Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣ:...

ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣ: ಎಲ್ಲ 12 ಆರೋಪಿಗಳು ತಪ್ಪಿತಸ್ಥರು, ಗುರುವಾರ ಶಿಕ್ಷೆ ಪ್ರಮಾಣ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ28 Oct 2020 9:53 PM IST
share
ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣ: ಎಲ್ಲ 12 ಆರೋಪಿಗಳು ತಪ್ಪಿತಸ್ಥರು, ಗುರುವಾರ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು, ಅ.28: ಆರ್‌ಟಿಐ ಕಾರ್ಯಕರ್ತ ಲಿಂಗರಾಜು ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಗೋವಿಂದರಾಜು, ಮಾಜಿ ಕಾರ್ಪೊರೇಟರ್ ಗೌರಮ್ಮ ಸೇರಿ ಎಲ್ಲ 12 ಮಂದಿ ಆರೋಪಿಗಳು ದೋಷಿಗಳು ಎಂದು ಬುಧವಾರ ತೀರ್ಪು ನೀಡಿರುವ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸುವುದಾಗಿ ತಿಳಿಸಿದೆ.

ತೀರ್ಪು ಪ್ರಕಟಿಸಿದ ಬೆಂಗಳೂರು ಸೆಷನ್ಸ್ ನ್ಯಾಯಾಲಯದ ನ್ಯಾಯಪೀಠವು ಮಾಜಿ ಕಾರ್ಪೊರೇಟರ್ ಗೌರಮ್ಮ ಸೇರಿ ಎಲ್ಲ 12 ಮಂದಿ ವಿರುದ್ಧದ ಎಲ್ಲ ಆರೋಪಗಳು ಸಾಬೀತಾಗಿವೆ ಎಂದು ತಿಳಿಸಿದ್ದಾರೆ.

ಚಾಮರಾಜಪೇಟೆಯ ವಿಠ್ಠಲ್ ನಗರ ನಿವಾಸಿ, ಆರ್‌ಟಿಐ ಕಾರ್ಯಕರ್ತ ಲಿಂಗರಾಜು ಅವರನ್ನು 2012ರ ನ.20ರಂದು ಮನೆ ಎದುರಲ್ಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು. ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದ್ದ ಹೈಕೋರ್ಟ್ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಸೂಚಿಸಿತ್ತು.

ಅಲ್ಲದೆ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿ.ಜೆ.ಸೇನ್ ಹಾಗೂ ನ್ಯಾ.ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ಪೀಠ ಸರಕಾರದ ಒಪ್ಪಿಗೆ ಮೇರೆಗೆ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಹಾಗೂ ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್ ಅವರನ್ನು ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ್ದರು. ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡವು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.  

ವರದಿ ಪ್ರಕಾರ ಅಜಾದ್ ನಗರ ಕಾರ್ಪೋರೇಟರ್ ಗೌರಮ್ಮ, ಪತಿ ಗೋವಿಂದರಾಜು ಅವರು ಲಿಂಗರಾಜು ಹತ್ಯೆಗೆ ಸುಪಾರಿ ನೀಡಿರುವುದು ಸ್ಪಷ್ಟವಾಗಿತ್ತು. ರೌಡಿ ಶೀಟರ್ ಗೋರಿಪಾಳ್ಯದ ಚಂದ್ರು ಮತ್ತು ಆತನ ಸಹಚರರು 2012ರ ನ.20ರಂದು ಲಿಂಗರಾಜು ಅವರನ್ನು ಹತ್ಯೆ ಮಾಡಿರುವ ಬಗ್ಗೆ ಒಂಭತ್ತು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಾದ ಮತ್ತು ಪ್ರತಿ ವಾದ ಆಲಿಸಿರುವ ಸೆಷನ್ಸ್ ನ್ಯಾಯಾಲಯದ ನ್ಯಾ. ಲಕ್ಷ್ಮೀನಾರಾಯಣ ಅವರು ಅ.29ರಂದು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದ್ದಾರೆ.

