Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನವೆಂಬರ್ ತಿಂಗಳಿಡೀ ಆಕಾಶ ಕೆಂಬಣ್ಣದ...

ನವೆಂಬರ್ ತಿಂಗಳಿಡೀ ಆಕಾಶ ಕೆಂಬಣ್ಣದ ಓಕುಳಿ !

ಕೆಂಪಾದವೋ ಆಕಾಶವೆಲ್ಲಾ ಕೆಂಪಾದವೋ...

ವಾರ್ತಾಭಾರತಿವಾರ್ತಾಭಾರತಿ30 Oct 2020 7:46 PM IST
share
ನವೆಂಬರ್ ತಿಂಗಳಿಡೀ ಆಕಾಶ ಕೆಂಬಣ್ಣದ ಓಕುಳಿ !

ಉಡುಪಿ, ಅ. 30: ಇಡೀ ವರ್ಷದಲ್ಲೇ ಚೆಂದದ ಸೂರ್ಯೋದಯ ಹಾಗೂ ಸೂರ್ಯಾಸ್ತವನ್ನು ಈ ತಿಂಗಳಲ್ಲಿ ನೋಡಬಹುದಾಗಿದೆ. ಸೂರ್ಯಾಸ್ತವಂತೂ ಸುಂದರ ಕೆಂಬಣ್ಣದಿಂದ ಕೂಡಿರುತ್ತದೆ. ಸೂರ್ಯ ಕಣ್ಮರೆಯಾಗುವಾಗ ಇಡೀ ಆಕಾಶವೇ ಕೆಂಬಣ್ಣದ ಓಕುಳಿಯಂತೆ ಗೋಚರಿಸುತ್ತದೆ. ಮಳೆಗಾಲ ಮುಗಿದು ಚಳಿ ಪ್ರಾರಂಭದ ಆಕಾಶದ ವಾತಾವರಣವೇ ಈ ಭವ್ಯತೆಗೆ ಕಾರಣವಾಗಿದೆ ಎಂದು ಖ್ಯಾತ ಭೌತ ವಿಜ್ಞಾನಿ ಹಾಗೂ ನಿವೃತ್ತ ಪ್ರಾಧ್ಯಾಪಕ ಡಾ.ಎ.ಪಿ. ಭಟ್ ತಿಳಿಸಿದ್ದಾರೆ.

ಈ ತಿಂಗಳು ಮಾತ್ರ ಆಕಾಶ ಇಷ್ಟೊಂದು ಕೆಂಬಣ್ಣದಲ್ಲಿ ಇರುತ್ತದೆ. ಮಳೆಗಾಲದಲ್ಲಿ ಈ ಚೆಂದ ಇರುವುದೇ ಇಲ್ಲ. ಆಕಾಶ ಕೇವಲ ಬಿಳಿಯಾ ಗಿರುತ್ತದೆ. ಹಾಗೆಯೆ ಫೆಬ್ರವರಿ, ಮಾರ್ಚ್, ಎಪ್ರಿಲ್, ಮೇ ತಿಂಗಳುಗಳಲ್ಲಿ ಇಷ್ಟು ಕೆಂಬಣ್ಣ ಇರುವುದಿಲ್ಲ. ಕೇವಲ ಹಳದಿ ಮಿಶ್ರಿತ ಸೌಮ್ಯ ಕೆಂಪು ಬಣ್ಣ ಇರುತ್ತದೆ ಎಂದು ಅವರು ಹೇಳುತ್ತಾರೆ.

ಸೆಪ್ಟೆಂಬರ್ ಕಾಲದಲ್ಲಿ ಸೂರ್ಯಾಸ್ತ, ಅರಿಶಿನ ಬಣ್ಣದಿಂದ ಕೂಡಿರುತ್ತದೆ. ಇಷ್ಟು ಮಾತ್ರವಲ್ಲ, ಆಶ್ವಿಜ, ಕಾರ್ತಿಕದ ಈ ಹುಣ್ಣಿಮೆಗಳ ಚಂದ್ರನಿಗೆ ಭವ್ಯ ವರ್ತುಲವೇರ್ಪಡಬಹುದು. ಅಲ್ಲದೇ ಈ ಕಾಲದಲ್ಲೇ ಅಪರಾಹ್ನದ ಸಮಯದಲ್ಲಿ ಸೂರ್ಯನಿಗೆ ಭವ್ಯ ವರ್ತುಲಾಕಾರದ ಕಾಮನಬಿಲ್ಲಿನ ಕೊಡೆಯನ್ನು ಆಗಾಗ ಕಾಣಬಹುದು ಎಂದವರು ವಿವರಿಸಿದರು.

