ಆರ್ಆರ್ ನಗರ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲು

ಬೆಂಗಳೂರು, ಅ.30: ಆರ್‍ಆರ್ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಮತಯಾಚನೆ ಸಂದರ್ಭ ಕೋವಿಡ್-19 ನಿಯಮ ಉಲ್ಲಂಘಿಸಿದ ಆರೋಪದಡಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರತ್ಯೇಕ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ.
ಇಲ್ಲಿನ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಪಕ್ಷದ ಸದಸ್ಯರು ಕೋವಿಡ್ ನಿಯಮ ಉಲ್ಲಂಘಿಸಿ ಅಧಿಕ ಜನರನ್ನು ಜಮಾವಣೆ ಮಾಡಿದ ಆರೋಪದಡಿ ದೂರು ದಾಖಲಾದರೆ, ಇದೇ ಆರೋಪದಲ್ಲಿ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೂ ದೂರು ದಾಖಲಾಗಿದೆ.
Next Story





