Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ದೈಹಿಕ ಕ್ರಿಯಾಶೀಲತೆಯು ಶೇ.90ರಷ್ಟು...

ದೈಹಿಕ ಕ್ರಿಯಾಶೀಲತೆಯು ಶೇ.90ರಷ್ಟು ಪಾರ್ಶ್ವವಾಯು ಪ್ರಕರಣಗಳನ್ನು ತಡೆಯಬಲ್ಲದು

ವಾರ್ತಾಭಾರತಿವಾರ್ತಾಭಾರತಿ29 Oct 2020 8:38 PM IST
share

ನಮ್ಮನ್ನು ಪಾರ್ಶ್ವವಾಯು ಅಪಾಯದತ್ತ ಇನ್ನಷ್ಟು ನಿಕಟವಾಗಿಸುವುದು ಯಾವುದು ಗೊತ್ತೇ? ಅದು ನಮ್ಮ ದೈಹಿಕ ನಿಷ್ಕ್ರಿಯತೆಯ ಮಟ್ಟ. ಹೌದು,ದೈಹಿಕ ನಿಷ್ಕ್ರಿಯತೆಯು ಪಾರ್ಶ್ವವಾಯುವಿನ ಜೊತೆಗೆ ಇತರ ಆರೋಗ್ಯ ಮತ್ತು ಜೀವನಶೈಲಿ ಸಮಸ್ಯೆಗಳಿಗೆ ಕಾರಣವಾಗಬಲ್ಲದು. ಪಾರ್ಶ್ವವಾಯು ಅಪಾಯ ಸನ್ನಿಹಿತವಾಗಿದೆ ಎನ್ನುವುದಕ್ಕೆ ನಮ್ಮ ಶರೀರವು ವಿವಿಧ ಲಕ್ಷಣಗಳನ್ನು ಪ್ರಕಟಿಸುತ್ತದೆ,ಆದರೆ ಹೆಚ್ಚಿನವರು ಈ ಲಕ್ಷಣಗಳನ್ನು ಗುರುತಿಸುವಲ್ಲಿ ವಿಫಲರಾಗುತ್ತಾರೆ ಮತ್ತು ಪಾರ್ಶ್ವವಾಯುವಿಗೆ ತುತ್ತಾಗುತ್ತಾರೆ. ಇದ್ದುದರಲ್ಲಿ ಒಳ್ಳೆಯ ಸಂಗತಿಯೆಂದರೆ ಶೇ.70ರಷ್ಟು ಪ್ರಕರಣಗಳಲ್ಲಿ ಪಾರ್ಶ್ವವಾಯುವನ್ನು ತಡೆಯಬಹುದು ಮತ್ತು ಚಿಕಿತ್ಸೆಯನ್ನು ನೀಡಬಹುದು.

 ತಜ್ಞರ ಅಭಿಪ್ರಾಯದಂತೆ ಸುಮಾರು ಶೇ.25ರಷ್ಟು ಜನರು ತಮ್ಮ ಜೀವನದ ಒಂದಿಲ್ಲೊಂದು ಸಮಯದಲ್ಲಿ ಪಾರ್ಶ್ವವಾಯು ದಾಳಿಗೆ ಗುರಿಯಾಗಿರುತ್ತಾರೆ. ವಯಸ್ಸಾದವರು ಮತ್ತು ದೈಹಿಕವಾಗಿ ನಿಷ್ಕ್ರಿಯರಾಗಿರುವವರು ಹೆಚ್ಚಿನ ಅಪಾಯವನ್ನು ಎದುರಿಸುತ್ತಿರುತ್ತಾರೆ. ಭಾರತದಲ್ಲಿ ಸಾವುಗಳಿಗೆ ಕಾರಣವಾಗುವ ಪ್ರಮುಖ ಕಾಯಿಲೆಗಳಲ್ಲಿ ಪಾರ್ಶ್ವವಾಯು ಕೂಡ ಸೇರಿದೆ. ವರದಿಗಳಂತೆ ಪ್ರತಿ 40 ಸೆಕೆಂಡ್‌ಗಳಿಗೆ ಓರ್ವ ವ್ಯಕ್ತಿ ಪಾರ್ಶ್ವವಾಯುವಿಗೆ ತುತ್ತಾಗುತ್ತಾನೆ ಮತ್ತು ಪ್ರತಿ ನಾಲ್ಕು ನಿಮಿಷಗಳಿಗೆ ಪಾರ್ಶ್ವವಾಯುವಿನಿಂದ ಒಂದು ಸಾವು ಸಂಭವಿಸುತ್ತದೆ.

