Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆನ್‌ಲೈನ್ ಬೋಧನೆ ಅವಧಿ ಉಲ್ಲಂಘಿಸುವ...

ಆನ್‌ಲೈನ್ ಬೋಧನೆ ಅವಧಿ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ28 Oct 2020 7:43 PM IST
share
ಆನ್‌ಲೈನ್ ಬೋಧನೆ ಅವಧಿ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸುರೇಶ್ ಕುಮಾರ್

ಬೆಂಗಳೂರು, ಅ.28: ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಭೌತಿಕವಾಗಿ ಇನ್ನೂ ಶಾಲೆಗಳು ತೆರೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಾಲೆಗಳು ಶಿಕ್ಷಣದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಕುರಿತು ತಜ್ಞರ ಸಮಿತಿಯ ಶಿಫಾರಸ್ಸಿನನ್ವಯ ಆನ್‍ಲೈನ್ ಬೋಧನಾ ತರಗತಿಗಳನ್ನು ನಡೆಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಾಲೆಗಳು ಸರಕಾರದ ಆನ್‌ಲೈನ್ ಮಾರ್ಗಸೂಚಿ ಪಾಲಿಸದೆ ಹೆಚ್ಚಿನ ಅವಧಿ ಆನ್‌ಲೈನ್ ತರಗತಿಗಳನ್ನು ನಡೆಸುತ್ತಿರುವುದರಿಂದ ಮಕ್ಕಳ ಆರೋಗ್ಯ ಮತ್ತು ದೃಷ್ಟಿಯ ಮೇಲೆ ಪರಿಣಾಮಗಳುಂಟಾಗುತ್ತಿವೆ ಎಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ಅವರು ಹೇಳಿದ್ದಾರೆ.

ತಜ್ಞರ ವರದಿಯ ಶಿಫಾರಸಿನ ಅವಧಿಯನ್ವಯ ಆನ್‌ಲೈನ್ ಬೋಧನೆ ಮಾಡಬೇಕು. ಈ ಮಾರ್ಗಸೂಚಿ ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕರ್ನಾಟಕ ಶಿಕ್ಷಣ ಕಾಯ್ದೆ-1983 (1995)ರ ಸೆಕ್ಷನ್ 124(5) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಸೂಚಿಸಿದ್ದಾರೆ.

ರಾಜ್ಯದ ಖಾಸಗಿ ಶಾಲೆಗಳು ಆನ್‌ಲೈನ್ ಬೋಧನೆ ಆರಂಭಿಸಿ ಹೆಚ್ಚುವರಿ ಶುಲ್ಕ ಪಾವತಿಸಲು ಒತ್ತಡ ತರುತ್ತಿದ್ದ ಹಿನ್ನೆಲೆಯಲ್ಲಿ ಪೋಷಕರ ದೂರಿನನ್ವಯ ಕ್ರಮ ಕೈಗೊಂಡು ಹೆಚ್ಚುವರಿ ಶುಲ್ಕ ಪಡೆಯದೇ ಆನ್‌ಲೈನ್ ತರಗತಿಗಳನ್ನು ನಡೆಸುವಂತೆ ಎಪ್ರಿಲ್‍ನಲ್ಲಿ ಆದೇಶ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ.

