Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಯ ಸಿ. ಸುವರ್ಣ ಬಿಲ್ಲವ ಸಮಾಜದ ಕಣ್ಮಣಿ :...

ಜಯ ಸಿ. ಸುವರ್ಣ ಬಿಲ್ಲವ ಸಮಾಜದ ಕಣ್ಮಣಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ29 Oct 2020 5:47 PM IST
share
ಜಯ ಸಿ. ಸುವರ್ಣ ಬಿಲ್ಲವ ಸಮಾಜದ ಕಣ್ಮಣಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು, ಅ.29: ಕರಾವಳಿ ಜಿಲ್ಲೆಯ ಸಾಮಾನ್ಯ ಬಡಕುಟುಂಬದಲ್ಲಿ ಹುಟ್ಟಿದ ಹುಡುಗ ಮುಂಬೈಯಂತಹ ಮಹಾನಗರಕ್ಕೆ ತೆರಳಿ ಉದ್ಯಮ ಸ್ಥಾಪಿಸಿ ಅದನ್ನು ಬೃಹದಾಕಾರಕ್ಕೆ ಬೆಳೆಸಿ ಎಲ್ಲ ಸಮಾಜಕ್ಕೂ ದಾರಿದೀಪವಾಗಿ ಬೆಳಗಿದವರು. ಬಿಲ್ಲವ ಸಮಾಜಕ್ಕೆ ಶಕ್ತಿ, ಕಣ್ಮಣಿಯಾಗಿದ್ದರು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಭವನದಲ್ಲಿ ಗುರುವಾರ ನಡೆದ ಜಯ ಸಿ. ಸುವರ್ಣರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಯ ಸಿ. ಸುವರ್ಣರು ಸಮಾಜದಲ್ಲಿ ತುತ್ತು ಅನ್ನ ಊಟ ಮಾಡಲು ತತ್ವಾರ ಇರುವ ಕಾಲದಲ್ಲಿ ಸಂಘಟನೆ ಕಟ್ಟಿದವರು. ಜಯ ಸಿ. ಸುವರ್ಣರ ಯೋಚನೆ, ಚಿಂತನೆ, ಆದರ್ಶಗಳು, ವಿಚಾರಧಾರೆ, ಗುರಿಯನ್ನು ನೆನಪಿಸಲೇಬೇಕು. ಜಯ ಸಿ. ಸುವರ್ಣರು ಮತ್ತು ಜನಾರ್ದನ ಪೂಜಾರಿ ಯವರು ಅಕ್ಕ-ಬುಕ್ಕ, ರಾಮ-ಲಕ್ಷ್ಮಣ, ಕೋಟಿ-ಚೆನ್ನಯರಂತೆ ಸೋದರತೆಯ ಸಂಕೇತವಾಗಿ ಬೆಳೆದವರು. ಜಯ ಸಿ. ಸುವರ್ಣ ಬಡವರಿಗೆ ಆಸರೆಯಾಗಿ ಬದುಕುಬೇಕು ಎಂದು ಹೇಳಿದ್ದಲ್ಲದೆ, ತನ್ನ ಜೀವನದಲ್ಲಿ ಕಾರ್ಯರೂಪಕ್ಕೆ ತಂದ ಹೆಗ್ಗಳಿಕೆ ಅವರದು ಎಂದು ಹೇಳಿದರು.

ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಮಾತನಾಡಿ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಗೆ ಜಯ ಸಿ. ಸುವರ್ಣರ ಕೊಡುಗೆ ಮಹತ್ತರ ವಾದುದುರು. ಬಿಲ್ಲವ ಸಮಾಜವನ್ನು ಕೈಹಿಡಿದು ಮುನ್ನಡೆಸಿದ ಹಿರಿಮೆ ಸುವರ್ಣರದ್ದು. ಅವರು ಖಂಡಿತವಾಗಿ ನಮ್ಮ ಬಿಟ್ಟು ಹೋಗಿಲ್ಲ, ಅವರ ಜೀವನ, ವಿಚಾರಧಾರೆ, ಚಿಂತನೆ ನಮ್ಮ ಮುಂದಿನ ಸಮಾಜಕ್ಕೆ ಮಾದರಿ. ಸಚಿವ ಕೋಟ ಅವರ ಮೇಲೆ ದೊಡ್ಡ ಜವಾಬ್ದಾರಿ ಇದ್ದು, ಮುಂದೆ ಬಿಲ್ಲವ ಸಮಾಜವನ್ನು ಮುನ್ನಡೆಸಿಕೊಂಡು ನೀವು ಹೋಗಬೆಕಾಗಿದೆ. ಈ ಮೂಲಕ ಜಯ ಸಿ. ಸುವರ್ಣ ಅವರ ಸಂಘಟನಾ ಶಕ್ತಿಯನ್ನು ನಾವು ಮತ್ತಷ್ಟು ಬಲಪಡಿಸಿ ಮಾದರಿಯಾಗೋಣ ಎಂದು ಕೋಟ ಅವರಿಗೆ ಕಿವಿಮಾತು ಹೇಳಿದರು.

ಸಭೆಯಲ್ಲಿ ಕುದ್ರೋಳಿ ದೇವಸ್ಥಾನದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಆರ್. ಪದ್ಮರಾಜ್, ಟ್ರಸ್ಟಿಗಳಾದ ರವಿಶಂಕರ್ ಮಿಜಾರು, ಶೇಖರ್ ಪೂಜಾರಿ, ಕೆ. ಮಹೇಶ್ಚಂದ್ರ, ದೇವಳ ಅಭಿವೃದ್ಧಿ ಸಮಿತಿಯ ರಾಧಾಕೃಷ್ಣ, ದೇವೇಂದ್ರ ಪೂಜಾರಿ, ಮಾಜಿ ಶಾಸಕ ಜೆ.ಆರ್. ಲೊಬೋ ಉಪಸ್ಥಿತರಿದ್ದರು.

ಜಯ ಸಿ. ಸುವರ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು. ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X