Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿ ಪರ ಕೆಲಸ ಮಾಡಿದರೆ ಭವಿಷ್ಯ ಕಷ್ಟ:...

ಬಿಜೆಪಿ ಪರ ಕೆಲಸ ಮಾಡಿದರೆ ಭವಿಷ್ಯ ಕಷ್ಟ: ಪೊಲೀಸರಿಗೆ ಸಿದ್ದರಾಮಯ್ಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ30 Oct 2020 2:39 PM IST
share
ಬಿಜೆಪಿ ಪರ ಕೆಲಸ ಮಾಡಿದರೆ ಭವಿಷ್ಯ ಕಷ್ಟ: ಪೊಲೀಸರಿಗೆ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು, ಅ.30: ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರದ ಜಾಲಹಳ್ಳಿ, ಪೀಣ್ಯ ಮತ್ತಿತರ ವಾರ್ಡ್‍ನಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಪರ ಮತ ಯಾಚನೆ ಮಾಡಿ ಮಾತನಾಡಿದ ಅವರು, ಪೊಲೀಸರು ಒಂದು ಪಕ್ಷದ ಪರ ಕೆಲಸ ಮಾಡಿದರೆ ಸಹಿಸುವುದಿಲ್ಲ ಎಂದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಆರ್.ಆರ್.ನಗರ ಕ್ಷೇತ್ರದ ಅಭಿವೃದ್ಧಿಗೆ 2,000 ಕೋಟಿ ರೂ.ಅನುದಾನ ನೀಡಿದ್ದೆ, ಆದರೂ ನಮಗೆ ದ್ರೋಹ ಮಾಡಿದ್ರಲ್ಲ ಮುನಿರತ್ನ ಅವರೇ, ಅಂಥಾ ಅನ್ಯಾಯ ನಾವೇನು ಮಾಡಿದ್ವಿ ನಿಮ್ಗೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷವನ್ನು ನನ್ನ ತಾಯಿ ಅಂತ ಹೇಳ್ತಿದ್ದ ಮುನಿರತ್ನ ಅದೇ ತಾಯಿಗೆ ದ್ರೋಹ ಬಗೆದು ಬಿಜೆಪಿ ಸೇರಿದರು. ನಾವು ಯಾಕಪ್ಪಾ ಪಕ್ಷನ ತಾಯಿ ಅಂತ ಕರೀತಿದ್ದಿ, ಈಗ ಅದೇ ತಾಯಿಗೆ ಮೋಸ ಮಾಡಿದ್ಯಲ್ಲ ಅಂದ್ರೆ ಕಾಂಗ್ರೆಸ್ ನಾಯಕರು ನನ್ನ ತಾಯಿಗೆ ಅವಮಾನ ಮಾಡ್ತಿದಾರೆಂದು ಗೊಳೋ ಅಂತ ಮೊಸಳೆ ಕಣ್ಣೀರು ಸುರಿಸ್ತಾರೆ ಎಂದು ಅವರು ವ್ಯಂಗ್ಯವಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಎಂಬ ಕಾರಣಕ್ಕೆ ಕ್ಷೇತ್ರದ ಜನತೆ ಮುನಿರತ್ನ ಅವರನ್ನು ಎರಡು ಬಾರಿ ಶಾಸಕರಾಗಿ ಆಯ್ಕೆ ಮಾಡಿದ್ದಾರೆ ಹೊರತು, ತಮ್ಮ ವೈಯಕ್ತಿಕ ವರ್ಚಸ್ಸಿನಿಂದಾಗಲಿ, ದೊಡ್ಡ ನಾಯಕರು ಎಂದಾಗಲಿ ಜನ ಆಯ್ಕೆ ಮಾಡಿಲ್ಲ. ನಾವೇನೂ ಅವರ ಕುತ್ತಿಗೆ ಹಿಡಿದು ಪಕ್ಷದಿಂದ ಹೊರ ದಬ್ಬಲಿಲ್ಲ. ಸ್ವಾರ್ಥಕ್ಕಾಗಿ ಅವರು ಬಿಜೆಪಿಗೆ ಹೋದರು. ಇಂಥವರು ರಾಜಕೀಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ಸಿದ್ದರಾಮಯ್ಯ ಕಿಡಿಗಾರಿದರು.

