Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ಲಸಿಕೆ ನೀಡಲು ಡೇಟಾ ಬೇಸ್...

ಕೋವಿಡ್ ಲಸಿಕೆ ನೀಡಲು ಡೇಟಾ ಬೇಸ್ ಸಿದ್ಧಪಡಿಸಿ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ29 Oct 2020 7:49 PM IST
share
ಕೋವಿಡ್ ಲಸಿಕೆ ನೀಡಲು ಡೇಟಾ ಬೇಸ್ ಸಿದ್ಧಪಡಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಅ.29: ಕೋವಿಡ್-19ಕ್ಕೆ ಲಸಿಕೆ ತಯಾರಿಕೆಯು ಅಂತಿಮ ಹಂತದಲ್ಲಿದ್ದು, ಕೇಂದ್ರ ಸರಕಾರದ ನಿರ್ದೇಶನದಂತೆ ಲಸಿಕೆಯನ್ನು ಪ್ರಾಥಮಿಕ ಹಂತದಲ್ಲಿ ಸರಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಮತ್ತು ಸಹಾಯಕ ಸಿಬ್ಬಂದಿಗಳಿಗೆ ನೀಡಬೇಕಿದೆ. ಇದಕ್ಕಾಗಿ ಜಿಲ್ಲೆಯಲ್ಲಿರುವ ಸರಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದ ಸಿಬ್ಬಂದಿ ಗಳ ಮಾಹಿತಿಯ ಡೇಟಾಬೇಸ್‌ನ್ನು ಶೀಘ್ರದಲ್ಲಿ ಸಿದ್ಧಪಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದ್ದಾರೆ.

ಗುರುವಾರ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೋವಿಡ್ ಲಸಿಕಾ ಕಾರ್ಯಪಡೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕೋವಿಡ್-19 ಲಸಿಕೆ ನೀಡಲು ಜಿಲ್ಲೆಯಲ್ಲಿ ಕೆಪಿಎಂಇ ಕಾಯ್ದೆಯಡಿ ನೊಂದಣಿಯಾಗಿ ವೈದ್ಯಕೀಯ ಸೇವೆ ಒದಗಿಸುತ್ತಿರುವ 982 ಖಾಸಗಿ ಸಂಸ್ಥೆಗಳು ಹಾಗೂ 92 ಸರಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ಶುಶ್ರೂಷಕರು, ಲ್ಯಾಬ್ ಟೆಕ್ನೀಯನ್‌ಗಳು, ಸಹಾಯಕ ಸಿಬ್ಬಂದಿ ಸೇರಿದಂತೆ ಪ್ರತಿಯೊಬ್ಬರ ವಿವರಗಳನ್ನು ಸಮಗ್ರವಾಗಿ ದಾಖಲಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ನಂತರದ ಹಂತದಲ್ಲಿ ವೃದ್ಧರು ಮತ್ತು ದುರ್ಬಲ ವ್ಯಕ್ತಿಗಳಿಗೆ ಲಸಿಕೆ ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಮಕ್ಕಳಿಗೆ ನೀಡುವ ನಿಗದಿತ ಲಸಿಕೆಗಳನ್ನು ಯಾವುದೇ ಕಾರಣಕ್ಕೂ ತಪ್ಪಿಸದಂತೆ ಸೂಚಿಸಿದ ಜಿಲ್ಲಾಧಿಕಾರಿ, ನಿರಂತರವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿ ಲಸಿಕೆ ನೀಡಿ. ಲಾಕ್‌ಡೌನ್ ಸಮಯದಲ್ಲಿ ಕುಂಠಿತಗೊಂಡಿರುವ ಗುರಿಯನ್ನು ಪೂರ್ಣಗೊಳಿಸುವಂತೆ ಅವರು ಎಲ್ಲರಿಗೂ ಸೂಚಿಸಿದರು.

ಹೆರಿಗೆ ವೇಳೆ ತಾಯಿ ಮರಣವನ್ನು ತಪ್ಪಿಸಲು ಎಲ್ಲಾ ರೀತಿಯ ಗರಿಷ್ಠ ಪ್ರಯತ್ನ ನಡೆಸಿ. ಗರ್ಭಿಣಿಯರಿಗೆ ಹೆರಿಗೆ ವೇಳೆ ಸಮಸ್ಯೆ ಕಂಡು ಬರುವ ಸಾಧ್ಯತೆಯಿದ್ದಲ್ಲಿ ಅವರ ಚಿಕಿತ್ಸೆಗೆ ಮುಂಚಿತವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್-19 ಪ್ರಮಾಣ ಕಡಿಮೆಯಾಗುತ್ತಿದ್ದು, ಸಾವುಗಳು ಸಹ ಕಡಿಮೆಯಾಗಿವೆ. ಸಾರ್ವಜನಿಕರು, ಕೋವಿಡ್ ವೈರಸ್ ಸಂಪೂರ್ಣ ಇಲ್ಲವಾ ಗುವವರೆಗೆ ಸುರಕ್ಷತಾ ಅಂತರ ಪಾಲನೆ ಮತ್ತು ಮಾಸ್ಕ್ ಧರಿಸುವುದನ್ನು ನಿತ್ಯದ ರೂಢಿಯನ್ನಾಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಸಭೆಯಲ್ಲಿ ಉಡುಪಿ ಜಿಪಂ ಸಿಇಓ ಡಾ. ನವೀನ್ ಭಟ್ ವೈ., ಡಿಹೆಚ್‌ಓ ಡಾ.ಸುಧೀರ್‌ಚಂದ್ರ ಸೂಡಾ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್, ಆರೋಗ್ಯ ಇಲಾಖೆಯ ಅಧಿಕಾರಿಗಳು, ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಎಂ.ಜಿ.ರಾಮ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X