Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತರ ಮೇಲೆ ದೌರ್ಜನ್ಯ ಪ್ರಕರಣ:...

ದಲಿತರ ಮೇಲೆ ದೌರ್ಜನ್ಯ ಪ್ರಕರಣ: ''ಸಂತ್ರಸ್ತರ ವಿರುದ್ಧದ ಸುಳ್ಳು ಕೇಸುಗಳನ್ನು ಹಿಂಪಡೆಯದಿದ್ದರೆ ಹೋರಾಟ''

ವಾರ್ತಾಭಾರತಿವಾರ್ತಾಭಾರತಿ30 Oct 2020 5:12 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದಲಿತರ ಮೇಲೆ ದೌರ್ಜನ್ಯ ಪ್ರಕರಣ: ಸಂತ್ರಸ್ತರ ವಿರುದ್ಧದ ಸುಳ್ಳು ಕೇಸುಗಳನ್ನು ಹಿಂಪಡೆಯದಿದ್ದರೆ ಹೋರಾಟ

ಕೊಪ್ಪಳ, ಅ. 30: `ಜಿಲ್ಲೆಯು ಕಾರಟಗಿ ತಾಲೂಕಿನ ಹಗೇದಾಳ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ದಲಿತ ಸಮುದಾಯದ ಸಂತ್ರಸ್ತರ ವಿರುದ್ಧ ಹಾಕಿರುವ ಸುಳ್ಳು ಕೇಸುಗಳನ್ನು ಕೂಡಲೇ ಹಿಂಪಡೆಯಬೇಕು. ಪೊಲೀಸರ ವೈಫಲ್ಯದಿಂದಲೇ ಈ ದೌರ್ಜನ್ಯ ನಡೆದಿದ್ದು, ಕೃತ್ಯ ನಡೆಸಿದ ಮೇಲ್ಜಾತಿಯವರು ಸೇರಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು' ಎಂದು ಕರ್ನಾಟಕ ರೈತ ಸಂಘದ ಮುಖಂಡ ಡಿ.ಎಚ್.ಪೂಜಾರ್ ಆಗ್ರಹಿಸಿದ್ದಾರೆ.

ಶುಕ್ರವಾರ ಪೂಜಾರ್ ನೇತೃತ್ವದ ಮುಖಂಡರ ನಿಯೋಗ ಗ್ರಾಮಕ್ಕೆ ಭೇಟಿ ನೀಡಿ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತರಿಗೆ ಧೈರ್ಯ ಹೇಳಿತು. ಅಲ್ಲದೆ, ಇದೇ ವೇಳೆ ಸಭೆ ನಡೆಸುತ್ತಿದ್ದ ಸ್ಥಳಕ್ಕೆ ಧಾವಿಸಿದ ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಮತ್ತು ಸಿಪಿಐ ಉದಯ ರವಿ ಸೇರಿದಂತೆ ಅಧಿಕಾರಿಗಳಿಗೆ ದೌರ್ಜನ್ಯಕ್ಕೊಳಗಾದ ಸಂತ್ರಸ್ತರ ಮೇಲೆ ಹಾಕಿರುವ ಸುಳ್ಳು ಕೇಸುಗಳನ್ನು ಕೂಡಲೇ ಹಿಂಪಡೆಯದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

`ವಾರ್ತಾಭಾರತಿ' ಪತ್ರಿಕೆಯೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಡಿ.ಎಚ್.ಪೂಜಾರ್, ಅ.28ರ ಬೆಳಗ್ಗೆ 6ಗಂಟೆ ಸುಮಾರಿಗೆ ಗ್ರಾಮದ ರಡ್ಡಿ ಲಿಂಗಾಯತ ಸಮುದಾಯದ ಯುವಕ ಸಿಗರೇಟ್ ತರುವಂತೆ ಗ್ರಾಮ ಮಾದಿಗ ಸಮುದಾಯದ ದುರುಗೇಶ್‍ಗೆ ಹೇಳಿದ್ದಾನೆ. ಇದೇ ವಿಚಾರಕ್ಕೆ ಮಾತಿನ ಚಕಮಕಿ ನಡೆದಿದ್ದು ಬಳಿಕ ರಾಜಿ ಸಂಧಾನ ನಡೆದಿದೆ. ಆದರೆ, ಆ ಬಳಿಕ ದಲಿತ ಕೇರಿಗೆ ನುಗ್ಗಿ ಮಹಿಳೆಯರು, ವೃದ್ಧರನ್ನು ನೋಡದೆ ಮಾರಕಾಸ್ತ್ರಗಳಿಂದ ಮರಣಾಂತಿಕ ಹಲ್ಲೆ ನಡೆಸಿದ್ದು ಅಪಮಾನ ಮಾಡಲಾಗಿದೆ.

