ಹನಿಟ್ರ್ಯಾಪ್ ಆರೋಪ: ಏಳು ಜನರ ಬಂಧನ

ಬೆಂಗಳೂರು, ಅ.28: ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ಆರೋಪದಡಿ ಏಳು ಜನರನ್ನು ಇಲ್ಲಿನ ಮಹದೇವಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮಹದೇವಪುರದ ಅಂಜಲಿ, ದೀಪಕ್, ಪ್ರೇಮನಾಥ್, ಟೈಸನ್, ವಿನೋದ್, ಪ್ರಕಾಶ್, ಈಶ್ವರಿ ಬಂಧಿತ ಗ್ಯಾಂಗ್‍ನ ಏಳು ಮಂದಿ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಗುಂಪು ಕಟ್ಟಿಕೊಂಡು ಇಲ್ಲಿನ ಪೈ ಲೇಔಟ್‍ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದು, ಶ್ರೀಮಂತ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದರು ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
Next Story