Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಹಿಳಾ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ...

ಮಹಿಳಾ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಹೋರಾಟ: ಎಐಎಂಎಸ್‍ಎಸ್ ನಾಯಕಿ ಶಾಂತಾ

ವಾರ್ತಾಭಾರತಿವಾರ್ತಾಭಾರತಿ29 Oct 2020 10:26 PM IST
share
ಮಹಿಳಾ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಹೋರಾಟ: ಎಐಎಂಎಸ್‍ಎಸ್ ನಾಯಕಿ ಶಾಂತಾ

ಬೆಂಗಳೂರು, ಅ.29: ಉತ್ತರ ಪ್ರದೇಶದ ಹತ್ರಸ್‍ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ, ಸಾವು ಪ್ರಕರಣದಲ್ಲಿ ಸಂತ್ರಸ್ಥೆಯ ಕುಟುಂಬಕ್ಕೆ ಹಾಗೂ ದೇಶದ ಮಹಿಳಾ ಸಮುದಾಯಕ್ಕೆ ನ್ಯಾಯ ಸಿಗುವವರೆಗೆ ಹೋರಾಟವನ್ನು ನಿರಂತರವಾಗಿ ಮುಂದುವರಿಸಲಾಗುವುದೆಂದು ಎಐಎಂಎಸ್‍ಎಸ್ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಶಾಂತಾ ತಿಳಿಸಿದ್ದಾರೆ.

ಎಐಎಂಎಸ್‍ಎಸ್(ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ), ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮತ್ತು ಎಐಪಿಡಬ್ಲ್ಯೂಎ(ಅಖಿಲ ಭಾರತ ಪ್ರೋಗ್ರೆಸ್ಸಿವ್ ವಿಮನ್ಸ್ ಅಸೋಸಿಯೇಷನ್) ವತಿಯಿಂದ ದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಹಾಗೂ ದೌರ್ಜನ್ಯಗಳನ್ನು ಖಂಡಿಸಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ನಿರಂತರವಾಗಿ ಹೆಚ್ಚುತ್ತಲೇ ಇವೆ. ಉತ್ತರಪ್ರದೇಶದ ಹತ್ರಸ್‍ನಲ್ಲಿ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಇಂತಹ ಘಟನೆಗಳು ನಡೆದಾಗ ಹೆಣ್ಣುಮಕ್ಕಳ ಉಡುಗೆ, ಅವರ ವರ್ತನೆಯನ್ನೇ ದೂಷಿಸಲಾಗುತ್ತದೆ. ಈ ಮನೋಭಾವ ಬದಲಾಗಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಕಾರ್ಯದರ್ಶಿ ಗೌರಮ್ಮ ಮಾತನಾಡಿ, ಹತ್ರಸ್ ಪ್ರಕರಣದ ನಂತರ ಉತ್ತರಪ್ರದೇಶ ಪೊಲೀಸರು ಸೂಕ್ತ ಕ್ರಮಗಳನ್ನು ಕೈಗೊಳ್ಳದೆ ಅತ್ಯಾಚಾರಿಗಳನ್ನು ರಕ್ಷಿಸುವ ಹುನ್ನಾರವೂ ನಡೆದಿದೆ. ಸರಣಿಯಾಗಿ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ದೌರ್ಜನ್ಯದ ಪ್ರಕರಣಗಳು ವರದಿಯಾಗುತ್ತಲೇ ಇವೆ. ಕೊರೋನ ಹಿನ್ನೆಲೆಯಲ್ಲಿ ಇಂತಹ ಪ್ರಕರಣಗಳು ಹಿನ್ನೆಲೆ ಸರಿಯುತ್ತಿವೆ. ಸರಕಾರಗಳು ಇದರ ಬಗ್ಗೆ ಗಮನ ಹರಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಅಖಿಲ ಭಾರತ ಪ್ರೊಗ್ರೆಸ್ಸಿವ್ ವಿಮೆನ್ಸ್ ಅಸೋಸಿಯೇಷನ್‍ನ ಶಿಲ್ಪಾ ಮಾತನಾಡಿ, ಇಂತಹ ಘಟನೆಗಳು ಕೇವಲ ಒಂದು ರಾಜ್ಯಕ್ಕೆ ಸೀಮಿತವಾಗಿಲ್ಲ. ಹೆಣ್ಣುಮಕ್ಕಳನ್ನು ಭೋಗದ ವಸ್ತುವಿನಂತೆ ನೋಡುವ ದೃಷ್ಟಿಕೋನ ಬದಲಾಗಬೇಕು. ಆಗ ಮಾತ್ರ ದೌರ್ಜನ್ಯಗಳನ್ನು ತಡೆಗಟ್ಟಲು ಸಾಧ್ಯ ಎಂದರು. ಪ್ರತಿಭಟನೆಯ ಅಧ್ಯಕ್ಷತೆಯನ್ನು ಎಐಎಂಎಸ್‍ಎಸ್ ಬೆಂಗಳೂರು ಜಿಲ್ಲಾ ಸೆಕ್ರೆಟೇರಿಯಟ್ ಸದಸ್ಯೆ ಸಿಂಧೂ ವಹಿಸಿಕೊಂಡಿದ್ದರು.

ಬೇಡಿಕೆಗಳು

1. ಹತ್ರಸ್ ಅತ್ಯಾಚಾರ, ಸಾವು ಪ್ರಕರಣದ ನಿಷ್ಪಕ್ಷ ವಿಚಾರಣೆಗಾಗಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರನ್ನು ನೇಮಿಸಬೇಕು.

2. ಹತ್ರಸ್ ಅತ್ಯಾಚಾರ ಸಂತ್ರಸ್ತೆಯ ಗುಂಪು ಅತ್ಯಾಚಾರ ಮತ್ತು ಮರಣಕ್ಕೆ ಕಾರಣರಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ಖಾತರಿಗೊಳಿಸಬೇಕು.

3. ಸಂತ್ರಸ್ತೆಯ ಮರಣದ ಮುನ್ನ ಹಾಗೂ ನಂತರ ಅಪರಾಧಿಗಳೊಂದಿಗೆ ಶಾಮೀಲಾಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳಿಗೆ ಕಠಿಣ ಶಿಕ್ಷೆಗೆ ಗುರಿಮಾಡಬೇಕು.

4. ಉತ್ತರ ಪ್ರದೇಶ ಸೇರಿದಂತೆ ದೇಶದಲ್ಲಿ ಮಹಿಳೆಯರ ಜೀವ ಹಾಗೂ ಘನತೆಯನ್ನು ರಕ್ಷಿಸಲು ಕಠಿಣಕ್ರಮ ಕೈಗೊಳ್ಳಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X