  ಜೀವನಶೈಲಿ ಬದಲಾವಣೆಗಳು ಮತ್ತು ವ್ಯಾಯಾಮದ ಕೊರತೆ, ಧೂಮಪಾನ ಮತ್ತು ಅತಿಯಾದ ಮದ್ಯಪಾನದಂತಹ ದುಷ್ಚಟಗಳಿಂದಾಗಿ ದೇಶದ ಯುವಜನರಲ್ಲಿ ಪಾರ್ಶ್ವವಾಯು ಪ್ರಕರಣಗಳು ಹೆಚ್ಚುತ್ತಿವೆ. ಈ ವೇಗದ ಯುಗದಲ್ಲಿ ತಂತ್ರಜ್ಞಾನದ ಮುಂದುವರಿಕೆಯು ನಮ್ಮ ಕೆಲಸಗಳನ್ನು ಸುಲಭವಾಗಿಸಿದೆ ಮತ್ತು ಇದೇ ವೇಳೆ ದೈಹಿಕ ಚಟುವಟಿಕೆಗಳನ್ನು ಕಡಿಮೆಯಾಗಿಸಿದೆ. ಹೆಚ್ಚುತ್ತಿರುವ ಒತ್ತಡ ಹಾಗೂ ಮಧುಮೇಹ ಮತ್ತು ಅಧಿಕ ರಕ್ತದೊತ್ತಡಗಳಿಗೆ ತುತ್ತಾಗುವುದು ಹೆಚ್ಚುತ್ತಿರುವುದರಿಂದ ರೋಗಗಳು ಈಗ ವಯಸ್ಸಿನ ಹಂಗಿಲ್ಲದೆ ಎಲ್ಲರನ್ನೂ ಕಾಡುತ್ತಿವೆ. ನಿಯಮಿತ ವ್ಯಾಯಾಮವು ನಮ್ಮ ಒಟ್ಟಾರೆ ಆರೋಗ್ಯವನ್ನು ಕಾಯ್ದುಕೊಳ್ಳಲು ನೆರವಾಗುವ ಜೊತೆಗೆ ಹಲವಾರು ಕಾಯಿಲೆಗಳನ್ನು ದೂರವಿರಿಸುತ್ತದೆ. ನಮಗೆ ಓಡಾಡಲು ಕಷ್ಟವಿದ್ದರೂ ಕ್ರಿಯಾಶೀಲರಾಗಿರಲು ಬಹಳಷ್ಟು ಮಾರ್ಗಗಳಿವೆ. ನಾವು ಹೊಸ ಚಟುವಟಿಕೆಗಳಿಗೆ ಒಡ್ಡಿಕೊಳ್ಳಬೇಕು. ಹಾಲಿ ಏನಾದರೂ ಔಷಧಿಗಳನ್ನು ಸೇವಿಸುತ್ತಿದ್ದರೆ ವೈದ್ಯರೊಂದಿಗೆ ಸಮಾಲೋಚಿಸಿದರೆ ಅವರು ಇಂತಹ ಮಾರ್ಗಗಳನ್ನು ಸೂಚಿಸುತ್ತಾರೆ ಎನ್ನುತ್ತಾರೆ ತಜ್ಞರು.

