Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೀಚ ರಾಜಕಾರಣಿಯಿಂದ ಕ್ಷೇತ್ರಕ್ಕೆ ಮುಕ್ತಿ...

ನೀಚ ರಾಜಕಾರಣಿಯಿಂದ ಕ್ಷೇತ್ರಕ್ಕೆ ಮುಕ್ತಿ ಕೊಡಿಸಬೇಕು: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ

ವಾರ್ತಾಭಾರತಿವಾರ್ತಾಭಾರತಿ30 Oct 2020 5:30 PM IST
share
ನೀಚ ರಾಜಕಾರಣಿಯಿಂದ ಕ್ಷೇತ್ರಕ್ಕೆ ಮುಕ್ತಿ ಕೊಡಿಸಬೇಕು: ಡಿ.ಕೆ.ಶಿವಕುಮಾರ್

ಬೆಂಗಳೂರು, ಅ. 30: `ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಈ ಉಪಚುನಾವಣೆ ಧರ್ಮ ಯುದ್ಧ. ಮತದಾರ ಈ ಕ್ಷೇತ್ರವನ್ನು ನೀಚ ರಾಜಕಾರಣಿಯ ನಿಯಂತ್ರಣದಿಂದ ಮುಕ್ತಗೊಳಿಸಬೇಕು' ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಮತದಾರರಿಗೆ ಮನವಿ ಮಾಡಿದ್ದಾರೆ.

ಶುಕ್ರವಾರ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಜಾಲಹಳ್ಳಿ ವಾರ್ಡ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್. ಅವರ ಪರ ಪ್ರಚಾರ ನಡೆಸಿದ ವೇಳೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಆಗಿರುವ ಅನ್ಯಾಯಕ್ಕೆ ನ್ಯಾಯ ಒದಗಿಸಲು, ನಿಮ್ಮ ಕಷ್ಟಕ್ಕೆ ಧ್ವನಿಯಾಗಲು ಕಾಂಗ್ರೆಸ್ ಪಕ್ಷ ಯುವ, ವಿದ್ಯಾವಂತ ಹಾಗೂ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದು ಹೇಳಿದರು.

ಈ ಚುನಾವಣೆ ರಾಜಕಾರಣದ ಧರ್ಮ ಹಾಗೂ ಅಧರ್ಮದ ನಡುವಣ ಯುದ್ಧ. ಒಂದು ಪಕ್ಷದಲ್ಲಿ ಗೆದ್ದು, ಆ ಪಕ್ಷ ಹಾಗೂ ಮತದಾರರನ್ನು ಕೇಳದೇ ಅವರು ಕೊಟ್ಟ ಮತ ಹಾಗೂ ಸ್ಥಾನವನ್ನು ಮಾರಾಟ ಮಾಡಿಕೊಂಡಿರುವುದು ರಾಜಕಾರಣದ ಅಧರ್ಮ. ಒಂದು ವ್ಯಕ್ತಿಯ ಸ್ವಾರ್ಥಕ್ಕಾಗಿ ಇಂದು ಈ ಚುನಾವಣೆಯ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಏನೆಲ್ಲಾ ನಡೆಯುತ್ತಿದೆ ಎಂದು ನೀವು ಗಮನಿಸುತ್ತಿದ್ದೀರಿ. ಈ ಹಿಂದೆ ನಾನು ಸೇರಿ ಕೆಲವು ತಪ್ಪಿಗೆ ಕಾರಣಕರ್ತನಾಗಿದ್ದೇವೆ ಎಂದು ಸ್ಪಷ್ಟಣೆ ನೀಡಿದರು.

