Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚುನಾವಣೆಗೆ ಸ್ಪರ್ಧಿಸಿದ ದಿನದಿಂದಲೂ...

ಚುನಾವಣೆಗೆ ಸ್ಪರ್ಧಿಸಿದ ದಿನದಿಂದಲೂ ಬಿಜೆಪಿಯವರು ತೊಂದರೆ ನೀಡುತ್ತಿದ್ದಾರೆ: ಕುಸುಮಾ

ವಾರ್ತಾಭಾರತಿವಾರ್ತಾಭಾರತಿ29 Oct 2020 11:37 PM IST
share
ಚುನಾವಣೆಗೆ ಸ್ಪರ್ಧಿಸಿದ ದಿನದಿಂದಲೂ ಬಿಜೆಪಿಯವರು ತೊಂದರೆ ನೀಡುತ್ತಿದ್ದಾರೆ: ಕುಸುಮಾ

ಬೆಂಗಳೂರು: 'ನಾನು ಈ ಉಪಚುನಾವಣೆಗೆ ಸ್ಪರ್ಧಿಸಿದ ದಿನದಿಂದಲೂ ಅಡಿಗಡಿಗೂ ನನ್ನ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಕಡೆಯವರು ತೊಂದರೆ ನೀಡುತ್ತಿದ್ದಾರೆ' ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಅಭ್ಯರ್ಥಿ ಕುಸುಮಾ ಹೆಚ್ ಬೇಸರ ವ್ಯಕ್ತಪಡಿಸಿದ್ದಾರೆ.

ಗುರುವಾರ ಕ್ಷೇತ್ರದ ವಿವಿಧ ಕಡೆಗಳಲ್ಲಿ ಪ್ರಚಾರ ಸಭೆ ನಡೆಸಿದ ಸಂದರ್ಭದಲ್ಲಿ ಹಾಗೂ ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಕುಸುಮಾ ಅವರು, ಜಾತಿ ಕಾರ್ಡ್ ಆಯ್ತು. ಈಗ ತಾಯಿ ಕಾರ್ಡ್ ಬಳಸುತ್ತಿದ್ದಾರೆ. ಆ ದಿನ ನಮ್ಮ ನಾಯಕರಾದ ಸಿದ್ದರಾಮಯ್ಯನವರು ನನ್ನ ಜತೆ ಪ್ರಚಾರ ಮಾಡುವ ಸಂದರ್ಭದಲ್ಲಿ, ಪ್ರತಿಸ್ಪರ್ಧಿ ಪಕ್ಷದ ಅಭ್ಯರ್ಥಿಯಾಗಿರುವ ಅಣ್ಣನವರು ಹಿಂದೆ ಕಾಂಗ್ರೆಸ್ ನಲ್ಲಿದ್ದಾಗ, ಕಾಂಗ್ರೆಸ್ ಪಕ್ಷವೇ ತಮ್ಮ ತಾಯಿ, ಉಸಿರು, ತಮ್ಮ ರಕ್ತ ಎಂದಿದ್ದರಂತೆ. ಆದರೆ ಇವತ್ತು ಅದೇ ವ್ಯಕ್ತಿ ತಾಯಿ ಸಮಾನ ಎಂದ ಪಕ್ಷಕ್ಕೆ ದ್ರೋಹ ಬಗೆದಿದ್ದಾರೆ ಎಂದರು. ಆದರೆ ನಮ್ಮ ಪ್ರತಿಸ್ಪರ್ಧಿ ಅಣ್ಣನವರು ಇದನ್ನು ಯಾಕೆ ತಪ್ಪಾಗಿ ಬಿಂಬಿಸುತ್ತಿದ್ದಾರೋ ಗೊತ್ತಿಲ್ಲ. ಅವರ ತಾಯಿ ಬೇರೆಯಲ್ಲ, ನಮ್ಮ ತಾಯಿ ಬೇರೆಯಲ್ಲ. ಎಲ್ಲರ ತಾಯಿಯೂ ಒಂದೇ. ನಾವು ಅವರನ್ನು ಗೌರವಿಸುತ್ತೇವೆ. ಆದರೂ ಈ ವಿಷಯ ತಿರುಚುತ್ತಿರುವುದು ಆಶ್ಚರ್ಯ ತಂದಿದೆ ಎಂದರು.

ನಾನು ಚುನಾವಣೆಗೆ ಸ್ಪರ್ಧಿಸಿದ ಮೊದಲ ದಿನದಿಂದ ನನ್ನನ್ನು ಗುರಿಯಾಗಿಸಿ ಮಾನಸಿಕವಾಗಿ ದಾಳಿ ಮಾಡುತ್ತಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ನನ್ನ ಪತಿ ಡಿ.ಕೆ ರವಿ ಅವರ ಹೆಸರು ಬಳಸುವಂತಿಲ್ಲ, ಅವರ ಹೆಸರು ಬಳಸುವ ಯೋಗ್ಯತೆ ಇಲ್ಲ ಎಂದು ನನ್ನ ವೈಯಕ್ತಿಕ ಜೀವನ, ನನ್ನ ಹಕ್ಕು ಮತ್ತು ಭಾವನೆಗಳ ಮೇಲೆ ದಾಳಿ ಮಾಡಿದರು. ನಾಮಪತ್ರ ಸಲ್ಲಿಸಿದ ನಂತರ ಸುಳ್ಳು ಪ್ರಕರಣ ದಾಖಲಿಸಿದರು. ನಾವು ಪ್ರಚಾರ ಮಾಡದಂತೆ ತಡೆದರು ಎಂದು ಹೇಳಿದರು. 