 ಅಮೆರಿಕದ ನಾರ್ಥ್ ಕ್ಯಾಲಿಫೋರ್ನಿಯಾ ವಿವಿಯು ನಡೆಸಿದ ಅಧ್ಯಯನವೊಂದರಲ್ಲಿ ಅಚ್ಚರಿದಾಯಕ ಅಂಶಗಳು ಬೆಳಕಿಗೆ ಬಂದಿವೆ. ಇತರ ದೇಶಗಳಿಗೆ ಹೋಲಿಸಿದರೆ ಭಾರತೀಯರಲ್ಲಿ ಎಳೆಯ ವಯಸ್ಸಿನಲ್ಲಿಯೇ ಮಿದುಳಿನ ಪಾರ್ಶ್ವವಾಯು ಉಂಟಾಗುವುದು ಹೆಚ್ಚು ಎಂದು ಅಧ್ಯಯನ ವರದಿಯು ಬೆಟ್ಟು ಮಾಡಿದೆ. ಇದಕ್ಕೆ ಧೂಮಪಾನ,ಮದ್ಯಪಾನ ಮತ್ತು ಕಳಪೆ ಆಹಾರಗಳ ಜೊತೆಗೆ ದೈಹಿಕ ನಿಷ್ಕ್ರಿಯತೆಯೂ ಪ್ರಮಖ ಕಾರಣ ಎನ್ನುವುದು ಅಧ್ಯಯನದಿಂದ ಕಂಡು ಬಂದಿದೆ. ಕೋವಿಡ್-19 ಸಾಂಕ್ರಾಮಿಕದ ಬಳಿಕ ಪಾರ್ಶ್ವವಾಯು ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿವೆ. ಜನರು ತಮ್ಮ ಟಿವಿ,ಕಂಪ್ಯೂಟರ್ ಅಥವಾ ಮೊಬೈಲ್ ಸ್ಕ್ರೀನ್‌ಗಳಿಗೆ ಹೆಚ್ಚಾಗಿ ಅಂಟಿಕೊಂಡಿದ್ದು ಮತ್ತು ದೈಹಿಕ ನಿಷ್ಕ್ರಿಯತೆ ಹೆಚ್ಚಿದ್ದು ಇದಕ್ಕೆ ಕಾರಣವಾಗಿದೆ.

ಜನರು ಹೆಚ್ಚು ಸಮಯದವರೆಗೆ ಸ್ಕ್ರೀನ್‌ಗಳಿಗೆ ಅಂಟಿಕೊಂಡಿರುವುದು ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡುತ್ತದೆ ಎನ್ನುವುದು ಗೊತ್ತಿರುವುದೇ ಆಗಿದೆ. ಪಾರ್ಶ್ವವಾಯು ಇತ್ತೀಚಿಗೆ ಇದರೊಂದಿಗೆ ಜೋಡಣೆಗೊಂಡಿರುವ ರೋಗವಾಗಿದೆ.

ನಾವು ಡಿಜಿಟಲ್ ಸ್ಕ್ರೀನ್‌ಗಳ ಮುಂದೆ ಎರಡು ಗಂಟೆಗಳ ಬಳಿಕ ಕಳೆಯುವ ಪ್ರತಿ ಗಂಟೆಯೂ ಪಾರ್ಶ್ವವಾಯುವಿನ ಅಪಾಯವನ್ನು ಶೇ.20ರಷ್ಟು ಹೆಚ್ಚಿಸುತ್ತದೆ. ವಿಶೇಷವಾಗಿ ಯುವಜನರಲ್ಲಿ ಪಾರ್ಶ್ವವಾಯುವಿನ ಅಪಾಯವನ್ನು ತಗ್ಗಿಸಲು ಅವರ ಡಿಜಿಟಲ್ ಗೀಳನ್ನು ನಿವಾರಿಸುವುದು ಈಗಿನ ಅಗತ್ಯವಾಗಿದೆ ಎನ್ನುತ್ತಾರೆ ತಜ್ಞರು.

 ವ್ಯಕ್ತಿ ಸಕಾಲದಲ್ಲಿ ವೈದ್ಯರನ್ನು ಸಂಪರ್ಕಿಸಿದರೆ ಪಾರ್ಶ್ವವಾಯುವನ್ನು ತಡೆಯಬಹುದು,ಅದಕ್ಕೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದು. ಶೇ.70ಕ್ಕೂ ಅಧಿಕ ರೋಗಿಗಳು ವೈದ್ಯಕೀಯ ನೆರವಿನ ಬಳಿಕ ಪಾರ್ಶ್ವವಾಯುವಿನಿಂದ ಚೇತರಿಸಿಕೊಳ್ಳುತ್ತಾರೆ. ಪಾರ್ಶ್ವವಾಯುವಿನಂತಹ ಅಪಾಯಗಳಿಂದ ದೂರವಿರಲು ನಾವು ಕ್ರಿಯಾಶೀಲರಾಗಿಬೇಕು ಮತ್ತು ನಮ್ಮ ದೈಹಿಕ ಕ್ಷಮತೆಯ ಬಗ್ಗೆ ಕಾಳಜಿಯನ್ನು ವಹಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X