ಪೋಷಕರಿಗೆ ಮಕ್ಕಳ ಆನ್‌ಲೈನ್ ತರಗತಿಗಳಿಗೆ ಮೊಬೈಲ್‍ನಂತಹ ಸಾಧನಗಳನ್ನು ಕೊಳ್ಳಲು ಸಾಮರ್ಥ್ಯ ಇಲ್ಲದಿರುವ ಮತ್ತು ಎಲ್‍ಕೆಜಿಯಿಂದ ಐದನೇ ತರಗತಿ ಮಕ್ಕಳು ಆನ್‌ಲೈನ್ ಶಿಕ್ಷಣದಲ್ಲಿ ಭಾಗವಹಿಸಲು ತೊಂದರೆಗಳಾಗುತ್ತಿವೆ ಎಂಬ ಪೋಷಕರ ದೂರಿನ ಹಿನ್ನೆಲೆಯಲ್ಲಿ ಜೂ.15ರಂದು ತಜ್ಞರ ಸಮಿತಿ ರಚಿಸಿ ಆನ್‌ಲೈನ್ ಶಿಕ್ಷಣ ಕುರಿತು ವರದಿ ನೀಡಲು ಕೇಳಲಾಗಿತ್ತು. ಏತನ್ಮಧ್ಯೆ ಜೂ.17ರಂದು ಎಲ್‍ಕೆಜಿಯಿಂದ ಐದನೇ ತರಗತಿವರೆಗೆ ಆನ್‌ಲೈನ್ ಶಿಕ್ಷಣ ರದ್ದುಪಡಿಸಲು ಆದೇಶ ಹೊರಡಿಸಲಾಗಿತ್ತು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ತಜ್ಞರ ಸಮಿತಿ ವರದಿ ಬರುವತನಕ ಪ್ರಾಥಮಿಕ ತರಗತಿಗಳಿಂದ 10ನೇ ತರಗತಿವರೆಗೆ ಆನ್‍ಲೈನ್ ಶಿಕ್ಷಣಕ್ಕೆ ತರಗತಿವಾರು ಅವಧಿ ನಿಗದಿಪಡಿಸಿ ಜೂ.27ರಂದು ಸುತ್ತೋಲೆ ಹೊರಡಿಸಲಾಗಿತ್ತು. ಇಲಾಖೆಯ ಜೂ.17ರ ಸುತ್ತೋಲೆ ವಿರುದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳು ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದು, ನ್ಯಾಯಾಲಯವು ಜೂ.17 ಮತ್ತು ಜೂ.27ರ ಆದೇಶಗಳಿಗೆ ತಡೆಯಾಜ್ಞೆ ನೀಡಿದ್ದು, ಆನ್‌ಲೈನ್ ಶಿಕ್ಷಣವನ್ನು ಯಥಾವತ್ತಾಗಿ ಮುಂದುವರಿಸಿಕೊಂಡು ಹೋಗಲು ಅವಕಾಶವಾಗಿತ್ತು ಎಂದು ಅವರು ಹೇಳಿದ್ದಾರೆ.

ಆನ್‌ಲೈನ್ ಬೋಧನಾ ತರಗತಿಗಳ ಅವಧಿಯನ್ನು ಪ್ರತಿ ಅಧಿವೇಶನದ ಗರಿಷ್ಠ ಪರದೆಯ ಸಮಯ: 30 ನಿಮಿಷಗಳು, 6 ಮತ್ತು ನಂತರದ ತರಗತಿಗಳಿಗೆ ಅವಶ್ಯಕತೆಗನುಗುಣವಾಗಿ 30-45 ನಿಮಿಷಗಳು, ವಯೋಮಾನಕ್ಕನುಗುಣವಾಗಿ ದಿನಕ್ಕೆ 1ರಿಂದ 4 ಗರಿಷ್ಠ ಅಧಿವೇಶನಗಳು 2 ನೇ ತರಗತಿಯವರೆಗೆ ವಾರದಲ್ಲಿ ಪರ್ಯಾಯ ದಿನಗಳ ಬೋಧನೆ, 3 ನೇ ತರಗತಿಯ ನಂತರ ವಾರಕ್ಕೆ ಗರಿಷ್ಠ 5 ದಿನಗಳವರೆಗೆ.

2ನೇ ತರಗತಿಯವರೆಗೆ ಪೋಷಕರ ಉಪಸ್ಥಿತಿ ಕಡ್ಡಾಯ ಅಥವಾ ಪೋಷಕರ ಅನುಮತಿಯ ಮೇರೆಗೆ ವಯಸ್ಕರ ಉಪಸ್ಥಿತಿಗೆ ಅವಕಾಶವಿದೆ. ಸಿಂಕ್ರೊನಸ್ (ನೇರ ಪ್ರಸಾರದ ಅಧಿವೇಶನಗಳು) ಮತ್ತು ಅಸಿಂಕ್ರೊನಸ್ (ಪೂರ್ವ-ಮುದ್ರಿತ ಅಧಿವೇಶನಗಳು) ವಿಧಾನಗಳಿಗೆ ಅನುಮತಿಸಲಾಗಿದೆ ಎಂದು ಸುರೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X