಮ್ಮ ಶಾಸಕರ ಮನೆ, ಪೊಲೀಸ್ ಠಾಣೆ ಸುಟ್ಟವರನ್ನು ಬಂಧಿಸಿ ಎಂದು ಧರಣಿ ನಡೆಸಬೇಕಿತ್ತು ಎಂದು ಲೇವಡಿ ಮಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ನಾನು ನೊಂದಿದ್ದೇನೆ, ಬಡ ಕುಟುಂಬಗಳ ರಕ್ಷಣೆಗಾಗಿ ರಾಜಕಾರಣಕ್ಕೆ ಬಂದಿದ್ದೇನೆಂದು ಹೇಳುತ್ತಾರೆ. ಆದರೆ, ಹಳ್ಳಿಯಲ್ಲಿರುವ ಡಿ.ಕೆ.ರವಿ ಅವರ ತಂದೆ-ತಾಯಿಯನ್ನೇ ನೋಡಲಿಲ್ಲ. ಅವರ ಬದುಕಿಗೆ ಒಂದು ದಾರಿ ಮಾಡಿ ಕೊಡಲಾಗಲಿಲ್ಲ. ಈಗ ನಿಮ್ಮ ಕಷ್ಟಗಳನ್ನೆಲ್ಲಾ ಕೇಳ್ತಾರಾ, ಸಮಸ್ಯೆಗಳನ್ನು ಬಗೆಹರಿಸ್ತಾರಾ ಎಂದು ಪ್ರಶ್ನಿಸಿದರು.

ನಮ್ಮ ದುಡ್ಡಿನಲ್ಲಿ ಮಹಾರಾಷ್ಟ್ರದವರ ಪ್ರತಿಮೆಯನ್ನು ನಮ್ಮ ನೆಲದಲ್ಲಿ ಬಿಜೆಪಿಯವರು ಸ್ಥಾಪಿಸುತ್ತಾರೆ. 2-3 ತಿಂಗಳಲ್ಲಿ ಬೆಂಗಳೂರನ್ನು ಮಾದರಿ ನಗರವನ್ನಾಗಿ ಮಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ. ಆದರೆ, ಮೊನ್ನೆ ಮಳೆ ಬಂದಾಗ ಬೆಂಗಳೂರೇ ಕೊಚ್ಚಿಕೊಂಡು ಹೋಯ್ತು. ಇದೇನಾ ಇವರ ಮಾದರಿ ನಗರ ಎಂದು ಪ್ರಶ್ನಿಸಿದ ಅವರು, 2006ರಲ್ಲಿ ಸಿಎಂ ಆಗಿದ್ದಾಗ ಬೆಂಗಳೂರು ಹಾಗೂ ಮೈಸೂರು ಹೊರವಲಯಗಳ ಅಭಿವೃದ್ಧಿಗೆ ತುಂಬಾ ಅನುದಾನ ನೀಡಿದ್ದೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ, ಮಳವಳ್ಳಿ ಶಾಸಕ ಅನ್ನದಾನಿ, ಪರಿಷತ್ ಸದಸ್ಯ ರಮೇಶ್ ಗೌಡ, ಮಾಜಿ ಪರಿಷತ್ ಸದಸ್ಯ ಟಿ.ಎನ್.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸೇರಿ ಅನೇಕ ಮುಖಂಡರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X