ಸುಳ್ಳು ಪ್ರಕರಣಗಳ ವಿರುದ್ಧ ಹೋರಾಟ: `ನಿನ್ನೆ ಸಂಜೆ ಜ್ಞಾನಭಾರತಿ ವಾರ್ಡ್‍ನ ಪಕ್ಕದ ಕಾರ್ಪೋರೇಟರ್ ಮೋಹನ್ ಕುಮಾರ್ ಅವರ ಪ್ರದೇಶಕ್ಕೆ ಹೋಗಿದ್ದೆ. ಅಲ್ಲಿ ಎಲೆಕ್ಟ್ರಿಸಿಟಿ ಕಂಟ್ರಾಕ್ಟರ್ ಅವರ ಪುತ್ರ ಪ್ರೇಮ್ ಕುಮಾರ್ ಎಂಬ 21 ವರ್ಷದ ಹುಡುಗ ಬಿಜೆಪಿ ಬೆಂಬಲಿಗ. ಆ ಹುಡುಗ ತನ್ನ ಸ್ನೇಹಿತರ ಜತೆ ತುಳಸಿ ಮುನಿರಾಜು ಅವರ ಫೋಟೋ ಹಾಕಿಕೊಂಡು ಟೂರ್ನಿ ಆಯೋಜನೆ ಮಾಡಿದ್ದಕ್ಕೆ ಅವರ ಮೇಲೆ ಕೇಸು ಹಾಕಿದ್ದಾರಂತೆ. ತನ್ನ ಮಗ ಕ್ರಿಕೆಟ್ ಟೂರ್ನಿ ಆಯೋಜಿಸಿದ್ದಕ್ಕೆ ಈ ಶಿಕ್ಷೆನಾ ಅಂತಾ ಅವರ ತಂದೆ ಕೊರಗುತ್ತಿದ್ದಾರೆ.

ನಾವು ಮುಂದಿನ ದಿನಗಳಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸಭೆಯಲ್ಲಿ ಈ ಕ್ಷೇತ್ರದಲ್ಲಿ ದ್ವೇಷದಿಂದ ಹಾಕಲಾಗಿರುವ ಕೇಸ್‍ಗಳ ಕುರಿತು ಸಮಗ್ರ ತನಿಖೆಗೆ ಆಗ್ರಹಿಸುತ್ತೇವೆ. ಹೆಣ್ಣು ಮಕ್ಕಳು, ವಿದ್ಯಾರ್ಥಿಗಳು, ಯುವಕರು, ಎಲ್ಲ ಪಕ್ಷಗಳ ಕಾರ್ಯಕರ್ತರ ಮೇಲೆ ಹಾಕಿರುವ ಕೇಸುಗಳ ವಿರುದ್ಧ ಹೋರಾಟ ಮಾಡುತ್ತೇವೆ. ಈ ವ್ಯಕ್ತಿ ಮೂವರು ಮಹಿಳಾ ಕಾರ್ಯಕರ್ತರ ಮೇಲೆ ಮಾತ್ರ ಈ ರೀತಿ ಕಿರುಕುಳ ನೀಡಿದ್ದಾನೆಂದುಕೊಂಡಿದ್ದೆ. ಆದರೆ, ಬೀದಿಬೀದಿಯಲ್ಲಿ ಇಂತಹ ಕೇಸುಗಳು ದಾಖಲಾಗಿವೆ. ತನ್ನ ವಿರುದ್ಧ ಧ್ವನಿ ಎತ್ತಿದ ಮಹಿಳೆಯರ ಮೇಲೆ ವೇಶ್ಯಾವಾಟಿಕೆ ಕೇಸು ದಾಖಲಾಗಿವೆ ಎಂದರು.

ಚುನಾವಣೆ ನಂತರ ನಾವು ಇವರ ವಿರುದ್ಧ ಹೋರಾಟ ಮಾಡುತ್ತೇವೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಈ ವಿಚಾರವಾಗಿ ತನಿಖೆ ನಡೆಸಲು ಒಂದು ಪ್ರತ್ಯೇಕ ಆಯೋಗವನ್ನೇ ರಚಿಸುತ್ತೇವೆ. ಇನ್ನು ಮುಂದೆ ಈ ಕ್ಷೇತ್ರದ ಮುಗ್ಧ ಮತದಾರರಿಗೆ ರಕ್ಷಣೆ ನೀಡಲಿಲ್ಲ ಎಂದರೆ ನಾವು  ನಮ್ಮ ಕರ್ತವ್ಯಕ್ಕೆ ದ್ರೋಹ ಬಗೆದಂತಾಗುತ್ತದೆ. ಈ ಚುನಾವಣೆ ಬಿಜೆಪಿಗೂ ನಮಗೂ ಅಲ್ಲ, ದಳಕ್ಕೂ ನಮಗೂ ಅಲ್ಲ. ಇದು ಒಬ್ಬ ವ್ಯಕ್ತಿ ಮಾಡಿರುವ ಅನಾಚಾರ, ಅನ್ಯಾಯ, ದಬ್ಬಾಳಿಕೆ, ಅಧಿಕಾರ ದುರುಪಯೋಗ ಮಾಡಿಕೊಂಡಿರುವುದಕ್ಕೆ ಶಿಕ್ಷೆ ನೀಡುವ ಚುನಾವಣೆ ಎಂದು ಶಿವಕುಮಾರ್ ವಾಗ್ದಾಳಿ ನಡೆಸಿದರು.

