Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ವಿರುದ್ಧ ಅನ್ನ ತಿನ್ನುವ ಎಲ್ಲರೂ...

ಬಿಜೆಪಿ ವಿರುದ್ಧ ಅನ್ನ ತಿನ್ನುವ ಎಲ್ಲರೂ ಮತ ಚಲಾಯಿಸಿ: ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ಮನವಿ

ವಾರ್ತಾಭಾರತಿವಾರ್ತಾಭಾರತಿ28 Oct 2020 11:42 PM IST
share
ಬಿಜೆಪಿ ವಿರುದ್ಧ ಅನ್ನ ತಿನ್ನುವ ಎಲ್ಲರೂ ಮತ ಚಲಾಯಿಸಿ: ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ಮನವಿ

ತುಮಕೂರು.ಅ.28: ರೈತರು, ದಲಿತರು, ಕಾರ್ಮಿಕರ ವಿರೋಧಿಯಾದ ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದಿರುವ ಬಿಜೆಪಿ ವಿರುದ್ಧ ಅನ್ನ ತಿನ್ನುವ ಎಲ್ಲರೂ ಮತ ಚಲಾಯಿಸುವಂತೆ ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟ ಸಮಿತಿಯ ಪ್ರಕಾಶ್ ಕಮ್ಮರಡಿ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಅನುಸರಿಸುತ್ತಿರುವ ರೈತ, ಕಾರ್ಮಿಕ ಹಾಗೂ ದಲಿತ ವಿರೋಧಿ ನೀತಿಗಳಿಂದಾಗಿ, ಇಡೀ ದೇಶ ಅತಂತ್ರ ಸ್ಥಿತಿಗೆ ತಲುಪಿದೆ. ಜನ ವಿರೋಧಿ ಕಾಯ್ದೆಗಳ ವಿರುದ್ದ ನಿರಂತರ ಹೋರಾಟವನ್ನು ಐಕ್ಯ ಹೋರಾಟ ಸಮಿತಿ ರೂಪಿಸುತ್ತಾ ಬಂದಿದೆ. ಈ ಹೋರಾಟ ಮತವಾಗಿ ಪರಿವರ್ತನೆಯಾಗಬೇಕು ಎಂಬ ಉದ್ದೇಶದಿಂದ ಶಿರಾ ಮತ್ತು ಆರ್.ಆರ್.ನಗರ ಉಪಚುನಾವಣೆಯಲ್ಲಿ ಕರಪತ್ರದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಬಿಜೆಪಿ ಪಕ್ಷವನ್ನು ಸೋಲಿಸುವಂತೆ ಕೇಳಿಕೊಳ್ಳಲಾಗುತ್ತಿದೆ ಎಂದರು.

ರಾಜ್ಯ ಸರಕಾರ ತರಾತುರಿಯಲ್ಲಿ ಸುಗ್ರೀವಾಜ್ಞೆಗಳ ಮೂಲಕ ಜಾರಿಗೆ ತಂದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆಗಳ ವಿರೋಧಿ ನೀತಿ, ಎಪಿಎಂಸಿ ಕಾಯ್ದೆಗಳ ತಿದ್ದುಪಡಿ ವಿರುದ್ದ ನಿರಂತರ ಹೋರಾಟವನ್ನು ದಲಿತ, ರೈತ, ಕಾರ್ಮಿಕ ಐಕ್ಯ ಹೋರಾಟ ಸಮಿತಿ ರೂಪಿಸಿದೆ. ಇದರ ಫಲವಾಗಿ ಮೇಲ್ಮನೆಯಲ್ಲಿ ಸದರಿ ಕಾಯ್ದೆಗಳಿಗೆ ಬೆಂಬಲ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ಮರಣಶಾಸನವಾಗಿರುವ ಸದರಿ ಕಾಯ್ದೆಗಳು ಮತ್ತೆ ಮರುಕಳಿಸಬಾರದೆಂದರೆ ಬಿಜೆಪಿಯನ್ನು ಈ ಉಪಚುನಾವಣೆಯಲ್ಲಿ ಜನರು, ಅದರಲ್ಲಿಯೂ ರೈತರು, ಕಾರ್ಮಿಕರು, ದಲಿತರು ಒಗ್ಗೂಡಿ ಸೋಲಿಸ ಬೇಕಾಗಿದೆ ಎಂದು ಪ್ರಕಾಶ್ ಕಮ್ಮರಡಿ ತಿಳಿಸಿದರು.

ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಕಳೆದ ಸೆಪ್ಟಂಬರ್ 26ರಂದು ನಡೆದ ಜನತಾ ಪರ್ಯಾಯ ಅಧಿವೇಶನದಲ್ಲಿ ತೆಗೆದುಕೊಳ್ಳಲಾದ ನಿರ್ಣಯದಂತೆ ಶಿರಾ ಮತ್ತು ಆರ್.ಆರ್.ನಗರ ಉಪಚುನಾವಣೆಯಲ್ಲಿ ಜನವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸುವಂತೆ ಕರೆ ನೀಡಲಾಗಿದೆ. ಇದರ ಭಾಗವಾಗಿ ಶಿರಾ ಕ್ಷೇತ್ರದಲ್ಲಿ ಇಂದು ರೈತರ ಸಭೆ ನಡೆಸಿ, ಕರ ಪತ್ರ ನೀಡಿ, ಜನರ ಮನವೊಲಿಸುವ ಕೆಲಸ ಮಾಡಲಾಗುತ್ತಿದೆ. ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಕರ ಪತ್ರ ತಲುಪಿಸುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಲಿದ್ದಾರೆ ಎಂದರು.

ದಲಿತ ಸಂಘರ್ಷ ಸಮಿತಿಯ ಗುರುಪ್ರಸಾದ್ ಕರೆಗೋಡು ಮಾತನಾಡಿ, ದೇಶದಲ್ಲಿ ಸಾಮಾಜಿಕ ನ್ಯಾಯವೆಂಬದು ಮರೀಚಿಕೆಯಾಗಿದೆ. ದಲಿತರು, ಅಲ್ಪಸಂಖ್ಯಾತರನ್ನು ಒಡೆದು ಆಳುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಒಂದು ವೇಳೆ ಬಿಜೆಪಿಯವರ ಬಣ್ಣದ ಮಾತಿಗೆ ಬೆರಗಾಗಿ ದಲಿತರು ಬಿಜೆಪಿಗೆ ಮತ ನೀಡಿದರೆ, ಅವರ ಬಾಳು ಬಾಣಲೆಯಿಂದ ಬೆಂಕಿ ಹಾರಿದಂತೆ. ಒಂದೊಂದೆ ಸರಕಾರಿ ಸಾಮ್ಯದ ಕಂಪನಿಗಳನ್ನು ಖಾಸಗೀಕರಣಗೊಳಿಸುವ ಮೂಲಕ ಮೀಸಲಾತಿ ಎಂಬುದು ಮರೀಚಿಕೆಯಾಗುವಂತೆ ಮಾಡುತ್ತಿದ್ದಾರೆ. ಆದ್ದರಿಂದ ಎಲ್ಲಾ ದಲಿತರು ಬಿಜೆಪಿ ವಿರುದ್ದ ಮತ ಚಲಾಯಿಸುವಂತೆ ಮನವಿ ಮಾಡಿದರು.

ರೈತ ಸಂಘದ ಕಾರ್ಯಾಧ್ಯಕ್ಷ ಚಮಾರಸ ಮಾಲಿ ಪಾಟೀಲ್ ಮಾತನಾಡಿ, 2014ರ ಲೋಕಸಭಾ ಚುನಾವಣೆಯಲ್ಲಿ ಇನ್ನಿಲ್ಲದ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ, ಅವುಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಕೃಷಿ ವಲಯವನ್ನು ಅತ್ಯಂತ ನಿಕೃಷ್ಟವಾಗಿ ಕಂಡಿದ್ದು, ಕೃಷಿ ಸನ್ಮಾನ ಯೋಜನೆಯ ಮೂಲಕ ಕೃಷಿಕರಿಗೆ ಭೀಕ್ಷುಕರಂತೆ ಮಾಡಿ ಅವಮಾನ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡರಾದ ಸಿ.ಯತಿರಾಜು, ಕಾರ್ಮಿಕ ಮುಖಂಡರಾದ ಕಾಳಪ್ಪ, ರವಿಕಿರಣ್,ಪೊನ್ನಪ್ಪ, ವೆಂಕಟೇಗೌಡ, ಎಂ.ಶಂಕರಪ್ಪ, ರಾಮು, ಚನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X