Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನ ಪರಿಷತ್ ಚುನಾವಣೆ ಶಾಂತಿಯುತ...

ವಿಧಾನ ಪರಿಷತ್ ಚುನಾವಣೆ ಶಾಂತಿಯುತ ಅಂತ್ಯ: ನ.2ರ ಫಲಿತಾಂಶದತ್ತ ಎಲ್ಲರ ಚಿತ್ತ

ಶೇ.70ಕ್ಕೂ ಅಧಿಕ ಮತದಾನ

ವಾರ್ತಾಭಾರತಿವಾರ್ತಾಭಾರತಿ28 Oct 2020 9:19 PM IST
share
ವಿಧಾನ ಪರಿಷತ್ ಚುನಾವಣೆ ಶಾಂತಿಯುತ ಅಂತ್ಯ: ನ.2ರ ಫಲಿತಾಂಶದತ್ತ ಎಲ್ಲರ ಚಿತ್ತ

ಬೆಂಗಳೂರು, ಅ. 28: ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಂದು ನಡೆದ ಮತದಾನ ಕೆಲ ಸಣ್ಣಪುಟ್ಟ ಗೊಂದಲಗಳನ್ನು ಹೊರತುಪಡಿಸಿದರೆ ಶಾಂತಿಯುತ ಅಂತ್ಯ ಕಂಡಿದೆ. ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆ ಸೇರಿದ್ದು, ನ.2ರ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.

ಪರಿಷತ್ತಿನ ಬೆಂಗಳೂರು ಶಿಕ್ಷಕರ, ಈಶಾನ್ಯ ಶಿಕ್ಷಕರ, ಆಗ್ನೇಯ ಪದವೀಧರರ ಹಾಗೂ ಪಶ್ವಿಮ ಪದವೀಧರ ಕ್ಷೇತ್ರಗಳಿಗೆ ಬೆಳಗ್ಗೆ 8ಗಂಟೆಯಿಂದ ಸಂಜೆ 5ಗಂಟೆಯ ವರೆಗೆ ಮತದಾನ ನಡೆದಿದ್ದು, ಒಟ್ಟಾರೆ ಶೇ.70ಕ್ಕೂ ಅಧಿಕ ಮತದಾನವಾಗಿದೆ ಎಂದು ಆಯೋಗ ತಿಳಿಸಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿ ಮೂರು ರಾಜಕೀಯ ಪಕ್ಷಗಳು ನಾಲ್ಕು ಕ್ಷೇತ್ರಗಳಲ್ಲಿ `ಶತಾಯ-ಗತಾಯ' ಗೆಲುವು ಸಾಧಿಸುವ ಮೂಲಕ ಮೇಲ್ಮನೆಯಲ್ಲಿ ಸಂಖ್ಯಾಬಲ ಹೆಚ್ಚಿಸಿಕೊಳ್ಳಲು ಮುಂದಾಗಿದ್ದರೆ, ಪಕ್ಷೇತರ ಸದಸ್ಯರು ವಿಧಾನ ಪರಿಷತ್ ಪ್ರವೇಶದ ಕನಸಿನಲ್ಲಿದ್ದಾರೆ.

ಕೆಲ ತಾಂತ್ರಿಕ ದೋಷ, ಮತದಾರರ ಪಟ್ಟಿಯಲ್ಲಿ ಹೆಸರು ನಾಪತ್ತೆ ಸೇರಿದಂತೆ ಇನ್ನಿತರ ಸಣ್ಣಪುಟ್ಟ ವಿಚಾರಗಳಿಗೆ ಕೆಲವು ಕಡೆಗಳಲ್ಲಿ ಗೊಂದಲ ಉಂಟಾಗಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿರುವುದನ್ನು ಹೊರತುಪಡಿಸಿದರೆ ವಿಧಾನ ಪರಿಷತ್ ಚುನಾವಣೆ ರಾಜ್ಯದ ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮುಕ್ತಾಯ ಕಂಡಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ಅಬಕಾರಿ ಸಚಿವ ಎಚ್.ನಾಗೇಶ್, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ಸೇರಿದಂತೆ ಸಚಿವರು, ಶಾಸಕರು, ಶಿಕ್ಷಕ ಮತ್ತು ಪದವೀಧರರು ಬೆಳಗ್ಗೆಯಿಂದಲೇ ಆಯಾ ತಾಲೂಕು ಕೇಂದ್ರಗಳಲ್ಲಿ ಸ್ಥಾಪಿಸಿದ್ದ ಮತಗಟ್ಟೆಗಳಲ್ಲಿ ಅತ್ಯಂತ ಉತ್ಸಾಹದಿಂದಲೇ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಮಾರಕ ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಚುನಾವಣಾ ಇದಾಗಿದ್ದು, ಮಾಸ್ಕ್ ಕಡ್ಡಾಯ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಇನ್ನಿತರ ಮುನ್ನಚ್ಚರಿಕೆ ಕೈಗೊಳ್ಳಲಾಗಿತ್ತು. ರಾಜ್ಯದಲ್ಲಿ ಒಟ್ಟು 549 ಮತಗಟ್ಟೆ ಸ್ಥಾಪಿಸಲಾಗಿತ್ತು. 20 ಇತರೆ ಮತದಾರರು, 1.42 ಲಕ್ಷಕ್ಕೂ ಅಧಿಕ ಪುರುಷರು, 91 ಸಾವಿರಕ್ಕೂ ಅಧಿಕ ಮಹಿಳೆಯರು ಸೇರಿದಂತೆ ಒಟ್ಟು 2.34 ಲಕ್ಷಕ್ಕೂ ಅಧಿಕ ಮತದಾರರಿದ್ದರು.

