Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೀಲಾದುನ್ನಬಿ ಆಚರಣೆಯಲ್ಲಿ ಕೋವಿಡ್...

ಮೀಲಾದುನ್ನಬಿ ಆಚರಣೆಯಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸಿ : ಉಡುಪಿ ಡಿಸಿ

ವಾರ್ತಾಭಾರತಿವಾರ್ತಾಭಾರತಿ28 Oct 2020 8:59 PM IST
share

ಉಡುಪಿ, ಅ.28: ಜಿಲ್ಲೆಯಲ್ಲಿ ಮೀಲಾದುನ್ನಬಿ ಅ.29ರಂದು ಆಚರಿಸಲಾಗುತ್ತಿದ್ದು, ಈ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಒಂದೆಡೆ ಸೇರುವುದು ಸಾಮಾನ್ಯವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡದಂತೆ ಕೋವಿಡ್ ಮಾರ್ಗಸೂಚಿ ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಾದ್ಯಂತ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ (ಜುಲೂಸ್) ನಡೆಸುವುದನ್ನು ಹಾಗೂ ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವು ದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ಸಾಂಸ್ಕೃತಿಕ ಕಾರ್ಯಕ್ರಮ ಸಭೆ, ಸಮಾರಂಭಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಮಸೀದಿಗಳಲ್ಲಿ, ದರ್ಗಾಗಳಲ್ಲಿ ಸುರಕ್ಷತಾ ಅಂತರ ಹಾಗೂ ಕೋವಿಡ್-19 ಶಿಷ್ಠಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚೆರಿಕೆ ಕ್ರಮಗಳೊಂದಿಗೆ ದೈಹಿಕ ಅಂತರ ಕಾಪಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ ಗಳು/ಡಿಜಿಟಲ್ ಸೌಂಡ್ ಸಿಸ್ಟಮ್  ಬಳಕೆಯನ್ನು ನಿಷೇಧಿಸಲಾಗಿದೆ.

ಮುಖಗವಸುಗಳನ್ನು ಕಡ್ಡಾಯವಾಗಿ ಎಲ್ಲರೂ ಉಪಯೋಗಿಸಬೇಕು. 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವಷರ್ದೊಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬದ ಆಚರಣೆಯನ್ನು ಮಾಡಬೇಕು. ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈ ತೊಳೆಯಲು ಪ್ರವೇಶ ದ್ವಾರದಲ್ಲಿ ಸೂಕ್ತ ವ್ಯವಸ್ಥೆಯನ್ನು ಮಾಡಬೇಕು. ಕಡ್ಡಾಯವಾಗಿ ಎಲ್ಲರೂ 6 ಅಡಿ ಅಂತರದ ದೈಹಿಕ /ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಖಬರಸ್ಥಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದ ವುಗಳನ್ನು ಆಯೋಜಿಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಎಲ್ಲಾ ನಿರ್ದೇಶನಗಳನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದಲ್ಲಿ ಅಂತವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 5 (3), 6(1) (2) ರನ್ವಯ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 57ರನ್ವಯ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X