Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರ್ದಾರ್ ಪಟೇಲ್, ಇಂದಿರಾ ಗಾಂಧಿ ಅವರ...

ಸರ್ದಾರ್ ಪಟೇಲ್, ಇಂದಿರಾ ಗಾಂಧಿ ಅವರ ಮಾರ್ಗದರ್ಶನ ನಮಗೆ ಅಗತ್ಯ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ31 Oct 2020 6:20 PM IST
share
ಸರ್ದಾರ್ ಪಟೇಲ್, ಇಂದಿರಾ ಗಾಂಧಿ ಅವರ ಮಾರ್ಗದರ್ಶನ ನಮಗೆ ಅಗತ್ಯ: ಡಿ.ಕೆ.ಶಿವಕುಮಾರ್

ಬೆಂಗಳೂರು, ಅ. 31: `ದೇಶದ ಉಕ್ಕಿನ ಮನುಷ್ಯ ಖ್ಯಾತಿಯ ಸರ್ದಾರ್ ಪಟೇಲರು ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಕೊಟ್ಟಿರುವ ಸ್ಫೂರ್ತಿ ಹಾಗೂ ಮಾರ್ಗದರ್ಶನ ನಮಗೆ ಅಗತ್ಯವಾಗಿದೆ. ಪ್ರತಿಯೊಬ್ಬರು ಅವರ ಒಂದು ಅಂಶವನ್ನಾದರೂ ರೂಢಿಸಿಕೊಳ್ಳಬೇಕು' ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದಿಲ್ಲಿ ಕರೆ ನೀಡಿದ್ದಾರೆ.

ಶನಿವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನ ಅಂಗವಾಗಿ ಕ್ವೀನ್ಸ್ ರಸ್ತೆಯ ಪಕ್ಷದ ಕಚೇರಿಯಲ್ಲಿ ಇಬ್ಬರು ನಾಯಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಇಂದು ನಾವು ದೇಶ ಕಂಡ ಇಬ್ಬರು ಮಹಾನ್ ನಾಯಕರನ್ನು ನೆನೆಸಿಕೊಳ್ಳುತ್ತಿದ್ದೇವೆ. ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಸರ್ದಾರ್ ಪಟೇಲರ ಜನ್ಮ ದಿನ, ಜತೆಗೆ ಕಿಸಾನ್ ಅಧಿಕಾರ್ ದಿವಸ, ವಾಲ್ಮೀಕಿ ಜಯಂತಿ ಆಚರಿಸುತ್ತಿದ್ದೇವೆ. ನಮ್ಮ ಸರಕಾರ ಇದ್ದಾಗ ವಾಲ್ಮೀಕಿ ಅವರನ್ನು ಸ್ಮರಿಸಲು ಈ ಜಯಂತಿ ಆಚರಿಸಲು ಆರಂಭಿಸಿದ್ದೆವು. ಈ ಕಾರ್ಯಕ್ರಮ ದೊಡ್ಡದಾಗಿ ಮಾಡಬೇಕಿತ್ತು. ಆದರೆ, ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಾವು ಇಂದು ಸಾಂಕೇತಿಕವಾಗಿ ಕಾರ್ಯಕ್ರಮ ಮಾಡುತ್ತಿದ್ದೇವೆ.

ಈ ನಾಯಕರು ಕೊಟ್ಟಿರುವ ಸ್ಫೂರ್ತಿ ಹಾಗೂ ಮಾರ್ಗದರ್ಶನ ನಮಗೆ ಅಗತ್ಯವಾಗಿದೆ. ನಾವು ಪ್ರತಿಯೊಬ್ಬರು ಅವರ ಒಂದು ಅಂಶವನ್ನಾದರೂ ರೂಢಿಸಿಕೊಳ್ಳಬೇಕು. ಸರ್ದಾರ್ ಪಟೇಲರು ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ತೆಗೆದುಕೊಂಡಿರುವ ನಿರ್ಧಾರ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ್ದಾಗಿತ್ತು. ದೇಶವನ್ನು ಒಗ್ಗೂಡಿಸಲು ಅವರ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಅವರನ್ನು ಉಕ್ಕಿನ ಮನುಷ್ಯ ಅಂತಾ ಕರೆಯುತ್ತೇವೆ ಎಂದರು.