ನಾನು ರಾಷ್ಟ್ರ ಕವಿ ಕುವೆಂಪು ಅವರ ವಿಶ್ವ ಮಾನವ ಸಂದೇಶದಲ್ಲಿ ನಂಬಿಕೆ ಇಟ್ಟು ಬೆಳೆದವಳು. ಎಲ್ಲ ಧರ್ಮ, ಜಾತಿ, ವರ್ಗದವರನ್ನು ಸಮಾನವಾಗಿ ಕಾಣುತ್ತಿದ್ದೇನೆ. ಯಾರೂ ಇಂಥದ್ದೇ ಜಾತಿ, ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟಿರುವುದಿಲ್ಲ. ನಾನು ಒಕ್ಕಲಿಗ ಹೆಣ್ಣು ಮಗಳು ಎಂಬುದರ ಬಗ್ಗೆ ಹೆಮ್ಮೆ, ಗೌರವವಿದೆ. ಆದರೆ ಒಕ್ಕಲಿಗರು ಮಾತ್ರ ನನ್ನ ಪರವಾಗಿ ಮತ ಚಲಾಯಿಸಬೇಕು, ಉಳಿದವರದು ಬೇಡ ಎಂದು ಎಲ್ಲಿಯೂ ಹೇಳಿಲ್ಲ. ನನಗೆ ಎಲ್ಲ ಸಮುದಾಯ, ಧರ್ಮ, ವರ್ಗದವರ ಆಶೀರ್ವಾದ ಬೇಕು. ಆದರೆ ನನ್ನ ವಿರುದ್ಧ ಜಾತಿ ಕಾರ್ಡ್ ಬಳಸಿ, ಟಾರ್ಗೆಟ್‌ ಮಾಡುತ್ತಿರುವುದು ನೋವು ತಂದಿದೆ ಎಂದು ಹೇಳಿದರು.

ನಾನು ನನ್ನ ಪ್ರತಿಸ್ಪರ್ಧಿ ಪಕ್ಷದ ಅಣ್ಣಂದಿರಿಗೆ ಯಾವ ಅನ್ಯಾಯ ಮಾಡಿದ್ದೇನೆ ಎಂದು ನನಗೆ ಈ ರೀತಿ ತೊಂದರೆ ಕೊಡುತ್ತಿದ್ದಾರೋ ಗೊತ್ತಿಲ್ಲ? ನಾನು ಹೆಣ್ಣಾಗಿ ಹುಟ್ಟಿದ್ದೇ ತಪ್ಪಾ. ಚುನಾವಣೆಗೆ ಸ್ಪರ್ಧಿಸಿದ್ದೇ ತಪ್ಪಾ..? ಈ ವಯಸ್ಸಿಗೆ ಪಡಬಾರದ ನೋವನ್ನು ಅನುಭವಿಸಿದ್ದರೂ, ಇವರು ಮತ್ತಷ್ಟು ನೋವು ಕೊಡುತ್ತಿರುವುದು ಸರಿಯೇ? ನಾನು ನನ್ನ ಮತದಾರರನ್ನು ನಂಬಿ ಬಂದಿದ್ದೇನೆ. ಅವರೇ ನನ್ನ ಶಕ್ತಿ, ಸ್ಫೂರ್ತಿ ಎಲ್ಲವೂ. ನಾನು ಅವರ ಸೇವೆಗಾಗಿ ಬಂದಿದ್ದು, ಅವರ ಕಷ್ಟ ಸುಖದಲ್ಲಿ ಭಾಗಿಯಾಗುತ್ತೇನೆ. ಅವರ ನೋವಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅವರ ನಂಬಿಕೆಗೆ ಎಂದೂ ದ್ರೋಹ ಬಗೆಯುವುದಿಲ್ಲ. ನನಗೆ ಒಂದೇ ಒಂದು ಅವಕಾಶ ನೀಡಿ ಅವರಲ್ಲಿ ಎಂದು ಕೇಳಿಕೊಳ್ಳುತ್ತಿದ್ದೇನೆ.

ಈಗ ಚುನಾವಣೆ ಯಾಕೆ ಬಂತು, ಇಷ್ಟು ದಿನ ಯಾಕೆ ತಡವಾಯಿತು, ಅದಕ್ಕೆ ಕಾರಣ ಏನು, ಯಾರು ಎಂಬುದು ಎಲ್ಲರಿಗೂ ಗೊತ್ತಿದೆ. ಈಗ ಚುನಾವಣೆ ನಡೆಯುತ್ತಿರುವುದು ಮೂರು ವರ್ಷಕ್ಕೆ ಮಾತ್ರ. ನಾನು ಸರಿಯಾಗಿ ಕೆಲಸ ಮಾಡದಿದ್ದರೆ, ನಿಮ್ಮ ನಂಬಿಕೆ ಉಳಿಸಿಕೊಳ್ಳದಿದ್ದರೆ ಶಿಕ್ಷಿಸುವ ಅಧಿಕಾರ, ಹಕ್ಕು ನಿಮ್ಮ ಕೈಯಲ್ಲೇ ಇದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X