Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲವ್ ಜಿಹಾದ್ ನಿಲ್ಲಿಸದಿದ್ದರೆ ನಿಮ್ಮ...

ಲವ್ ಜಿಹಾದ್ ನಿಲ್ಲಿಸದಿದ್ದರೆ ನಿಮ್ಮ ಅಂತಿಮ ಯಾತ್ರೆ ಆರಂಭವಾಗಲಿದೆ ಎಂದ ಆದಿತ್ಯನಾಥ್ !

ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ತದ್ವಿರುದ್ಧವಾಗಿ ಉಲ್ಲೇಖಿಸಿದ ಉ. ಪ್ರದೇಶ ಸಿಎಂ

ವಾರ್ತಾಭಾರತಿವಾರ್ತಾಭಾರತಿ31 Oct 2020 8:16 PM IST
share
ಲವ್ ಜಿಹಾದ್ ನಿಲ್ಲಿಸದಿದ್ದರೆ ನಿಮ್ಮ ಅಂತಿಮ ಯಾತ್ರೆ ಆರಂಭವಾಗಲಿದೆ ಎಂದ ಆದಿತ್ಯನಾಥ್ !

ಹೊಸದಿಲ್ಲಿ: ಕೇವಲ ವಿವಾಹದ ಉದ್ದೇಶದ ಮತಾಂತರ ಅಸ್ವೀಕಾರಾರ್ಹ ಎಂದಿರುವ ಅಲಹಾಬಾದ್ ಹೈಕೋರ್ಟ್ ನ ಆದೇಶವನ್ನು ಉಲ್ಲೇಖಿಸಿರುವ ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ , "ಲವ್ ಜಿಹಾದ್ ಪ್ರಕರಣಗಳಿಗೆ ಕಡಿವಾಣ ಹಾಕಲು ಸರಕಾರ  ಕಠಿಣ ಕಾನೂನುಗಳನ್ನು ಜಾರಿಗೆ ತರಲಿದೆ" ಎಂದು ಹೇಳಿದ್ದಾರೆ.

ಉಪಚುನಾವಣೆಯ ಹಿನ್ನೆಲೆಯಲ್ಲಿ ಜೌನ್ ಪುರ್ ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, “ ಅಲಹಾಬಾದ್ ಹೈಕೋರ್ಟ್ ವಿವಾಹಕ್ಕಾಗಿ ಧಾರ್ಮಿಕ ಮತಾಂತರ ಅಗತ್ಯವಿಲ್ಲ ಎಂದಿದೆ. ಸರಕಾರ ಕೂಡ ಲವ್ ಜಿಹಾದ್ ಗೆ ಕಡಿವಾಣ ಹಾಕಲು ಕೆಲಸ ಮಾಡುತ್ತಿದೆ. ನಾವು ಕಾನೂನೊಂದನ್ನು ಜಾರಿಗೆ ತರಲಿದ್ದೇವೆ. ತಮ್ಮ ಗುರುತನ್ನು ಮರೆಮಾಚಿ ನಮ್ಮ ಸಹೋದರಿಯರ ಬದುಕಿನ ಜೊತೆ ಆಟವಾಡುವವರಿಗೆ ನಾನು ಎಚ್ಚರಿಕೆ ನೀಡುತ್ತಿದ್ದೇನೆ, ನೀವು ನಿಮ್ಮ ದಾರಿಯನ್ನು ಬಿಡದಿದ್ದರೆ ನಿಮ್ಮ ‘ರಾಮ್ ನಾಮ್ ಸತ್ಯ’ ಯಾತ್ರೆ (ಅಂತಿಮ ಯಾತ್ರೆಯ ಸಂದರ್ಭ ಹೇಳುವ ವಾಕ್ಯ) ಆರಂಭವಾಗುತ್ತದೆ” ಎಂದಿದ್ದಾರೆ.