ಆಗ್ನೇಯ ಪದವೀಧರರ ಕ್ಷೇತ್ರ-ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆ ಜಿಲ್ಲೆ. ಪಶ್ಚಿಮ ಪದವೀಧರರ ಕ್ಷೇತ್ರ-ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆ. ಈಶಾನ್ಯ ಶಿಕ್ಷಕರ ಕ್ಷೇತ್ರ-ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆ. ಬೆಂಗಳೂರು ಶಿಕ್ಷಕರ ಕ್ಷೇತ್ರ-ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿನ ಶಿಕ್ಷಕರು ಮತ್ತು ಪದವೀಧರರ ಹಕ್ಕು ಚಲಾಯಿಸಿದ್ದಾರೆ.

ಪುಟ್ಟಣ್ಣ, ಪ್ರವೀಣ್ ಪೀಟರ್, ಎ.ಪಿ.ರಂಗನಾಥ್, ಶಶಿಲ್ ನಮೋಶಿ, ಶರಣಪ್ಪ ಮಟ್ಟೂರು, ತಿಮ್ಮಯ್ಯ ಪುರ್ಲೆ, ಚಿದಾನಂದಗೌಡ, ರಮೇಶ್ ಬಾಬು, ಚೌಡರೆಡ್ಡಿ ಸೇರಿದಂತೆ ಒಟ್ಟು 40 ಅಭ್ಯರ್ಥಿಗಳ ಭವಿಷ್ಯವನ್ನು `ಪ್ರಜ್ಞಾವಂತ' ಮತದಾರ ಬರೆದಿದ್ದಾನೆ.

ಎಣಿಕೆ ಕೇಂದ್ರಗಳು: ಧಾರವಾಡದ ಕೃಷಿ ವಿಜ್ಞಾನ ವಿಶ್ವ ವಿದ್ಯಾಲಯದಲ್ಲಿ ಪಶ್ವಿಮ ಪದವೀಧರ ಕ್ಷೇತ್ರ, ಗುಲ್ಬರ್ಗ ವಿವಿಯ ಗಣಿತ ವಿಭಾಗದಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯವು ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ. ಪ್ರತಿ ಮತಗಟ್ಟೆಯಲ್ಲಿ ಮತ ಎಣಿಕೆ ಕಾರ್ಯಕ್ಕೆ ಏಳು ಟೇಬಲ್ ವ್ಯವಸ್ಥೆ ಕಲ್ಪಿಸಲಾಗಿದೆ. ನ.2ರಂದು ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ. ಮತಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಂ ಮತ್ತು ಏಣಿಕೆ ಕೇಂದ್ರಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಶೇಕಡವಾರು ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರ-ಶೇ.70.11

ಆಗ್ನೇಯ ಪದವೀಧರರ ಕ್ಷೇತ್ರ-ಶೇ.74.84

ಈಶಾನ್ಯ ಶಿಕ್ಷಕರ ಕ್ಷೇತ್ರ-ಶೇ.73.32

ಬೆಂಗಳೂರು ಶಿಕ್ಷಕರ ಕ್ಷೇತ್ರ-ಶೇ.66.02

share
ವಾರ್ತಾಭಾರತಿ
ವಾರ್ತಾಭಾರತಿ
Next Story
X