ಕೆಲಸ ಮಾಡದೆ ಬಿಲ್: `ಈತ ಕೆಲಸ ಮಾಡದೇ ಸಾವಿರಾರು ಕೋಟಿ ರೂಪಾಯಿ ಮೊತ್ತದ ಬಿಲ್ ತೆಗೆದುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬಿಜೆಪಿ ಸರಕಾರ ಬಂದಮೇಲೆ 250 ಕೋಟಿ ರೂ.ಮೊತ್ತದ ಬಿಲ್ ಅನ್ನು ಕೆಲಸ ಮಾಡದೇ ಪಡೆದಿರುವುದರ ವಿರುದ್ಧ ಲೋಕಾಯುಕ್ತರಿಗೆ ಅಫಿಡವಿಟ್ ದಾಖಲಿಸಿದ್ದಾರೆ. ಬಿಬಿಎಂಪಿ ಆಯುಕ್ತರು ರಾತ್ರೋರಾತ್ರಿ ಬಿಲ್ ತಡೆಹಿಡಿದಿದ್ದಾರೆ' ಎಂದು ಅವರು ಟೀಕಿಸಿದರು.

ಅರ್ಹ ಅಭ್ಯರ್ಥಿ ಕುಸುಮಾಗೆ ಮತ ನೀಡಿ: `ಈ ನೀಚ ರಾಜಕಾರಣಿ ನಮ್ಮ ಪಕ್ಷದಿಂದ ತೊಲಗಿ ಹೋಗಿದ್ದೇ ಒಳ್ಳೆಯದಾಯ್ತು. ಇಂತಹವರನ್ನು ಬೆಳೆಸಿ, ನಾವು ರಾಜಕಾರಣ ಮಾಡುವ ಅಗತ್ಯವಿಲ್ಲ. ನೀವು ಈ ಬಾರಿ ಮತ ಹಾಕುವಾಗ ಒಬ್ಬ ಹೆಣ್ಣುಮಗಳು, ವಿದ್ಯಾವಂತೆ, ಬುದ್ಧಿವಂತೆ, ಪ್ರಜ್ಞಾವಂತೆ ಆಯ್ಕೆ ಮಾಡಿದರೆ ನಿಮ್ಮ ಕಷ್ಟಕ್ಕೆ ಸ್ಪಂದಿಸುತ್ತಾಳೆ ಎಂಬುದನ್ನು ಯೋಚಿಸಿ ಮತಹಾಕಿ. ಯುವಕರು, ಮಹಿಳೆಗೆ ಆದ್ಯತೆ ನೀಡಬೇಕು ಅಂತಾ ನಾವು ಕುಸುಮಾ ಅವರನ್ನು ಕಣಕ್ಕಿಳಿಸಿದ್ದೇವೆ. ಬೆಂಗಳೂರಿನ 28 ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿದ್ದೇವೆ' ಎಂದು ಅವರು ತಿಳಿಸಿದರು.

ಉಪ ಚುನಾವಣೆಯಲ್ಲಿ ನಿಮ್ಮ ಮುಂದೆ ಉತ್ತಮ ಅಭ್ಯರ್ಥಿಯನ್ನು ನಿಲ್ಲಿಸಿದ್ದೇವೆ. ನೀವು ಪಕ್ಷವನ್ನು ನೋಡಬೇಡಿ. ನೀಚ ರಾಜಕಾರಣಿಯನ್ನು ಕ್ಷೇತ್ರದಲ್ಲಿ ಕೊನೆ ಮಾಡಬೇಕು, ಈ ಕ್ಷೇತ್ರಕ್ಕೆ ಸ್ವಾತಂತ್ರ್ಯ ಕೊಡಿಸಬೇಕು, ನಿಮಗೆ ಆಗಿರುವ ಅನ್ಯಾಯಕ್ಕೆ ಧ್ವನಿಯಾಗಲು ಕಾಂಗ್ರೆಸ್ ಪಕ್ಷದ ಕುಸುಮಾರಿಗೆ ಮತ ನೀಡಿ' ಎಂದು ಶಿವಕುಮಾರ್ ಮನವಿ ಮಾಡಿದರು.

ಈ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖಂಡರಾದ ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಐವಾನ್ ಡಿಸೋಜಾ, ಡಾ.ಅಜಯ್ ಸಿಂಗ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X