ಆದರೆ, ಪೊಲೀಸರು ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದನ್ನು ಬಿಟ್ಟು ಸಂತ್ರಸ್ತರ ವಿರುದ್ಧವೇ ಪ್ರಕರಣ ದಾಖಲಿಸಿದ್ದಾರೆ. ಆ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆಯಡಿಯ ಪ್ರಕರಣದಿಂದ ದೌರ್ಜನ್ಯ ನಡೆಸಿದ ತಪ್ಪಿತಸ್ಥರನ್ನು ಕೈಬಿಡುವ ಕೆಲಸಕ್ಕೆ ಪೊಲೀಸರು ಮುಂದಾಗಿರುವುದು ಅಕ್ಷಮ್ಯ. ಹೀಗಾಗಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇಡೀ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಿ ಯಾರೇ ತಪ್ಪಿತಸ್ಥರು ಇದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ಆದರೆ, ದೌರ್ಜನ್ಯಕ್ಕೊಳಗಾದ ದಲಿತರ ಮೇಲೆಯೆ ಪ್ರತಿಯಾಗಿ ಕೇಸು ಹಾಕುವ ಮೂಲಕ ದೌರ್ಜನ್ಯ ನಡೆಸುವವರಿಗೆ ಕಾನೂನಿನ ಭಯ ಇಲ್ಲದಂತೆ ಮಾಡುವುದು ಸರಿಯಲ್ಲ. ಅಲ್ಲದೆ, ದಲಿತ ಸಮುದಾಯ ಕೇರಿಗೆ ನುಗ್ಗಿ ಹಲ್ಲೆ, ದೌರ್ಜನ್ಯ ನಡೆಸುವ ಮನಸ್ಥಿತಿ ಬದಲಾಗಬೇಕು ಎಂದು ಪೂಜಾರ್ ಆಗ್ರಹಿಸಿದರು.

ಜಾತಿ ದೌರ್ಜನ್ಯ, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರಗಳನ್ನು ಸಮರ್ಥಿಸುವ ಕೋಮುವಾದಿ ಮನಸ್ಥಿತಿಯವರ ಅಧಿಕಾರದಿಂದ ತೊಲಗಬೇಕು. ಜಾತಿಯ ಹೆಸರಿನಲ್ಲಿ ನಡೆಯುತ್ತಿರುವ ಅಸ್ಪೃಶ್ಯತೆ, ಜಾತಿ ಅಪಮಾನ, ಹಲ್ಲೆ-ದೌರ್ಜನ್ಯದ ಘಟನೆಗಳು ಕೊನೆಗೊಳ್ಳಬೇಕು. ಎಲ್ಲ ಜಾತಿಯ ಜನರು ತಮ್ಮ ಬದುಕಿನ ಸಮಸ್ಯೆಗಳ ವಿರುದ್ಧ ಒಗ್ಗೂಡುವ ಮೂಲಕ ಸಮಾನತೆಯಿಂದ ಬದುಕವಂತಹ ವಾತಾವರಣ ಗ್ರಾಮಗಳಲ್ಲಿ ನೆಲೆಸಬೇಕು ಎಂದು ಪೂಜಾರ್ ಕೋರಿದರು.

ಈ ವೇಳೆ ದಲಿತ ಮುಖಂಡರಾದ ಆನಂದ ಬಂಡಾರಿ, ಶ್ರೀನಿವಾಸ ನಾಯಕ, ಚಿಟ್ಟೆಬಾಬು ಸೇರಿದಂತೆ ಗ್ರಾಮದ ಜನರು ಇದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X