“ಎಲ್ಲಾ ರಸ್ತೆಗಳ ಕ್ರಾಸಿಂಗ್ ಗಳಲ್ಲಿ ಲವ್ ಜಿಹಾದ್ ನಲ್ಲಿ ಭಾಗಿಯಾದವರ ಪೋಸ್ಟರ್ ಗಳನ್ನು ಹಾಕಲಾಗುವುದು” ಎಂದು ಆದಿತ್ಯನಾಥ್ ಹೇಳಿದ್ದಾರೆ.

ಆದಿತ್ಯನಾಥ್ ಮುಖ್ಯಮಂತ್ರಿಯಾಗಿರುವ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರಗಳು ದಿನೇ ದಿನೇ ಹೆಚ್ಚುತ್ತಿದೆ. ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎನ್ನುವ ಆರೋಪಗಳ ನಡುವೆ ಆದಿತ್ಯನಾಥ್ ಈ ಹೇಳಿಕೆ ನೀಡಿದ್ದಾರೆ. ಇತ್ತೀಚೆಗಷ್ಟೇ ಇಲ್ಲಿನ ಹತ್ರಸ್ ನಲ್ಲಿ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ, ಹತ್ಯೆ ಮತ್ತು ಸಂತ್ರಸ್ತೆಯನ್ನು ಮಧ್ಯ ರಾತ್ರಿ ಪೊಲೀಸರು ಸುಟ್ಟು ಹಾಕಿದ ಘಟನೆ ದೇಶಾದ್ಯಂತ ಆಕ್ರೋಶ ಸೃಷ್ಟಿಸಿತ್ತು.

ಅಲಹಾಬಾದ್ ಹೈಕೋರ್ಟ್ ಹೇಳಿದ್ದೇನು?

ಕೇವಲ ವಿವಾಹದ ಉದ್ದೇಶದಿಂದ ನಡೆಯುವ ಧಾರ್ಮಿಕ ಮತಾಂತರ ಸ್ವೀಕಾರಾರ್ಹವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಇಂದು ಹೇಳಿದೆ.

ವಿವಾಹವಾದ ಮೂರು ತಿಂಗಳ ನಂತರ ರಕ್ಷಣೆ ಕೋರಿ ದಂಪತಿಯೊಂದು ಸಲ್ಲಿಸಿದ್ದ ಅಪೀಲಿನ ಕುರಿತಂತೆ ಹಸ್ತಕ್ಷೇಪ ನಡೆಸಲು ನಿರಾಕರಿಸಿದ ಹೈಕೋರ್ಟ್ ತನ್ನ ಈ ಹಿಂದಿನ ಆದೇಶವೊಂದನ್ನೂ ಉಲ್ಲೇಖಿಸಿದೆ. ಅಪೀಲು ಸಲ್ಲಿಸಿದ್ದ ಮಹಿಳೆ ಮೂಲತಃ ಮುಸ್ಲಿಂ ಆಗಿದ್ದರೂ  ಹಿಂದು ಯುವಕನೊಂದಿಗೆ ಆಕೆಯ ವಿವಾಹ ನಡೆಯುವುದಕ್ಕಿಂತ ಒಂದು ತಿಂಗಳ ಮುಂಚೆ ಆಕೆ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಳು.

ಬಲವಂತದ ಕ್ರಮಗಳ ಮೂಲಕ ಸಂಬಂಧಿಕರು ತಮ್ಮ ವೈವಾಹಿಕ ಜೀವನದಲ್ಲಿ ಹಸ್ತಕ್ಷೇಪ ನಡೆಸಬಾರದೆಂದು ಕೋರ್ಟ್ ಆದೇಶಿಸಬೇಕೆಂದು ಕೋರಿ ದಂಪತಿ ಸಲ್ಲಿಸಿದ್ದ ಅಪೀಲನ್ನು ನ್ಯಾಯಾಲಯದ ಜಸ್ಟಿಸ್ ಮಹೇಶ್ ಚಂದ್ರ ತ್ರಿಪಾಠಿ ಅವರ ನೇತೃತ್ವದ ಏಕಸದಸ್ಯ ಪೀಠ ತನ್ನ ಸೆಪ್ಟೆಂಬರ್ 23ರ ಆದೇಶದಲ್ಲಿ ತಿರಸ್ಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X