ಪ್ರಕರಣದ ಆರೋಪಿಗಳಾದ ರಂಗಸ್ವಾಮಿ, ಆರ್.ಶಂಕರ್, ರಾಘವೇಂದ್ರ, ಚಂದ್ರ, ಶಂಕರ್, ಉಮಾಶಂಕರ, ವೇಲು, ಸಿ.ಗೋವಿಂದರಾಜು, ಲೋಗನಾಥ್, ಜಹೀರ್, ಸುರೇಶ್, ಗೌರಮ್ಮ ಅವರಿಗೆ ನ್ಯಾಯಾಲಯ ಶಿಕ್ಷೆಯನ್ನು ಪ್ರಕಟಿಸಲಿದೆ.

ಪ್ರಕರಣವೇನು: ಲಿಂಗರಾಜು ಅವರು ಮಾಹಿತಿ ಹಕ್ಕು ಅಡಿ ದಾಖಲೆಗಳನ್ನು ತೆಗೆದು ತನಿಖಾ ಸಂಸ್ಥೆಗಳಿಗೆ ದೂರು ನೀಡುತ್ತಿದ್ದರು. ಗೋವಿಂದರಾಜು ಅವರ ಜೊತೆಗೆ ಸ್ನೇಹದಿಂದ ಇದ್ದರೂ ಅವರ ಭೂ ಅಕ್ರಮ ಕುರಿತು ಲಿಂಗರಾಜು 2010ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಬಗ್ಗೆ ಮಾತುಕತೆ ರಾಜಿಗೆ ಗೋವಿಂದರಾಜು ಯತ್ನಿಸಿ ವಿಫಲರಾದಾಗ, ಲಿಂಗರಾಜುಗೆ ಬೆದರಿಕೆ ಹಾಕಿದ್ದರು. ಗೋವಿಂದರಾಜು ಬೆದರಿಕೆ ಹಾಕಿರುವ ಬಗ್ಗೆ ಲಿಂಗರಾಜು ವಕೀಲ ಧ್ರುವಕುಮಾರ್ ಅವರಿಂದ ಪ್ರಮಾಣ ಪತ್ರ ಕೂಡ ಮಾಡಿಸಿದ್ದರು.

ಆಜಾದ್ ನಗರ ಕಾರ್ಪೋರೇಟರ್ ಗೌರಮ್ಮ ಮತ್ತು ಗೋವಿಂದರಾಜು ಅವರ ಅಕ್ರಮ ಸಂಪತ್ತಿನ ಬಗ್ಗೆ ದಾಖಲೆಗಳನ್ನು ಸಂಗ್ರಹಿಸಿ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಪೋರೇಟರ್ ಗೌರಮ್ಮ ಮತ್ತು ಗೋವಿಂದರಾಜು ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸು ದಾಖಲಿಸಿ ದಾಳಿ ನಡೆಸಿದ್ದರು. ಈ ವೇಳೆ ಮಹತ್ವದ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿದ್ದರು. ಇದಾದ ಕೆಲವೇ ದಿನಗಳ ಬಳಿಕ ದೂರುದಾರ ಲಿಂಗರಾಜು ಅವರನ್ನು ವಿಠ್ಠಲ್ ನಗರದ ಅವರ ನಿವಾಸದ ಎದುರಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

‘ಆರ್‌ಟಿಐ ಕಾರ್ಯಕರ್ತ ಲಿಂಗರಾಜು ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲ 12 ಮಂದಿ ಆರೋಪಿಗಳಿಗೂ ಶಿಕ್ಷೆ ಪ್ರಕಟವಾಗಲಿದೆ. ತನಿಖೆಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದವನ್ನು ತಿಳಿಸುತ್ತೇನೆ.’

-ಅಬ್ದುಲ್ ಅಹದ್, ಐಪಿಎಸ್ ಅಧಿಕಾರಿ, ವಿಶೇಷ ತನಿಖಾ ತಂಡದ ಸದಸ್ಯರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X