Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಕಿಸಾನ್...

ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಕಿಸಾನ್ ಅಧಿಕಾರ್ ದಿವಸ್ ಆಚರಣೆ

ಇಂದಿರಾ ಗಾಂಧಿ ಪುಣ್ಯಸ್ಮರಣೆ; ಸರ್ದಾರ್ ಪಟೇಲ್ ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ31 Oct 2020 7:26 PM IST
share
ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ಕಿಸಾನ್ ಅಧಿಕಾರ್ ದಿವಸ್ ಆಚರಣೆ

ಉಡುಪಿ, ಅ.31:ಭಾರತವನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಿ ಸರ್ವತಂತ್ರ ಸ್ವತಂತ್ರದ ಏಕಭಾರತ ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಿರ್ಮಾಣ ವಾಗುವುದಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲರ ಕೊಡುಗೆ ಅಪಾರ. ಅದೇ ರೀತಿ ಹಿಂದುಳಿದ ವರ್ಗದ ಜನತೆಗೆ ಆರ್ಥಿಕ ಸ್ವಾತಂತ್ರ ವನ್ನು ಕೊಟ್ಟ ಧೀಮಂತ ಮಹಿಳೆಯಾಗಿ ದೇಶ ಎಂದೂ ಮರೆಯದ ವ್ಯಕ್ತಿತ್ವ ಹೊಂದಿದ ಇಂದಿರಾ ಗಾಂಧಿ ಅವರನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ಹೇಳಿದ್ದಾರೆ.

ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ನಡೆದ ಸರ್ದಾರ್ ವಲ್ಲಭಭಾಯಿ ಪಾಟೇಲ್ ಜನ್ಮದಿನಾಚರಣೆ ಹಾಗೂ ಇಂದಿರಾ ಗಾಂಧಿ ಪುಣ್ಯ ಸ್ಮರಣೆಯೊಂದಿಗೆ ಹಮ್ಮಿಕೊಳ್ಳಲಾದ ‘ಕಿಸಾನ್ ಅಧಿಕಾರ್ ದಿವಸ’ ಆಚರಣೆಯ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಕೇಂದ್ರ ಸರಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ’ಕಿಸಾನ್ ಅಧಿಕಾರ್ ದಿವಸ್’ ಆಚರಣೆಯೊಂದಿಗೆ ಮುಂದಿನ ದಿನದಲ್ಲಿ ರೈತ ವಿರೋಧಿ ನೀತಿಯ ವಿರುದ್ಧ ಬ್ರಹತ್ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೊಡವೂರು ತಿಳಿಸಿದು.

ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಮಾತನಾಡಿ,ದೇಶದ ಐಕ್ಯತೆ, ಭದ್ರತೆ ಹಾಗೂ ಸಮಗ್ರತೆಗೆ ಸರ್ದಾರ್ ವಲ್ಲಭಭಾಯಿ ಪಟೇಲರ ಕೊಡುಗೆ ಅಪಾರ. ಸ್ವಾತಂತ್ರ ಚಳುವಳಿಯಲ್ಲಿ ಬ್ರಿಟಿಷರ ದಬ್ಬಾಳಿಕೆಯವಿರುದ್ಧ ಗಾಂಧೀಜಿಗೆ ಬೆನ್ನೆಲುಬಾಗಿ ನಿಂತು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅವರು ವಹಿಸಿದ ಪ್ರಮುಖ ಪಾತ್ರ ಹಾಗೂ ರಾಷ್ಟ್ರದ ಏಕತೆಗೆ ಅವರಿಗಿದ್ದ ಬಲವಾದ ಬದ್ದತೆ, ದೇಶ ಎಂದೂ ಮರೆಯದ ವ್ಯಕ್ತಿತ್ವವಾಗಿದೆ ಎಂದರು.

ಅದೇ ರೀತಿ 15 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಕ್ರಾಂತಿಕಾರಿಕ ಯೋಜನೆಗಳ ಮೂಲಕ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣ ರಾದ ದಿ. ಇಂದಿರಾ ಗಾಂಧಿ ಅವರ ಪುಣ್ಯತಿಥಿಯಾದ ಇಂದು ಅವರನ್ನು ದೇಶ ನೆನಪಿಸಿ ಕೊಳ್ಳಬೇಕಾಗಿದೆ. ಬಡತನ ನಿರ್ಮೂಲನ ಹಾಗೂ ಸ್ವಾವಂಬನೆಯ ಬದುಕಿಗಾಗಿ, ಪಡಿತರ, ಮಾಸಾಶನ ಹಾಗೂ ಭೂಮಸೂದೆಯಂತಹ ಕ್ರಾಂತಿಕಾರಕ ಯೋಜನೆ ಗಳ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಾವಲಂಬನೆ ಬದುಕನ್ನು ಹೊಂದುವಂತೆ ಮಾಡಿದರು ಎಂದರು.

ಕುಂದಾಪುರ ಕಿಸಾನ್ ಘಟಕದ ಅಧ್ಯಕ್ಷ ಭಾಸ್ಕರ್ ಶೆಟ್ಟಿ ಕುಂದಾಪುರ, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಮಾಜಿ ಜಿಪಂ ಅಧ್ಯಕ್ಷ ಭುಜಂಗ ಶೆಟ್ಟಿ ಈ ಸಂದರ್ಭದಲ್ಲಿ ಮಾತನಾಡಿದರು.

ಸಮಾರಂಭದಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ಬಿ.ನರಸಿಂಹ ಮೂರ್ತಿ, ವೆರೋನಿಕಾ ಕರ್ನೇಲಿಯೋ, ಭಾಸ್ಕರ್ ರಾವ್ ಕಿದಿಯೂರು, ಹರೀಶ್ ಕಿಣಿ, ಶಬ್ಬೀರ್ ಅಹ್ಮದ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಹಬೀಬ್ ಆಲಿ, ರಮೇಶ್ ಕಾಂಚನ್, ರೋಶನಿ ಒಲಿವರ್, ಜ್ಯೋತಿ ಹೆಬ್ಬಾರ್, ಚಂದ್ರಿಕಾ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ಇಸ್ಮಾಯಿಲ್ ಆತ್ರಾಡಿ, ಉದ್ಯಾವರ ನಾಗೇಶ್ ಕುಮಾರ್, ವಿಶ್ವಾಸ್ ಅಮೀನ್, ಸೌರಭ್ ಬಲ್ಲಾಳ್, ಲೂಯಿಸ್ ಲೋಬೋ, ಜಯ ಪೂಜಾರಿ, ಹರೀಶ್ ಶೆಟ್ಟಿ ಪಾಂಗಳ, ಶಶಿಧರ ಶೆಟ್ಟಿ ಎಲ್ಲೂರು, ಯತೀಶ್ ಕರ್ಕೇರಾ, ಉಪೇಂದ್ರ ಮೆಂಡನ್, ಕೇಶವ ಕೋಟ್ಯಾನ್, ನಾಗಪ್ಪ ಕೊಟ್ಟಾರಿ ವಂಡ್ಸೆ, ಜಯ ಶೆಟ್ಟಿ ಬನ್ನಂಜೆ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ವೈ. ಸುಕುಮಾರ್ ವಂದಿಸಿ ಅಣ್ಯಯ್ಯ ಶೇರಿಗಾರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X