ಇವೆಲ್ಲದಕ್ಕೂ ನಮ್ಮ ಭೂಮಿಯ ವಾತಾವರಣವೇ ಕಾರಣ. ತೇವ ಮಿಶ್ರಿತ ವಾತಾವರಣದಲ್ಲಿ ಸೂರ್ಯನ ಬೆಳಕು ಚೆದುರಿ, ಈ ಭವ್ಯತೆಯನ್ನು ಉಂಟು ಮಾಡುತ್ತದೆ. ಸಮುದ್ರ ತೀರದಲ್ಲಿ ಹಾಗೂ ಪಶ್ಚಿಮಘಟ್ಟದ ಎತ್ತರದ ಪ್ರದೇಶಗಳಲ್ಲಿ, ಈ ಕೆಲ ದಿನಗಳ ಪ್ರಶಾಂತ ಸಂಜೆ, ಆಕಾಶದಲ್ಲಿ ಹೊಸ ಹೊಸ ಚಿತ್ತಾರಗಳನ್ನು ಮೂಡಿಸಿ ನಮ್ಮನ್ನು ಮಂತ್ರಮುಗ್ಧರನ್ನಾಗಿಸುತ್ತದೆ.

ರಾತ್ರಿಯ ನೀಲಾಕಾಶದ ನಕ್ಷತ್ರಗಳೂ, ಈಗ ಬಲು ಚೆಂದವಾಗಿ ಕಾಣುತ್ತದೆ. ಈ ಎಲ್ಲಾ ಸೊಬಗು ನಮಗೆ ಭೂಮಿಯವರಿಗೆ ಮಾತ್ರ ನೋಡಲು ಸಿಗುತ್ತದೆ. ಬೇರೆ ಯಾವ ಗ್ರಹಗಳಲ್ಲೂ ಭೂಮಿಗಿರುವಂಥ ವಾತಾವರಣವಿಲ್ಲದೇ ಇರುವುದರಿಂದ ಈ ಬಣ್ಣದ ಚಿತ್ತಾರ ಇರುವುದಿಲ್ಲ. ಹೀಗಾಗಿ ಅಪರೂಪಕ್ಕೆ ಸಿಗುವ ಇಂಥ ಕಣ್ಮನ ಸೆಳೆಯುವ ಸೊಬಗನ್ನು ಎಲ್ಲರೂ ನೋಡಿ ಆನಂದಿಸಬೇಕು ಎಂದು ಡಾ.ಎ.ಪಿ.ಭಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನೋಬೆಲ್ ಪ್ರಶಸ್ತಿಗೂ ಇದೇ ಸ್ಪೂರ್ತಿ

ಆಕಾಶದಲ್ಲಿ ಮೂಡಿದ ಬಣ್ಣದೊಕುಳಿಯೇ ಭಾರತದ ಮಹಾನ್ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರ ಸಂಶೋಧನೆಗೆ ಸ್ಪೂರ್ತಿಯಾಗಿದ್ದು, ಈ ಬಣ್ಣದ ಚಿತ್ತಾರ ಅವರ ಹೊಸ ಹೊಸ ಚಿಂತನೆಗೆ ಕಾರಣವಾಯಿತು. ಇದೇ ಅವರ ನೋಬೆಲ್ ಪ್ರಶಸ್ತಿಗೂ ಮೂಲ ಕಾರಣವಾಯಿತು ಎಂದು ಡಾ.ಎ.ಪಿ.ಭಟ್ ನುಡಿದರು.

ಅ.31ರ ಹುಣ್ಣಿಮೆಯಿಂದ ಮುಂದಿನ ಹುಣ್ಣಿಮೆಯವರೆಗೆ ಆಕಾಶ ಕೆಂಬಣ್ಣದಲ್ಲಿ ಗೋಚರಿಸಲಿದೆ. ಕೆಂಪಾದವೋ ಎಲ್ಲಾ ಕೆಂಪಾದವೋ ಎಂದು ಕವಿ ಹಾಡಿದಂತೆ!

share
ವಾರ್ತಾಭಾರತಿ
ವಾರ್ತಾಭಾರತಿ
Next Story
X