ಮುನಿರತ್ನ ಅವರದ್ದು ಬ್ಲಾಕ್ ಮೇಲ್ ರಾಜಕೀಯ. ತಮಗಾಗಿ ದುಡಿಯುವ ಕಾರ್ಯಕರ್ತರ ಮೇಲೆಯೇ ಸುಳ್ಳು ಕೇಸು ಹಾಕಿಸುವುದು ಅವರ ಅಭ್ಯಾಸ. ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸಾವಿರಾರು ಸುಳ್ಳು ಕೇಸ್ ಗಳನ್ನು ಮುನಿರತ್ನ ಹಾಕಿಸಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರಕಾರ ಅನ್ನಭಾಗ್ಯದ ಅಕ್ಕಿ ಪ್ರಮಾಣವನ್ನು ಕಡಿತ ಮಾಡಿದೆ, ಅದರ ಜೊತೆಗೆ ವಿತರಣೆ ಆಗುತ್ತಿರುವ ಆಹಾರ ಪದಾರ್ಥಗಳು ಕಲಬೆರಕೆ ಬೇರೆ. ನಾನು ಶಿರಾಕ್ಕೆ ಹೋದಾಗ ಸರಕಾರ ಕೊಡುತ್ತಿರುವ ರಾಗಿಯನ್ನು ಕೋಳಿ ಸಹಾ ತಿನ್ನಲ್ಲ ಅಷ್ಟು ಕಲ್ಲು, ಕಡ್ಡಿಗಳಿವೆ ಅಂತ ಜನ ಹಿಡಿಹಿಡಿ ಶಾಪ ಹಾಕ್ತಿದ್ರು. ನಾಚಿಕೆಯಾಗ್ಬೇಕು ಈ ಸರಕಾರಕ್ಕೆ ಎಂದು ಸಿದ್ದರಾಮಯ್ಯ ಹೇಳಿದರು.

ಮೋದಿ ಮೋದಿ ಎಂದು ಕೂಗುವ ಯುವಕರಿಗೆ ನರೇಂದ್ರ ಮೋದಿ ಮೂರು ನಾಮ ಹಾಕಿದ್ದಾರೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಮೋದಿ ಹೇಳಿದ್ದರು. ಈಗ ಇದ್ದ ಉದ್ಯೋಗವನ್ನು ಕಳೆದುಕೊಂಡು ಯುವಕರು ಬೀದಿ ಪಾಲಾಗಿದ್ದಾರೆ. ಉದ್ಯೋಗ ಕೇಳಿದರೆ ಪಕೋಡ ಮಾರಲು ಹೋಗಿ ಎನ್ನುತ್ತಾರೆ ಎಂದು ಅವರು ಟೀಕಿಸಿದರು.

ಈಗ ಭ್ರಷ್ಟಾಚಾರ ಪಾರದರ್ಶಕ: ನಮ್ಮ ಸರಕಾರದ ಅವಧಿಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಇತ್ತು. ಈಗ ಮುಖ್ಯಮಂತ್ರಿ ಯಡಿಯೂರಪ್ಪ ಆಡಳಿತದಲ್ಲಿ ಲಂಚಾವತಾರ ವಿಜೃಂಭಿಸುತ್ತಿದ್ದು ಭ್ರಷ್ಟಾಚಾರ ಪಾರದರ್ಶಕವಾಗಿ ನಡೆಯುತ್ತಿದೆ. ಇಂಥ ಸರಕಾರಕ್ಕೆ ಉಪ ಚುನಾವಣೆ ಫಲಿತಾಂಶ ಎಚ್ಚರಿಕೆಯ ಗಂಟೆ ಆಗಬೇಕು. ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಶಾಸಕರಾದ ಬೈರತಿ ಸುರೇಶ್, ಡಾ.ಅಜಯಸಿಂಗ್, ವಿಜಯಸಿಂಗ್ ಮತ್ತಿರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X