ಇನ್ನು ನಾಲ್ಕು ದಶಕಗಳ ಹಿಂದೆ ಅನೇಕ ನಾವು ಇಂದಿರಾಗಾಂಧಿ ಅವರನ್ನು ಕಣ್ಣಾರೆ ಕಂಡಿದ್ದೆವು. ಅವರು ಕೊಟ್ಟ ಅನೇಕ ಕಾರ್ಯಕ್ರಮದಿಂದ ದೇಶ ಬದಲಾಗಿದ್ದನ್ನು ನೋಡಿದ್ದೇವೆ. ದೇಶ ಕಂಡ ಅಪ್ರತಿಮ ಪ್ರಧಾನಿ ಎಂದರೆ ಇಂದಿರಾ ಗಾಂಧಿ ಎಂದು ಜನ ಹೇಳುತ್ತಾರೆ. ಅವರನ್ನು ದುರ್ಗಾದೇವಿ ಎಂದು ಅಟಲ್ ಬಿಹಾರಿ ವಾಜಪೇಯಿ ಅವರೇ ಹೇಳಿದ್ದಾರೆ. ಅವರು ಇಂದು ಇಲ್ಲದಿರಬಹುದು, ಈ ದೇಶದ ಐಕ್ಯತೆ, ಸಮಗ್ರತೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ದೇಶದ ಮಹತ್ವದ ಬದಲಾವಣೆಯಲ್ಲಿ ಅವರಿದ್ದಾರೆ. ಅವರ ಕಾರ್ಯಕ್ರಮದಿಂದ ಜನರ ಜೀವನದಲ್ಲಿ ಆದ ಪ್ರಗತಿಯಲ್ಲಿ ಇಂದಿರಾಗಾಂಧಿ ಅವರು ಜೀವಂತವಾಗಿದ್ದಾರೆ ಎಂದು ಸ್ಮರಿಸಿದರು.

ಬ್ಯಾಂಕುಗಳ ರಾಷ್ಟೀಕರಣ ಆಗದಿದ್ದರೆ, ದೇಶ ಆರ್ಥಿಕವಾಗಿ ಇಷ್ಟು ಪ್ರಬಲವಾಗಿ ಬೆಳೆಯಲು ಸಾಧ್ಯವಿಲ್ಲ. ಭೂ ಸುಧಾರಣಾ ಕಾಯ್ದೆ ಮೂಲಕ ದೇಶದಲ್ಲಿ ಬಡವರಿಗೆ ಭೂಮಿ ಕೊಟ್ಟರು. ದೇಶ ಅನೇಕ ಯುದ್ಧಗಳನ್ನು ಎದುರಿಸಿದ ಸಮಯದಲ್ಲಿ, ಬಾಂಗ್ಲಾ ರಕ್ಷಣೆ ಸಮಯದಲ್ಲಿ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಅವರ ಪ್ರತಿ ತೀರ್ಮಾನ ಐಕ್ಯತೆ ಹಾಗೂ ರಾಜಕೀಯ ಬದ್ಧತೆ ಇತ್ತು. ಅವರು ಚಿಕ್ಕಮಗಳೂರಿನಲ್ಲಿ ಚುನಾವಣೆ ಸಂದರ್ಭದಲ್ಲಿ ನಾವು ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ಅವರ ಸರಳತೆ ನೋಡಿದ್ದೆವು. ಕಾರ್ಯಕರ್ತರ ಮನೆಯಲ್ಲೇ ಮಲಗುತ್ತಿದ್ದರು ಎಂದು ಶಿವಕುಮಾರ್ ಹೇಳಿದರು.

ನಾವೆಲ್ಲಾ ಯೂತ್ ಕಾಂಗ್ರೆಸ್‍ನಲ್ಲಿದ್ದಾಗ ದಿಲ್ಲಿ ಸಮಾವೇಶಕ್ಕೆ ರೈಲಿನ ಮೂಲಕ ಹೊರಟೆವು. ರೈಲು ಪ್ರಯಾಣ ಆರಂಭವಾದ ಕೆಲವೇ ಹೊತ್ತಲ್ಲಿ ಇಂದಿರಾಗಾಂಧಿ ಅವರ ಹತ್ಯೆ ಬಗ್ಗೆ ಸುದ್ದಿ ಬಂತು. ಆ ಸಂದರ್ಭದಲ್ಲಿ ನಾನು ನಮ್ಮೂರಿನಲ್ಲಿ ಚಿತ್ರಮಂದಿರ ತೆರೆಯಲು ಅರ್ಜಿ ಹಾಕಿದ್ದೆ. ಆಗ ಜಿಲ್ಲಾಧಿಕಾರಿಗಳು ಏನು ಹೆಸರಿಡುತ್ತೀರ ಎಂದು ಕೇಳಿದರು, ಆಗ ನಾನು ಇಂದಿರಾ ಗಾಂಧಿ ಅಂತಾ ಹೆಸರಿಡುತ್ತೇನೆ ಎಂದೇ. ಆಗ ಅವರು ಇಂದಿರಾ ಚಿತ್ರ ಮಂದಿರಾ ಅಂತಾ ಬರೆದು ಕೊಟ್ಟರು. ಅವರಲ್ಲಿದ್ದ ರಾಜಕೀಯ ಬದ್ಧತೆ ಹಾಗೂ ಜನರಿಗೆ ಕೊಟ್ಟ ಕಾರ್ಯಕ್ರಮದ ಮೂಲಕ ಅವರು ಜೀವಂತವಾಗಿದ್ದಾರೆ ಎಂದು ಸ್ಮರಿಸಿದರು.

ಈ ವೇಳೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಮಾಧ್ಯಮ ವಿಭಾಗ ಮುಖ್ಯಸ್ಥ ಬಿ.ಎಲ್.ಶಂಕರ್ ಸೇರಿದಂತೆ ಮತ್ತಿತರ ನಾಯಕರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X